ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಪಟ್ಟಣದ ವೆಂಕಟೇಶ್ವರ ನಗರದ ನಮ್ಮ ಕ್ಲಿನಿಕ್ ಆವರಣದಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ, ನಗರ ಪ್ರದೇಶದಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಕೆಲವೊಂದು ಸಂದರ್ಭದಲ್ಲಿ ಆಸ್ಪತ್ರೆಗೆ ದಾವಿಸಲು ಸಮಯ ಇರುವದಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಕ್ಲಿನಿಕ್‌ನ್ನು ಆರಂಭಿಸಿ ಜನರಿಗೆ ತ್ವರಿತ ಗತಿಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದರು.ವೈದೇಹಿ ಆಸ್ಪತ್ರೆಯ ಮೂಳೆ ತಜ್ಞ ಡಾ.ಮಣಿಶಂಕರ್, ಕಣ್ಣು ವಿಭಾಗದ ಡಾ.ಅಮೋಘ, ಸರ್ಜನ್ ಅಭಿಷೇಕ್, ಡಾ.ಮಣಿಕಂಠನ್ ಮುಂತಾದವರು ರೋಗಿಗಳ ತಪಾಸಣಾ ಕಾರ್ಯ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಅಭಿಲಾಷ್ ಮಾತನಾಡಿ, ಇಂದು ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಈ ಭಾಗದ ಸುಮಾರು 240 ಜನ ಆಗಮಿಸಿ ಆರೋಗ್ಯ ಪರೀಕ್ಷೆಗೆ ಒಳಗಾಗಿದ್ದಾರೆ. ನಮ್ಮ ಮೊದಲ ಪ್ರಯತ್ನದಲ್ಲೇ ನಿರೀಕ್ಷೆಗೂ ಮೀರಿ ಯಶಸ್ಸು ದೊರಕಿದ್ದು, ಶಿಬಿರ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಪಿಎಂ ಪ್ರದೀಪ್, ಲೆಕ್ಕ ಅಧಿಕಾರಿ ಕೃಪಾ, ಮುಖ್ಯ ಶಿಕ್ಷಕ ಶ್ರೀನಿವಾಸ್, ದೈಹಿಕ ಶಿಕ್ಷಕ ಭೀಮಣ್ಣ ಮುಂತಾದವರು ಉಪಸ್ಥಿತರಿದ್ದರು.