ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಕ ಮಾಡಿ ಎಐಸಿಸಿಯಿಂದ ಆದೇಶ ಹೊರಡಿಸಿದೆ.
ಬೀದರ್: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಕ ಮಾಡಿ ಎಐಸಿಸಿಯಿಂದ ಆದೇಶ ಹೊರಡಿಸಿದೆ.
ಈ ಕುರಿತು ಬುಧವಾರ ಎಐಸಿಸಿಯ ವೇಣುಗೋಪಾಲ ಅವರು ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಿದ್ದು, ಅದರಲ್ಲಿ ಬೀದರ್ ಜಿಲ್ಲೆಗೆ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಕ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸ್ಥಾನಕ್ಕಾಗಿ ಪಕ್ಷದ ಅನೇಕ ನಾಯಕರು ಪೈಪೋಟಿ ನಡೆಸಿದ್ದರು. ಇದರ ಮಧ್ಯೆಯೇ ಎಐಸಿಸಿ ವೀಕ್ಷಕರಾಗಿ ರಾಜೇಶ್ ಲಿಲೋಠಿಯಾ ಅವರ ತಂಡವು ಕಳೆದ ಜುಲೈ ಕೊನೆಯ ವಾರದಲ್ಲಿ ಬೀದರ್‌ಗೆ ಆಗಮಿಸಿ, ತಾಲೂಕುವಾರು ಸಭೆ ನಡೆಸಿ ಮಾಹಿತಿ ಸಂಗ್ರಹಿಸಿತ್ತು. ವೀಕ್ಷಕರ ಶಿಫಾರಸ್ಸಿನ ಮೇರೆಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ.
ಬಸವರಾಜ ಜಾಬಶೆಟ್ಟಿ ಅವರು ಕಳೆದ 9 ವರ್ಷಗಳಿಂದ ಬೀದರ್ ಜಿಲ್ಲಾ ಕಾಂಗ್ರೆಸ್‌ಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಈಗ ಅಬ್ದುಲ್ ಮನ್ನಾನ್ ಸೇಠ್ ಅವರ ಹೆಗಲಿಗೆ ಹಾಕಿದೆ. ಅಬ್ದುಲ್ ಮನ್ನಾನ್ ಸೇಠ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.