ಜನರ ಆರ್ಥಿಕ ಮಟ್ಟ ಸುಧಾರಣೆಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಅನಿಲ್ ಚಿಕ್ಕಮಾದು

KannadaprabhaNewsNetwork |  
Published : Jan 28, 2026, 01:15 AM IST
55 | Kannada Prabha

ಸಾರಾಂಶ

ಹಲವು ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ನಂತರದಲ್ಲಿ ದೇಶದ ಆಡಳಿತಕ್ಕಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂಲಕ ರಚನೆಯಾಗಿ ಜನರಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಇಪ್ಪತ್ತು ಅಂಶದ ಕಾರ್ಯಕ್ರಮದ ಮೂಲಕ ಜನರ ಶ್ರೇಯೋಭಿವೃದ್ದಿಗಾಗಿ ಸರ್ಕಾರಗಳು ಕೆಲಸ ಮಾಡಿವೆ.

ಕನ್ನಡಪ್ರಭ ವಾರ್ತೆ ಎಚ್.ಡಿ.ಕೋಟೆ

ಜನರ ಆರ್ಥಿಕ ಮಟ್ಟ ಸುಧಾರಣೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಇಪ್ಪತ್ತು ಅಂಶದ ಕಾರ್ಯಕ್ರಮದ ಮೂಲಕ ಜನರ ಶ್ರೇಯೋಭಿವೃದ್ದಿಗಾಗಿ ಸರ್ಕಾರಗಳು ಕೆಲಸ ಮಾಡಿವೆ ಎಂದರು.

ಹಲವು ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ನಂತರದಲ್ಲಿ ದೇಶದ ಆಡಳಿತಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂಲಕ ರಚನೆಯಾಗಿ ಜನರಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದೆ ಎಂದರು.

ಸಾಹಿತಿ ಮತ್ತು ಸಂಸ್ಕೃತಿ ಚಿಂತಕ ಕಿರಣ್ ಸಿಡ್ಲೇಹಳ್ಳಿ ಮಾತನಾಡಿ, ದೇಶದಲ್ಲಿ ವಿವಿಧ ಸಂಸ್ಕೃತಿಗಳು ಹಾಗೂ ಬಹುತ್ವದಿಂದ ಕೂಡಿದ ದೇಶಕ್ಕೆ ಅಂಬೇಡ್ಕರ್ ಅವರು ಉತ್ತಮ ಸಂವಿಧಾನವನ್ನು ರಚನೆ ಮಾಡಿದರು. ಸಂವಿಧಾನದ ಮೂಲಕ ಅಸಂಖ್ಯಾತ ಜನರ ನೋವಿಗೆ ಸಂವಿಧಾನದಲ್ಲಿ ಉತ್ತರ ಕಂಡುಕೊಂಡರು. ಹಾಗೆ ಸಂವಿಧಾನವನ್ನು ಅರ್ಥ ಮಾಡಿಕೊಳ್ಳ ಬೇಕಾದರೆ ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡಾಗ ಮಾತ್ರ ಸಾಧ್ಯ ಎಂದರು.

ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಹಸೀಲ್ದಾರ್ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಾಣೆ ಮಾಡಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಮತ್ತು ಗಾಂಧಿಜಿ ಅವರ ಭಾವಚಿತ್ರ ಇಟ್ಟು ಮೆರವಣಿಗೆ ಮೂಲಕ ಜೂನಿಯರ್ ಕಾಲೇಜ್ ಆವರಣದಲ್ಲಿ ಸಮಾವೇಶ ಗೊಂಡಿತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು.

2024-25 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಯಶವಂತ ಕುಮಾರ್, ಪುಷ್ಪ, ವಿದ್ಯಾಶ್ರೀ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಲಾ ಐವತ್ತು ಸಾವಿರ ಚೆಕ್ ವಿತರಿಸಲಾಯಿತು.

ವಿವಿಧ ಶಾಲೆಯ ಮಕ್ಕಳು ದೇಶಭಕ್ತಿ ಹಾಗೂ ಸಂವಿಧಾನ ಗೀತೆಗೆ ನೃತ್ಯ ಪ್ರದರ್ಶಿಸಿದರು. ಪಟ್ಟಣದ ವಿಶ್ವ ಭಾರತಿ ಶಾಲೆಯ ಮಕ್ಕಳು ಸಹಾಸ ಕಲೆಯಾದ ಮಲ್ಲ ಕಂಬದಲ್ಲಿ ವಿವಿಧ ಭಂಗಿಗಳನ್ನು ಪ್ರದರ್ಶಿಸಿದ್ದು ಆಕರ್ಷಣೆಯಾಗಿತ್ತು.

ತಹಸೀಲ್ದಾರ್ ಶ್ರೀನಿವಾಸ್, ಇಓ ಧರಣೀಶ್, ಬಿಇಓ ಎನ್ ರಾಜು, ಟಿಚ್ಓ ಡಾ.ಟಿ. ರವಿಕುಮಾರ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಪೊಲೀಸ್ ಇನ್ ಸ್ಪೆಕ್ಟರ್ಗಂಗಾಧರ್, ಎಸ್ಐ ಗಳಾದ ಚಿಕ್ಕನಾಯಕ, ಸುರೇಶ್ ನಾಯಕ, ಅಧಿಕಾರಿಗಳಾದ ಪ್ರಸಾದ್, ಚಂದುಕುಮಾರ್, ಶಶಿಕಲಾ, ನೇತ್ರಾವತಿ, ರಮೇಶ್, ಮಹೇಶ್, ಮುಖಂಡರಾದ ಎಚ್.ಸಿ. ನರಸಿಂಹಮೂರ್ತಿ, ಬಾಲಯ್ಯ, ಚೌಡಹಳ್ಳಿ ಜವರಯ್ಯ, ಪರಶಿವಮೂರ್ತಿ, ಅಜಾರುದ್ದೀನ್, ಅಶೋಕ್, ಅನುಷಾ ಕೋಟೆ, ಸೌಮ್ಯ, ಶೈಲಾ ಸುಧಾಮಣಿ, ಪ್ರೇಮ್ ಕುಮಾರ್, ಸಣ್ಣಕುಮಾರ್ ಇದ್ದರು.

ಮಹಾತ್ಮ ಗಾಂಧೀಜಿ ಭಾವಚಿತ್ರ ಇಡದೆ ನಿರ್ಲಕ್ಷ್ಯ:

ಗಣರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಇಡದೆ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿತ್ತು. ಈ ಬಗ್ಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಕನ್ನಡ ಪ್ರಮೋದ್ ಶಾಸಕರ ಗಮನಕ್ಕೆ ತಂದು ಗಾಂಧೀಜಿಯವರ ಭಾವಚಿತ್ರವನ್ನು ಹಿಡದೆ ಅಪಮಾನ ಮಾಡಿರುವ ತಹಸೀಲ್ದಾರ್ ಶ್ರೀನಿವಾಸ್ ವಿರುದ್ಧ ಕ್ರಮ ಆಗಬೇಕು, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ