ಮಂತ್ರಾಲಯ-ಉತ್ತರಾದಿ ಮಠಾಧೀಶರ ಸಮಾಗಮ

KannadaprabhaNewsNetwork |  
Published : Jun 14, 2025, 01:11 AM ISTUpdated : Jun 14, 2025, 07:03 AM IST
44456 | Kannada Prabha

ಸಾರಾಂಶ

ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಪದ್ಮನಾಭ ತೀರ್ಥರ ಆರಾಧನೆ ಕುರಿತು ಎರಡು ಮಠಗಳ ನಡುವೆ ಹಲವು ದಶಕಗಳಿಂದ ವಿವಾದ ಇತ್ತು. ಪದ್ಮನಾಭ ತೀರ್ಥರ ಆರಾಧನೆ ವಿವಾದ ಹಲವು ಬಾರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಗಂಗಾವತಿ:  ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ ಹಿನ್ನಲೆಯಲ್ಲಿ ಮಂತ್ರಾಲಯ ಮತ್ತು ಉತ್ತರಾದಿ ಮಠಾಧೀಶರ ನಡುವೆ ಚೆನ್ನೈನಲ್ಲಿ ಸಂಧಾನ ಸಭೆ ನಡೆದಿದ್ದು ಉಭಯ ಶ್ರೀಗಳ ಸಮಾಗಮ ನಡೆದಿದೆ.

ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಪದ್ಮನಾಭ ತೀರ್ಥರ ಆರಾಧನೆ ಕುರಿತು ಎರಡು ಮಠಗಳ ನಡುವೆ ಹಲವು ದಶಕಗಳಿಂದ ವಿವಾದ ಇತ್ತು. ಪದ್ಮನಾಭ ತೀರ್ಥರ ಆರಾಧನೆ ವಿವಾದ ಹಲವು ಬಾರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಪ್ರತಿ ವರ್ಷ ಸುಪ್ರೀಂಕೋರ್ಟ್ ಆದೇಶದ ಮೆರೆಗೆ ಪೂಜೆ ನೆರವೇರಿಸಲಾಗುತ್ತಿತ್ತು. ಈಗ ಸುಪ್ರೀಂ ಕೋರ್ಟ್ ಪೂಜಾ‌ ವಿವಾದವನ್ನು ಮಾತುಕತೆ ಮೂಲಕ‌ ಬಗೆಹರಿಸಿಕೊಳ್ಳಲು ಸಲಹೆ ನೀಡಿದ್ದರಿಂದ ಉಭಯ ಶ್ರೀಗಳಿಂದ ಸಂಧಾನ ಸಭೆ ನಡೆದು ಶ್ರೀಗಳು ಸಮಾಗಮಗೊಂಡರು.

ಉತ್ತರಾದಿಮಠದ ಸತ್ಯಾತ್ಮ ತೀರ್ಥರು, ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳು ಮಾತುಕತೆ ನಡೆಸಿ ವಿವಾದ ಬಗೆಹರಿಸಿಕೊಂಡಿದ್ದಾರೆ. ಇದರಿಂದ ಉಭಯ ಮಠಗಳ ಭಕ್ತರು ಹರ್ಷಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''