ಮಳೆ ಕೊರತೆ ಹಿನ್ನೆಲೆ ರೈತರ ಕೃಷಿ ಸಾಲ ಮನ್ನಾಗೆ ಒತ್ತಾಯ

KannadaprabhaNewsNetwork |  
Published : Jul 16, 2026, 03:15 AM IST
ಪ್ರಭಾಕರ ಪ್ರಭು | Kannada Prabha

ಸಾರಾಂಶ

ರಾಜ್ಯದಲ್ಲಿ 2026–27ನೇ ಆರ್ಥಿಕ ವರ್ಷದ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿರುವ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದರ ಜೊತೆಗೆ ಪ್ರಾಥಮಿಕ ಸಹಕಾರ ಸಂಘಗಳಿಂದ ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ

ಬಂಟ್ವಾಳ: ರಾಜ್ಯದಲ್ಲಿ 2026–27ನೇ ಆರ್ಥಿಕ ವರ್ಷದ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿರುವ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದರ ಜೊತೆಗೆ ಪ್ರಾಥಮಿಕ ಸಹಕಾರ ಸಂಘಗಳಿಂದ ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಮಳೆಯಾಶ್ರಿತ ಬೆಟ್ಟು ಗದ್ದೆಗಳಲ್ಲಿ ಇನ್ನೂ ಬಿತ್ತನೆ ಕಾರ್ಯ ಆರಂಭವಾಗಿಲ್ಲ. ಕೆಲ ರೈತರು ಕೊಳವೆಬಾವಿ ಹಾಗೂ ಕೆರೆಗಳ ನೀರನ್ನು ಪಂಪ್ ಮೂಲಕ ಹರಿಸಿ ಬಿತ್ತನೆ ನಡೆಸಿದ್ದರೂ, ಇದೀಗ ಕೆರೆಗಳಲ್ಲಿಯೂ ನೀರು ಬತ್ತಿರುವುದರಿಂದ ನಾಟಿ ಮಾಡಿದ ಭತ್ತದ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯಿಂದ ತಕ್ಷಣವೇ ವಾಸ್ತವ ಪರಿಸ್ಥಿತಿಯ ವರದಿ ಪಡೆದು, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು. ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರು ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರಭು ಸರ್ಕಾರವನ್ನು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಳುವಾಯಿ ಘಟಕಕ್ಕೆ ಮುರಳಿಧರ್ ಎಸ್. ಅಧ್ಯಕ್ಷರಾಗಿ ಆಯ್ಕೆ
ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ