ಕೇಂದ್ರ ಸರ್ಕಾರದಿಂದ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ: ಶಾಸಕ ಅಶೋಕ್ ರೈ

KannadaprabhaNewsNetwork |  
Published : Feb 12, 2026, 03:15 AM IST
ಫೋಟೋ: ೧೦ಪಿಟಿಆರ್-ಜಾಥಾಪುತ್ತೂರಿನ ಕಾವು ಎಂಬಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಗೆ ಚಾಲನೆ

ಪುತ್ತೂರು : ಬಡವರ ಕಲ್ಯಾಣಕ್ಕಾಗಿ ಮನ್‌ರೇಗಾ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿತ್ತು. ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ. ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ. ದೇಶದ ಕಟ್ಟಡ ಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಆರೋಪಿಸಿದರು.

ಅವರು ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರದ ಬಿಜೆಪಿ ಸರ್ಕಾರ ನರೇಗಾ ಯೋಜನೆಗೆ ಕತ್ತರಿಹಾಕುವ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ಅಳಿಸಿದ್ದು ಮಾತ್ರವಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ. ಜಿಲ್ಲೆಗೆ ಇದುವರೆಗೆ ನರೇಗಾ ಯೋಜನೆಯ ಮೂಲಕ ರು.260 ಕೋಟಿ ಕೂಲಿ ನೀಡಲಾಗಿದೆ. ಕೇಂದ್ರದ ಹೊಸ ಕಾನೂನಿನ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಿಂದ ಯಾವುದೇ ಕೂಲಿ, ಕಾಮಗಾರಿ ನಡೆಯುವುದು ಸಾಧ್ಯವಿಲ್ಲ. ಕೇಂದ್ರದ ನಿರ್ಧಾರದ ವಿರುದ್ಧ ಪಕ್ಷಾತೀತವಾಗಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಬಡವರ ಪರ ಕಾಂಗ್ರೆಸ್ ಮಾತ್ರ ಎಂಬುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದು ಶಾಸಕರು ಹೇಳಿದರು. ಪಾದಯಾತ್ರೆಯು ಕಾವಿನಿಂದ ಕುಂಬ್ರ ತನಕ ನಡೆಯಿತು. ನೂರಾರು ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಪಕ್ಷದ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಎಂ ಎಸ್ ಮಹಮ್ಮದ್ , ಇನಾಯತ್ ಆಲಿ, ಐವನ್ ಡಿಸೋಜಾ, ಬಿ ರಮಾನಾಥ ರೈ, ಕೃಷ್ಣ ಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು ಟಿ ತೌಸೀಪ್, ನಿಹಾಲ್ ಪಿ ಶೆಟ್ಟಿ, ಅನ್ವರ್ ಖಾಸಿಂ, ಶ್ರೀ ಪ್ರಸಾದ್ ಪಾಣಾಜೆ, ಚಂದ್ರಪ್ರಭಾ ಗೌಡ ಪುತ್ತೂರು , ಫಾರೂಕ್ ಪೆರ್ನೆ, ಅಖಿಲ್ ಕಲ್ಲಾರೆ ಸಹಿತ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪುರ: ಐಎಂಜೆಐಎಸ್‌ಸಿ ಹಳೆವಿದ್ಯಾರ್ಥಿ ಘಟಕ ಉದ್ಘಾಟನೆ
ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳ: ಜೆರಾಲ್ಡ್ ಲೋಬೊ