ಪರಿಸರ ರಕ್ಷಿಸದಿದ್ದರೆ ಮನುಕುಲ ಉಳಿಯದು: ವಲಯ ಅರಣ್ಯಾಧಿಕಾರಿ ಶಿಲ್ಪಾ ವಸಂತ್

KannadaprabhaNewsNetwork | Published : Jun 15, 2024 1:04 AM

ಸಾರಾಂಶ

ಪರಿಸರ ಸಂರಕ್ಷಣೆಯಿಂದ ಮಾತ್ರ ಮಾನವ ಸಂಕುಲ ಉಳಿಯಲು ಸಾಧ್ಯ ಎಂದು ವಲಯ ಅರಣ್ಯಾಧಿಕಾರಿ ಶಿಲ್ಪಾ ವಸಂತ್ ಹೇಳಿದರು. ಸಕಲೇಶಪುರದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರ ದಿನಾಚರಣೆ

ಸಕಲೇಶಪುರ: ಪರಿಸರ ಸಂರಕ್ಷಣೆಯಿಂದ ಮಾತ್ರ ಮಾನವ ಸಂಕುಲ ಉಳಿಯಲು ಸಾಧ್ಯ ಎಂದು ವಲಯ ಅರಣ್ಯಾಧಿಕಾರಿ ಶಿಲ್ಪಾ ವಸಂತ್ ಹೇಳಿದರು.

ತಾಲೂಕಿನ ಬಾಗೆ ಜೆಎಸ್‌ಎಸ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ರಸಗೊಬ್ಬರ ಹಾಗೂ ಔಷಧಿಗಳನ್ನು ಬಳಸಲಾಗುತ್ತಿದ್ದು ಇದರಿಂದ ಭೂಮಿಯ ಫಲವತ್ತತೆ ಹಾಳಾಗುತ್ತಿದೆ. ಅಲ್ಲದೆ ಅತಿಯಾದ ಪ್ಲಾಸ್ಟಿಕ್ ಹಾಗೂ ಇ-ತ್ಯಾಜ್ಯಗಳಂತಹ ಕೊಳೆಯದ ತ್ಯಾಜ್ಯಗಳಿಂದ ಪರಿಸರ ನಾಶ ಹೊಂದುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಕೆಲವು ತ್ಯಾಜ್ಯಗಳನ್ನು ಸಾವಯವ ಗೊಬ್ಬರವಾಗಿ ಬಳಸಬೇಕಾಗಿದೆ. ಸಸ್ಯಶ್ಯಾಮಲಗಳಂತಹ ಪರಿಸರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಣ್ಯಗಳನ್ನು ಹೆಚ್ಚಿಸಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.

ಶಾಲೆಯ ಪ್ರಾಂಶುಪಾಲ ಬಿ.ಮಧುಕುಮಾರ್ ಮಾತನಾಡಿ, ‘ನಾವು ಪರಿಸರವನ್ನು ಕ್ರಮಬದ್ಧವಾಗಿ ಕಾಪಾಡಿಕೊಳ್ಳದಿದ್ದರೆ ನಮ್ಮ ಭವಿಷ್ಯಕ್ಕೆ ಪ್ರಕೃತಿ ವಿಕೋಪಗಳಿಂದ ತೊಂದರೆಯಾಗುತ್ತದೆ. ನಾವು ಪರಿಸರದಲ್ಲಿನ ಸಂಪನ್ಮೂಲಗಳನ್ನು ರಕ್ಷಿಸಬೇಕು. ವಾಯು, ಜಲ ಮಾಲಿನ್ಯಗಳು ಪರಿಸರವನ್ನು ನಾಶಮಾಡುತ್ತಿವೆ. ಮನುಷ್ಯ ಹಾಗೂ ಪರಿಸರದ ನಡುವಿನ ಸಂಬಂಧ ಇತ್ತೀಚೆಗೆ ಹದಗೆಟ್ಟಿದ್ದು ಆಧುನಿಕ ಜೀವನದಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಪೃಕೃತಿಯ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕು’ ಎಂದು ಹೇಳಿದರು.

ಶಾಲೆಯ ವಿವಿಧ ತಂಡಗಳ ನಾಯಕ, ಉಪ ನಾಯಕರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ. ಅವರಿಗೆ ಶಾಲೆಯ ಶಿಸ್ತನ್ನು ಕಾಪಾಡಬೇಕು, ಶಿಕ್ಷಕರ ಮಾರ್ಗದರ್ಶನದ ಜತೆಗೆ ಸಕರಾತ್ಮಕ ಯೋಚನೆಗಳಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಿ ಎಂದು ಹೇಳಿದರು.

ಕಲಾ ಶಿಕ್ಷಕರಾದ ಶ್ರೀಧರ್ ನಿರ್ದೇಶಿಸಿ, ನಿರ್ಮಿಸಿದ ‘ಉಳಿಸೋಣ ಬನ್ನಿ’ ಎಂಬ ಪರಿಸರ ಸಂರಕ್ಷಣೆಯ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಕುರಿತು ‘ಗ್ರೀಡಿ ಹ್ಯೂಮನ್’ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.

ಈ ಸಂರ್ಧಭದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Share this article