ಹೊನ್ನಾಳಿ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮನೋಜ್

KannadaprabhaNewsNetwork |  
Published : Feb 10, 2025, 01:46 AM IST
ಹೊನ್ನಾಳಿ ಫೋಟೋ 9ಎಚ್.ಎಲ್.ಐ1.ತಾಲ್ಲೂಕು ಯುವಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಭರ್ಜರಿ ಮತಗಳನ್ನು ಪಡೆದು ಚುನಾಯಿತರಾದ ಮನೋಜ್ ವಾಲಜ್ಜಿ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು.  | Kannada Prabha

ಸಾರಾಂಶ

ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಳೆದ ಆಗಸ್ಟ್‌ನಲ್ಲಿ ಆನ್‌ಲೈನ್ ಮೂಲಕ ನಡೆದಿದ್ದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಒಟ್ಟು 10396 ಮತಗಳ ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ ಎಂದು ಮನೋಜ್ ವಾಲಜ್ಜಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಳೆದ ಆಗಸ್ಟ್‌ನಲ್ಲಿ ಆನ್‌ಲೈನ್ ಮೂಲಕ ನಡೆದಿದ್ದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಒಟ್ಟು 10396 ಮತಗಳ ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ ಎಂದು ಮನೋಜ್ ವಾಲಜ್ಜಿ ಹೇಳಿದರು.

ಶನಿವಾರ ಸಂಜೆ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಅವರು ಮಾತನಾಡಿದರು. ಪ್ರತಿಸ್ಪರ್ಧಿ ಗಣೇಶ್ ಮದಕರಿ 2500 ಮತಗಳನ್ನು ಪಡೆದು ಉಪಾಧ್ಯಕ್ಷ, ಶ್ರೀಧರ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಾಳಿಯ ಬಾಹುಬಲಿ, ಹೊನ್ನಾಳಿಯ ಎಚ್.ಎ. ರಂಜಿತ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದರು.

ಯುವ ಕಾಂಗ್ರೆಸ್ ಹೊನ್ನಾಳಿ ಬ್ಲಾಕ್ ಅಧ್ಯಕ್ಷರಾಗಿ ಬಿ.ಆರ್. ವಿಜಯ ಕತ್ತಿಗೆ 4314 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, ಸಾಸ್ವೇಹಳ್ಳಿ ಬ್ಲಾಕ್ ಅಧ್ಯಕ್ಷರಾಗಿ ಎಂ. ಸಚಿನ್ 5647 ಮತ ಪಡೆದು ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಬಂತಿ 8648 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ ಎಂದರು.

ಚುನಾವಣೆ ಮೂಲಕ ಆಯ್ಕೆಯಾದ ಎಲ್ಲ ಪದಾಧಿಕಾರಿಗಳು ಹಾಗೂ ತಮ್ಮನ್ನು ಆಯ್ಕೆ ಮಾಡಲು ಸಹಕಾರ ನೀಡಿದ ಶಾಸಕರಿಗೂ, ಜಿಲ್ಲಾ ಕಾಂಗ್ರೆಸ್ ಘಟಕಕ್ಕೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬಲಪಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು. ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಜಿ. ಪ್ರಕಾಶ್, ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ್ ಬಣ್ಣಜ್ಜಿ, ನೂತನ ಪದಾಧಿಕಾರಿಗಳಾದ ಎಂ.ಸಚಿನ್, ಬಿ.ಆರ್. ವಿಜಯ್ ಹಾಗೂ ನೂರಾರು ಯುವಕರು ಇದ್ದರು.

- - - -9ಎಚ್.ಎಲ್.ಐ1:

ಹೊನ್ನಾಳಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರ್ಜರಿ ಮತಗಳ ಪಡೆದು ಚುನಾಯಿತರಾದ ಮನೋಜ್ ವಾಲಜ್ಜಿ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ