ಗುಣಮಟ್ಟದ ಶಿಕ್ಷಣಕ್ಕೆ ಹಲವು ಯೋಜನೆ: ಅಶೋಕ್ ರೈ

KannadaprabhaNewsNetwork |  
Published : Jun 03, 2026, 02:45 AM IST
ಫೋಟೋ: ೧ಪಿಟಿಆರ್-ಸ್ಕೂಲ್ ಸಾಮೆತ್ತಡ್ಕ ಸರ್ಕಾರಿ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೊತ್ಸವ ನಡೆಯಿತು. | Kannada Prabha

ಸಾರಾಂಶ

ಮಕ್ಕಳು 40 ಶೇ.ದಷ್ಟು ಶಾಲೆಯಲ್ಲಿ ಕಲಿತರೆ 60 ಶೇ.ದಷ್ಟು ಮನೆಯಲ್ಲಿ ಕಲಿಯಲಿದ್ದು, ಹೀಗಾಗಿ ಪೋಷಕರು ಕೂಡ ಮಕ್ಕಳ ಶಿಕ್ಷಣದ ಕುರಿತು ಕಾಳಜಿ ವಹಿಸಬೇಕಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು: ಮಕ್ಕಳು 40 ಶೇ.ದಷ್ಟು ಶಾಲೆಯಲ್ಲಿ ಕಲಿತರೆ 60 ಶೇ.ದಷ್ಟು ಮನೆಯಲ್ಲಿ ಕಲಿಯಲಿದ್ದು, ಹೀಗಾಗಿ ಪೋಷಕರು ಕೂಡ ಮಕ್ಕಳ ಶಿಕ್ಷಣದ ಕುರಿತು ಕಾಳಜಿ ವಹಿಸಬೇಕಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಸೋಮವಾರ ಪುತ್ತೂರು ನಗರದ ಸಾಮೆತ್ತಡ್ಕ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕಚೇರಿಯ ಸಹಯೋಗದಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಗ್ರಾಮೀಣ ಭಾಗಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಗಳನ್ನು ಮಂಜೂರು ಮಾಡುತ್ತಿದ್ದು, ಪುತ್ತೂರಿನ ಬೆಟ್ಟಂಪಾಡಿ, ಕೋಡಿಂಬಾಡಿ, ಬಜತ್ತೂರು, ನೆಟ್ಟಣಿಗೆಮುಡ್ನೂರು ಸೇರಿ ಒಟ್ಟು 4 ಕೆಪಿಎಸ್ ಶಾಲೆಗಳು ಅನುಷ್ಠಾನಗೊಳ್ಳಲಿದೆ. ಒಂದು ಹೆಚ್ಚುವರಿ ಕೆಪಿಎಸ್ ಶಾಲೆಯನ್ನೂ ಕೇಳಲಾಗಿದೆ ಎಂದು ತಿಳಿಸಿದರು. ಈ ವೇಳೆ ಶಾಲೆಗೆ ನವ ಮಂಗಳೂರು ಬಂದರು ಪ್ರಾಧಿಕಾರ(ಎನ್.ಎಂ.ಪಿ.ಎ)ದ ವತಿಯಿಂದ ನಿರ್ಮಾಣಗೊಂಡ ತರಗತಿ ಕೊಠಡಿ ಹಾಗೂ ಮಕ್ಕಳ ಪ್ಲೇ ಏರಿಯಾವನ್ನು ಉದ್ಘಾಟಿಸಿದರು. ಮಕ್ಕಳನ್ನು ರಜೆಯಲ್ಲಿ ಕಳೆದ ಸಂತೋಷವನ್ನು ಶಾಲೆಯಲ್ಲೂ ಕಳೆಯಬೇಕು ಎಂಬ ಉದ್ದೇಶದಿಂದ ಮೊದಲ ದಿನ ಪ್ರಾರಂಭೋತ್ಸವವನ್ನು ಮಾಡಲಾಗುತ್ತದೆ.

ಪ್ರತಿ ಗ್ರಾಮಕ್ಕೆ ಕೆಪಿಎಸ್ ಶಾಲೆಗಳನ್ನು ನೀಡುವ ಯೋಚನೆ ಸರ್ಕಾರದ ಮುಂದಿದ್ದು, ಅದರ ಮೂಲಕ ಮಕ್ಕಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣದ ಜತೆಗೆ ಶಾಲಾ ವಾಹನದಲ್ಲೇ ಕರೆದುಕೊಂಡು ಬರುವ ಯೋಚನೆ ಇರುತ್ತದೆ. ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಮುಂದಿನ 6 ತಿಂಗಳೊಳಗೆ ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದ್ದು, ಪ್ರಸ್ತುತ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೀಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಶೆಟ್ಟಿ, ಶಾಲಾ ಸ್ಥಾಪಕಾಧ್ಯಕ್ಷ ಸಾಮೆತಡ್ಕ ಗೋಪಾಲಕೃಷ್ಣ ಭಟ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮೋನಪ್ಪ ಎಂ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟೀಪನ್ ವೇಗಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸಿಲ್ವಿಯಾ ಅಸುಂತಾ ಕ್ಯಾಸ್ಟಲಿನೊ, ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ, ಸಿಆರ್ ಪಿ ಶಶಿಕಲಾ, ಪ್ರಮುಖರಾದ ದಿನೇಶ್ ಕಾಮತ್, ಮುಖ್ಯಶಿಕ್ಷಕಿ ಜಲಜಾಕ್ಷಿ ಉಪಸ್ಥಿತರಿದ್ದರು.ಶಿಕ್ಷಕಿ ಮರಿಯಾ ಕಾರ್ಯಕ್ರಮ ನಿರ್ವಹಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರಿಗೆ ಆನ್‌ಲೈನ್‌ ಹಾಜರಾತಿ ಧರ್ಮಸಂಕಟ !
ಕ್ರೆಡಿಟ್‌ಗಾಗಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಪ್ರಚಾರ ಜೋರು!