ಕನ್ನಡಪ್ರಭ ವಾರ್ತೆ ಹನೂರು
ಬಳಿಕ ಅವರು ಮಾತನಾಡಿ, ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಂತೆ ಶಿಥಿಲಗೊಂಡಂಥ ಕಟ್ಟಡಗಳಲ್ಲಿ ಶಾಲಾ ಮಕ್ಕಳು ಪಾಠ- ಪ್ರವಚನ ಕೇಳಬೇಕಾದಂತಹ ಪರಿಸ್ಥಿತಿ ಮನಗಂಡು ಕೋಟ್ಯಂತರ ರು. ಖರ್ಚು ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಈ ನೂತನ ಕಟ್ಟಡವು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ದಾರಿ ತೋರಿಸುವ ಕೇಂದ್ರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ ಮಾತನಾಡಿ, 1969ರಲ್ಲಿ ಕೇವಲ 30 ಮಕ್ಕಳೊಂದಿಗೆ ಆರಂಭವಾದ ಈ ವಸತಿ ಶಾಲೆ ಇಂದು ಮಹತ್ವದ ಹಂತಕ್ಕೆ ತಲುಪಿದೆ ಎಂದು ತಿಳಿಸಿದರು. ಈ ಶಾಲೆಯ ಅಭಿವೃದ್ಧಿಗೆ ಇದುವರೆಗೂ ಎಲ್ಲ ಜನಪ್ರತಿನಿಧಿಗಳ ಶ್ರಮ ಕಾರಣವಾಗಿದೆ ಎಂದು ಹೇಳಿದರು.ಪ್ರಸ್ತುತ ಇಲ್ಲಿ 68 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸುಮಾರು 23 ತಿಂಗಳ ಅವಧಿಯಲ್ಲಿ 3.82 ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.
ಇಲ್ಲಿನ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.