ರಾಣಿಬೆನ್ನೂರು: ಜನಪ್ರತಿನಿಧಿಗಳನ್ನು ಪ್ರಜೆಗಳಿಂದ ಆಯ್ಕೆ ಮಾಡುವ ವಿಧಾನವನ್ನು ನಮ್ಮ ಸಂವಿಧಾನ ನಮಗೆ ನೀಡಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಆರ್.ಎಚ್. ಭಾಗವಾನ ಮಾತನಾಡಿ, ಭಾರತದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಂರಕ್ಷಿಸಲು, ಬೆಳೆಸಲು ಸಂವಿಧಾನ ಪೂರಕವಾಗಿದೆ. ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅಮೂಲ್ಯವಾದ ಮೂಲಭೂತ ಹಕ್ಕುಗಳು ಹಾಗೂ ಸುಖೀ ರಾಜ್ಯದ ಕಲ್ಪನೆಯನ್ನು ಸಾಕಾರಗೊಳಿಸಲು ರಾಜನೀತಿ ತತ್ವಗಳನ್ನು ಒದಗಿಸಿದೆ. ಇದರಿಂದ ಭಾರತದ ಸಂವಿಧಾನವು ಪ್ರಜಾಪ್ರಭುತ್ವದ ಭಗವದ್ಗೀತೆಯಾಗಿದೆ ಎಂದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸವಣ್ಣೆಪ್ಪ ಪಾರ್ವತೇರ, ಟಿಎಪಿಸಿಎಂಎಸ್ ಅಧ್ಯಕ್ಷ ಯಲ್ಲರಡ್ಡಿ, ರಡ್ಡೇರ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಂಜನಗೌಡ ಪಾಟೀಲ, ಬಿಇಒ ಶಾಮಸುಂದರ ಅಡಿಗ, ಪೌರಾಯುಕ್ತ ಎಫ್.ಐ. ಇಂಗಳಗಿ, ತಾಪಂ ಇಒ ಪರಮೇಶ ಡಿವೈಎಸ್‌ಪಿ ಡಾ. ಗಿರೀಶ ಭೋಜಣ್ಣನವರ, ಹಿರಿಯ ಸಹಾಯಕ ತೋಟಗಾರಿಕೆ ಅಧಿಕಾರಿ ನೂರಅಹ್ಮದ್ ಹಲಗೇರಿ, ಸಿಡಿಪಿಒ ಪಾರ್ವತಿ ಹುಂಡೇಕಾರ, ಟಿಎಚ್‌ಒ ಡಾ. ರಾಜೇಶ್ವರಿ ಕದರಮಂಡಲಗಿ, ಸಾರ್ವಜನಿಕ ಆಸ್ಪತ್ರೆಯ ಡಾ. ರಾಜು ಶಿರೂರ,. ಬಿಸಿಎಂ ಅಧಿಕಾರಿ ವಿ.ಎಸ್. ಹಿರೇಮಠ, ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕೆಂಚರೆಡ್ಡಿ, ಕಂದಾಯ ಇಲಾಖೆಯ ಅಶೋಕ ಅರಳೇಶ್ವರ, ಹರೀಶ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕ್ಷಯರೋಗ ಮುಕ್ತ ಭಾರತ ಸಂಕಲ್ಪದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.