ಹೆಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್

KannadaprabhaNewsNetwork | Published : Sep 7, 2024 1:36 AM

ಸಾರಾಂಶ

ಯುವ ಜನೋತ್ಸವ ಅಂಗವಾಗಿ ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ, ದುರ್ಗ ರನ್ನರ್ಸ್, ಸೌಖ್ಯ ಸಮುದಾಯ ಸಂಸ್ಥೆ, ಸುಚೇತನಾ ನೆಟ್‌ವರ್ಕ್, ಅಭಿವೃದ್ಧಿ ಸೇವಾ ಸಂಸ್ಥೆ, ಜೆಪಿಎನ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.

ಕನ್ನಡಪ್ರಭವಾರ್ತೆ ಚಿತ್ರದುರ್ಗಯುವ ಜನೋತ್ಸವ ಅಂಗವಾಗಿ ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ, ದುರ್ಗ ರನ್ನರ್ಸ್, ಸೌಖ್ಯ ಸಮುದಾಯ ಸಂಸ್ಥೆ, ಸುಚೇತನಾ ನೆಟ್‌ವರ್ಕ್, ಅಭಿವೃದ್ಧಿ ಸೇವಾ ಸಂಸ್ಥೆ, ಜೆಪಿಎನ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಕನಕ ವೃತ್ತದಿಂದ ಒನಕೆ ಓಬವ್ವ ಸ್ಟೇಡಿಯಂವರೆಗೆ ಮ್ಯಾರಥಾನ್ ಸ್ಪರ್ಧೆ ನಡೆಸಲಾಯಿತು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಡಿ.ಎಂ. ಅಭಿನವ್ ಮಾತನಾಡಿ, ಏಡ್ಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ವ್ಯಾಪಕವಾಗಿ ಹರಡುತ್ತಿದೆ. ಯುವಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.ಆರ್‌ಡಿಪಿಆರ್ ಇಲಾಖೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ. ಸುಷ್ಮರಾಣಿ ಮಾತನಾಡಿ, ಮಾರಣಾಂತಿಕ ಕಾಯಿಲೆ ಏಡ್ಸ್ಗೆ ಪರಿಣಾಮಕಾರಿ ಔಷಧ ಇಲ್ಲ. ಹಾಗಾಗಿ ಯುವಕ ಯುವತಿಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇಲಾಖೆಗಳು ಹಾಗೂ ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಈ ಮ್ಯಾರಥಾನ್ ನಡೆಸಲಾಗಿದೆ ಎಂದು ಹೇಳಿದರು.ಮ್ಯಾರಥಾನ್ ಸ್ಪರ್ಧೆಯಲ್ಲಿ ಯುವತಿಯರ ವಿಭಾಗದಲ್ಲಿ ವಿದ್ಯಾರ್ಥಿನಿ ಮೋನಿಕಾ ಹಾಗೂ ಯುವಕರ ವಿಭಾಗದಲ್ಲಿ ಜೋಶ್ವ ಪ್ರಥಮ ಸ್ಥಾನ ಪಡೆದರು. ವಿಜೇತರಾದ ಸ್ಪರ್ಧಿಗಳಿಗೆ ಪ್ರಮಾಣಪತ್ರ, ಪದಕ ವಿತರಿಸಲಾಯಿತು. ಭಾಗವಹಿಸಿದ್ದ ಎಲ್ಲ ಸ್ಪರ್ಧಿಗಳಿಗೂ ಪ್ರಮಾಣಪತ್ರ ನೀಡಲಾಯಿತು.ಜಿಲ್ಲಾಸ್ಪತ್ರೆ ಎಆರ್‌ಟಿ ಕೇಂದ್ರ ವೈದ್ಯಾಧಿಕಾರಿ ಡಾ. ರೂಪಶ್ರೀ, ಎನ್‌ಎಸ್‌ಎಸ್ ನೋಡಲ್ ಅಧಿಕಾರಿಗಳಾದ ಡಾ. ರಮೇಶ ಅಯ್ಯನಹಳ್ಳಿ, ಲೋಕೇಶ್ ಇದ್ದರು.

Share this article