ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸೌಲಭ್ಯಗಳಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Jun 17, 2025, 03:44 AM IST
ಅರ್ಜಿ  | Kannada Prabha

ಸಾರಾಂಶ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸಾಲ- ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಜು. 4 ಕೊನೆ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.1 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ) ಯೋಜನೆ, ಜೀಜಾವುಜಲ ಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ),

ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಎಲ್ಲ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 ಇವರನ್ನು ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ