ಕನ್ನಡಪ್ರಭ ವಾರ್ತೆ ಕನಕಗಿರಿ
ಸೋಮವಾರ ಪತ್ರಕರ್ತರ ಜತೆ ಮಾತನಾಡಿ, ಗ್ರಾಮಸಭೆಯಲ್ಲಿ ಅನುಮೋದಿಸಿದ ವಾರ್ಷಿಕ ಕ್ರಿಯಾ ಯೋಜನೆಯನ್ನು ಡಿ. 5ರೊಳಗೆ ತಾಪಂಗೆ ಸಲ್ಲಿಸಬೇಕು. ಎಲ್ಲ ಗ್ರಾಮ ಪಂಚಾಯಿತಿಗಳ ಕ್ರೋಢೀಕೃತ ತಾಲೂಕು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಅನುಮೋದಿಸಿ ಡಿ. 20ರೊಳಗೆ ಜಿಪಂ ಸಿಇಒ ಅನುಮೋದನೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು. ಅ. 2ರಿಂದ 31ರ ವರೆಗೆ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಮನರೇಗಾ ಯೋಜನೆಯ ಸಬಲತೆಗೆ ತಾಪಂ ಮುಂದಾಗಿದೆ. ಪ್ರತಿ ಮನೆಗೂ ಭೇಟಿ ನೀಡುವ ಗ್ರಾಪಂ ಸಿಬ್ಬಂದಿಯು ಯೋಜನೆಯ ಪರಿಪೂರ್ಣ ಮಾಹಿತಿ ನೀಡಲಿದ್ದು, ಈ ವೇಳೆ ವೈಯಕ್ತಿಕ ಕಾಮಗಾರಿಗಳ ಬೇಡಿಕೆ ಸಲ್ಲಿಸಬೇಕಿದೆ.
ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ನೂರು ದಿನ ಕೆಲಸ ಖಾತರಿಯಾಗಿದ್ದು, ಪ್ರತಿ ದಿನಕ್ಕೆ ₹349 ಕೂಲಿ ನಿಗದಿಪಡಿಸಲಾಗಿದೆ ಎಂದರು.ಪ್ರತಿ ಮನೆಗೂ ಭೇಟಿ ನೀಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಅರ್ಜಿ ಸ್ವೀಕರಿಸಲು ಅಂಗನವಾಡಿ, ಗ್ರಂಥಾಲಯ, ನ್ಯಾಯಬೆಲೆ ಅಂಗಡಿ ಮತ್ತು ಹಾಲಿನ ಕೇಂದ್ರಗಳಲ್ಲಿ ಬೇಡಿಕೆ ಪೆಟ್ಟಿಗೆ ಸ್ಥಾಪಿಸಿ ಪ್ರತಿದಿನ ಸ್ವೀಕೃತವಾದ ಬೇಡಿಕೆಯನ್ನು ಅ. 31ರ ವರೆಗೆ ಅರ್ಜಿ ಸಂಗ್ರಹಿಸಲಾಗುವುದು. ಕಾಮಗಾರಿ ಬೇಡಿಕೆ ಪೆಟ್ಟಿಗೆ ಮೂಲಕ ಸ್ವೀಕರಿಸಿದ ಅರ್ಜಿ ಪರಿಶೀಲಿಸಿ, ವಾರ್ಡ್ ಸಭೆಗಳಲ್ಲಿ ಕಾಮಗಾರಿ ಪಟ್ಟಿ ತಯಾರಿಸಿ ಅನುಮೋದಿಸಿ, ಗ್ರಾಮಸಭೆಗೆ ಸಲ್ಲಿಸುವುದು, ನ. 15ರೊಳಗೆ ವಾರ್ಡ್ ಸಭೆ ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಮನೆಯೊಂದರಲ್ಲಿ ಜು. ೨೦ರಿಂದ ೨೪ನೇ ತಾರೀಕಿನೊಳಗೆ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಸ್ಥಳೀಯ ಪೊಲೀಸರು, ಬಂಧಿತನಿಂದ ₹೯.೧೦ ಲಕ್ಷ ಬೆಲೆಯ ೧೩೦ ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ಇಲಾಖೆಯು ಹೆಚ್ಚುವರಿ ಪೊಲೀಸ್ ಅಧಿಕ್ಷಕ ಹೇಮಂತ್‌ಕುಮಾರ್ ಆರ್., ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಪಿಐ ಎಂ.ಡಿ. ಫೈಜುಲ್ಲಾ ನೇತೃತ್ವದಲ್ಲಿ ಪರಶುರಾಮ, ಬಸವರಾಜ, ನಿಂಗಪ್ಪ, ಶರೀಫ್ ಸಾಬ್, ಶ್ರೀಕಾಂತ ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು.ಈ ತಂಡವು ಆರೋಪಿತನನ್ನು ಬಂಧಿಸಿ ವಿಚಾರಿಸಲಾಗಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯಿಂದ ೧೩೦ ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.