ಮಣ್ಣೆತ್ತಿನ ಅಮಾವಾಸ್ಯೆ: ಬಸವಣ್ಣನಿಗೆ ಹಾವೇರಿ ಜಿಲ್ಲೆಯಾದ್ಯಂತ ಪೂಜೆ

KannadaprabhaNewsNetwork |  
Published : Jul 06, 2024, 12:54 AM IST
ಫೋಟೊ ಶೀರ್ಷಿಕೆ: 5ಹೆಚ್‌ವಿಆರ್14ಹಾವೇರಿ ಜಿಲ್ಲೆಯಲ್ಲಿ ಮಣ್ಣಿನಿಂದ ತಯಾರಿಸಿದ ಎತ್ತುಗಳಿಗೆ ಪೂಜೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಮುಂಗಾರು ಹಂಗಾಮಿನ ಮೊದಲ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆಯನ್ನು ಜಿಲ್ಲೆಯಾದ್ಯಂತ ರೈತರು ಶುಕ್ರವಾರ ಸಾಂಪ್ರದಾಯಕವಾಗಿ ಆಚರಿಸಿದರು.

ಹಾವೇರಿ: ಮುಂಗಾರು ಹಂಗಾಮಿನ ಮೊದಲ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆಯನ್ನು ಜಿಲ್ಲೆಯಾದ್ಯಂತ ರೈತರು ಶುಕ್ರವಾರ ಸಾಂಪ್ರದಾಯಕವಾಗಿ ಆಚರಿಸಿದರು. ಪ್ರತಿವರ್ಷ ಗ್ರೀಷ್ಮ ಋತುವಿನ ಜೇಷ್ಠ ಬಹುಳ ದಿನದಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಮಾಡಲಾಗುತ್ತಿದೆ. ರೈತನ ಹೆಗಲಿಗೆ ಜತೆಯಾಗಿ ಕುಟುಂಬದ ಸದಸ್ಯನಾಗಿ ಬಾಳುವ ಎತ್ತುಗಳಿಗೆ ಸ್ನಾನ ಮಾಡಿಸಿ ಪೂಜೆ ಸಲ್ಲಿಸಲಾಯಿತು. ಶುಕ್ರವಾರ ಬೆಳಗ್ಗೆ ಹೊಲ ಹಾಗೂ ಹುತ್ತದ ಮಣ್ಣು ತಂದು ಎತ್ತಿನ ಮೂರ್ತಿ ತಯಾರಿಸಿ ಅವುಗಳಿಗೆ ಸುಣ್ಣಬಣ್ಣ ಬಳಿದು ಸಿಂಗರಿಸಿ ದೇವರ ಮನೆಯಲ್ಲಿಟ್ಟು ಪೂಜಿಸಿದರು. ಮಕ್ಕಳು ಸಹ ಮಣ್ಣಿನಿಂದ ಎತ್ತಿನ ಮೂರ್ತಿಗಳನ್ನು ತಯಾರಿಸಿ ಸಂತಸ ಪಟ್ಟರು. ಮಹಿಳೆಯರು ಮನೆ ದೇವರ ಜಗಲಿ ಮೇಲೆ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರ ಮಾಡಿ ವಿವಿಧ ಬಗೆಯ ಬೆಲ್ಲದ ಹೂರಣದ ಕರಿಗಡುಬು, ಬೆಲ್ಲದಬ್ಯಾಳಿ, ಚಪಾತಿ, ಸೆಂಡಿಗೆ, ಬದನೆಕಾಯಿ ಪಲ್ಲೆ ಸೇರಿದಂತೆ ವಿವಿಧ ನೈವೇದ್ಯ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರೆಲ್ಲೂ ಒಟ್ಟಾಗಿ ಕುಳಿತು ಭೋಜನ ಸವಿಯುವ ಮೂಲಕ ಮಣ್ಣೆತ್ತಿನ ಅಮಾವಾಸ್ಯೆಯನ್ನು ಆಚರಿಸಿದರು.ನಗರ ಪ್ರದೇಶದಲ್ಲೂ ಜನರು ಮಣ್ಣಿನ ಬಸವಣ್ಣ ಮೂರ್ತಿ ಖರೀದಿಸಿ ಮನೆಗೆ ತಂದು ಪೂಜಿಸಿದರು. ಮಣ್ಣಿನ ಬಸವ ಮೂರ್ತಿಗಳು ನಗರದ ಕುಂಬಾರ ಓಣಿ, ಎಂ.ಜಿ. ರೋಡ ಸೇರಿದಂತೆ ವಿವಿಧ ಭಾಗಗಳಲ್ಲಿ ಜೋಡಿಗೆ 15 ರಿಂದ 40 ರು.ಗಳಿಗೆ ಮಾರಾಟ ಮಾಡಲಾಯಿತು. ಹಬ್ಬದ ಮರುದಿನ ಮಣ್ಣಿನ ಮೂರ್ತಿಗಳನ್ನು ಸುತ್ತಮುತ್ತಲಿನ ಕೆರೆ ಅಥವಾ ಬಾವಿಗಳಲ್ಲಿ ವಿಸರ್ಜಿಸಲಾಗುತ್ತದೆ. ಕೆಲವರು ಬಸವಣ್ಣನ ಮೂರ್ತಿಗಳನ್ನು ಮುಂದಿನ ಮಣ್ಣೆತ್ತಿನ ಅಮವಾಸ್ಯೆ ವರೆಗೂ ಮನೆಯಲ್ಲಿಟ್ಟು ಪೂಜಿಸುತ್ತಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!