ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆ: ಶಾಸಕ ವಿಶ್ವಾಸ ವೈದ್ಯ

KannadaprabhaNewsNetwork |  
Published : Feb 22, 2024, 01:47 AM IST
ಞಞಞ | Kannada Prabha

ಸಾರಾಂಶ

ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಒದಗಿಸಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಶಾಲಾ ಸಾಮಗ್ರಿಗಳ ಕಿಟ್‌ಗಳನ್ನು ವಿತರಣೆ.

ಕನ್ನಡಪ್ರಭ ವಾರ್ತೆ ಯರಗಟ್ಟಿ

ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದೆ. ಇದರಲ್ಲಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸುವ ಕಾರ್ಯಕ್ರಮವು ಒಂದಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಅವರು ಪಟ್ಟಣದ ತಾಲೂಕು ಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಒದಗಿಸಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಶಾಲಾ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಈ ವೇಳೆ ಯರಗಟ್ಟಿ ತಾಲೂಕು ಕಾರ್ಮಿಕ ನಿರೀಕ್ಷಕ ಮಹೇಶ ಬಾಗೋಜಿ ಸಿಬ್ಬಂದಿ ಶಿವಾನಂದ ಬೆಳವಳಗಿಡದ, ಮಂಜುನಾಥ ತಡಸಲೂರ, ಶಿವಾನಂದ ಕರಿಗೊಣ್ಣವರ, ಬಾಸ್ಕರ ಹಿರೇಮೆತ್ರಿ, ರಾಮನಗೌಡ ಪಾಟೀಲ, ಸುರೇಶ ಭಜಂತ್ರಿ, ರಫೀಕ್ ಡಿ.ಕೆ, ಫಾರುಕ್ ಅತ್ತಾರ, ನಿಖಿಲ ಪಾಟೀಲ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಬಂಗಾರಪ್ಪ ಹರಳಿ, ಪ್ರಕಾಶ ವಾಲಿ, ಐ. ಬಿ. ಗೌಡರ, ಶಂಕರ ಇಟ್ನಾಳ, ಬಸವರಾಜ ಪೂಜೇರ, ವಿದ್ಯಾರ್ಥಿಗಳು/ ವಿದ್ಯಾರ್ಥಿನಿಯರು, ಸೇರಿದಂತೆ ಅನೇಕ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ