ಕಸಾಪ ಬೆಳವಣಿಗೆಗೆ ಅನೇಕ ಮಹಾನ್ ಚೇತನಗಳ ಕೊಡುಗೆಯಿದೆ

KannadaprabhaNewsNetwork |  
Published : May 07, 2026, 02:15 AM IST
ನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗ ಅನೇಕ ಮಹಾನ್ ಚೇತನಗಳ ಕೊಡುಗೆಯಿದೆ : ಎಚ್.ಬಿ. ಮದನಗೌಡ. | Kannada Prabha

ಸಾರಾಂಶ

ಪರಿಷತ್ತಿನ ಮೊದಲ ಅಧ್ಯಕ್ಷರಾಗಿ ಎಚ್. ಬಿ. ನಂಜುಂಡಯ್ಯ ಆಯ್ಕೆಯಾಗಿದ್ದರೂ, ಇದರ ಸ್ಥಾಪನೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಅಂದಿನ ದಿವಾನರಾದ ಸರ್ ಎಂ. ವಿಶ್ವೇಶ್ವರಯ್ಯ ಅವರ ಸಹಕಾರ ಅತ್ಯಂತ ಮಹತ್ವದ್ದಾಗಿತ್ತು. ಇಂತಹ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ಹೇಳಿದರು. ಬಸವ ಜಯಂತಿಯ ಮಹತ್ವವನ್ನು ಉಲ್ಲೇಖಿಸಿದ ಅವರು, ಬಸವಣ್ಣನವರ ತತ್ವ-ಆದರ್ಶಗಳು ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಎಲ್ಲಾ ಭಾಷೆಗಳಿಗಿಂತ ಕನ್ನಡ ಭಾಷೆ ಅತ್ಯಂತ ಶ್ರೀಮಂತವಾಗಿದ್ದು, ಎಂಟು ಜ್ಞಾನಪೀಠ ಪುರಸ್ಕಾರಗಳನ್ನು ಪಡೆದಿರುವ ಏಕೈಕ ಭಾಷೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅನೇಕ ಮಹಾನ್ ಚೇತನರ ಕೊಡುಗೆಯಿಂದ ಕನ್ನಡ ಸಾಹಿತ್ಯ ಪರಿಷತ್ತು ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್. ಪಿ. ಮದನ್ ಗೌಡ ಅಭಿಪ್ರಾಯಪಟ್ಟರು.

ನಗರದ ಸ್ಕೌಟ್ಸ್‌ ಅಂಡ್ ಗೈಡ್ಸ್ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಲಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ೧೯೧೫ರ ಮೇ ೫ರಂದು ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಅಂದಿನಿಂದ ಇಂದಿನವರೆಗೂ ಸಾಹಿತ್ಯ, ನಾಡು-ನುಡಿ, ಸಂಸ್ಕೃತಿ ಹಾಗೂ ಭಾಷಾ ಅಭಿವೃದ್ಧಿಯಲ್ಲಿ ಅಪಾರ ಸೇವೆ ಸಲ್ಲಿಸಿದೆ ಎಂದು ಅವರು ಹೇಳಿದರು. ಪರಿಷತ್ತಿನ ಮೊದಲ ಅಧ್ಯಕ್ಷರಾಗಿ ಎಚ್. ಬಿ. ನಂಜುಂಡಯ್ಯ ಆಯ್ಕೆಯಾಗಿದ್ದರೂ, ಇದರ ಸ್ಥಾಪನೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಅಂದಿನ ದಿವಾನರಾದ ಸರ್ ಎಂ. ವಿಶ್ವೇಶ್ವರಯ್ಯ ಅವರ ಸಹಕಾರ ಅತ್ಯಂತ ಮಹತ್ವದ್ದಾಗಿತ್ತು. ಇಂತಹ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ಹೇಳಿದರು. ಬಸವ ಜಯಂತಿಯ ಮಹತ್ವವನ್ನು ಉಲ್ಲೇಖಿಸಿದ ಅವರು, ಬಸವಣ್ಣನವರ ತತ್ವ-ಆದರ್ಶಗಳು ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು.ಶಿಕ್ಷಕ ಸೋಮಶೇಖರ್‌ ಮಾತನಾಡಿ, ೧೨ನೇ ಶತಮಾನದಲ್ಲಿ ಬಸವಣ್ಣನವರು ವಚನಗಳ ಮೂಲಕ ಸಮಾಜವನ್ನು ಒಗ್ಗೂಡಿಸಿದ ಮಹಾನ್ ವ್ಯಕ್ತಿ. ಅವರ ತತ್ವಗಳು ಜಗತ್ತಿನಲ್ಲಿ ಅಪರೂಪವಾಗಿದ್ದು, ಧರ್ಮ ಸ್ಥಾಪನೆಗೆ ವಚನಗಳನ್ನು ಮಾಧ್ಯಮವನ್ನಾಗಿ ಬಳಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ವಚನಕಾರರ ಸಾಹಿತ್ಯ ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಮಾತನಾಡಿ, ಇಂತಹ ಕಾರ್ಯಕ್ರಮಗಳು ಯುವಪೀಳಿಗೆಗೆ ಪರಿಷತ್ತಿನ ಮಹತ್ವ ಹಾಗೂ ಶರಣರ ತತ್ವಗಳನ್ನು ಪರಿಚಯಿಸುತ್ತವೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಅಂಡ್ ಗೈಡ್ಸ್ ಆಯುಕ್ತ ವೀರಭದ್ರಪ್ಪ ಮಾತನಾಡಿ, ಬಸವಣ್ಣನವರು ಜಾತಿ-ಮತ ಭೇದಗಳನ್ನು ದೂರ ಮಾಡಿ ಸಮಾಜವನ್ನು ಒಗ್ಗೂಡಿಸಿದ ಮಹಾನ್ ವ್ಯಕ್ತಿ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಆದರ್ಶಗಳು ಹೆಚ್ಚು ಪ್ರಸ್ತುತವಾಗಿವೆ ಎಂದು ಹೇಳಿದರು.ಕೇಂದ್ರ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬಸವ ಕೇಂದ್ರದ ಅಧ್ಯಕ್ಷ ಯು.ಎಸ್. ಬಸವರಾಜ್, ನ್ಯಾಯವಾದಿ ಎಂ.ಬಿ. ಗಿರಿಜಾಂಬಿಕ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಹಾಸನ ತಾಲ್ಲೂಕು ಅಧ್ಯಕ್ಷೆ ಗೀತಾ, ವೇದಿಕೆಯ ಕೇಂದ್ರ ಕೋಶಾಧ್ಯಕ್ಷ ಎಚ್.ಎಸ್. ಬಸವರಾಜ್, ಕಸಾಪ ಮಾಜಿ ಅಧ್ಯಕ್ಷ ಉದಯರವಿ, ಸಾಹಿತಿ ಚಲಂ ಹಾಡ್ಲಹಳ್ಳಿ, ಶಿಕ್ಷಕ ಸೋಮಶೇಖರ್, ಹಿರಿಯ ಗೈಡ್ ಶಿಕ್ಷಕಿ ಎಚ್.ಜಿ.ಕಾಂಚನಮಾಲ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕ, ಎಲ್.ಟಿ.ಗೈಡ್ ಮಮತ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾ.ನಂ.ಲೋಕೇಶ್, ಎ.ವಿ.ಕೆ.ಮಹಿಳಾ ಕಾಲೇಜಿನ ಉಪನ್ಯಾಸಕ ಪ್ರಕಾಶ್, ಬ್ಯಾಂಕ್ ನೌಕರರ ಸಂಘದ ಮಾಜಿ ಅಧ್ಯಕ್ಷ ಪರಮಶಿವಯ್ಯ, ರೇಖಾ ಪ್ರಕಾಶ್, ಮಮತಾ ಪಾಟೀಲ್, ಕವಯಿತ್ರಿ ಎಚ್.ಬಿ.ಚೂಡಾಮಣಿ, ಪದ್ಮಾವತಿ ವೆಂಕಟೇಶ್, ಅಂತರಾಷ್ಟ್ರೀಯ ಚಿತ್ರಕಲಾವಿದ ಬಿ.ಎಸ್. ದೇಸಾಯಿ, ಸಾಹಿತಿ ಗೊರೂರು ಅನಂತರಾಜು, ಗಣೇಶ್ ಅಂಕಪುರ, ಕವಯಿತ್ರಿ ಎಚ್.ಎಸ್. ಪ್ರತಿಮಾ ಹಾಸನ್, ಮುದ್ರಣಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಂ. ರಾಜಶೇಖರ್, ಸಾಹಿತಿ ಡಾ. ಶಾಂತ ಅತ್ನಿ, ಚೆನ್ನಂಗಿಹಳ್ಳಿ ಶ್ರೀಕಾಂತ್, ಗೈಡ್ ಆಯುಕ್ತೆ ಜಯಾರಮೇಶ್, ರಮ್ಯ ಕಲಾರಂಗದ ಎಚ್.ರಾಮಣ್ಣ, ಕವಯಿತ್ರಿ ಎಚ್.ಎನ್.ಭಾರತಿ, ರಾಣಿ ಚರಾಶ್ರೀ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳೆ ವಿಮೆ ವಿತರಣೆಯಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಡೆಂಘೀ ತಡೆಗೆ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿ