ಪಾಂಡವಪುರ:
ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಐದು ದೀಪದ ವೃತ್ತದಲ್ಲಿ ಫೆ.8ರಂದು ಬೆಳಗ್ಗೆ 6ಕ್ಕೆ ಆರಂಭವಾಗಲಿರುವ ಮ್ಯಾರಥಾನ್ ದಲ್ಲಿ ಸ್ವತಃ ತಾವು ಕೂಡ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಟ್ರಸ್ಟ್ ಕಾರ್ಯದರ್ಶಿ ಎಂ.ಪಂಚಲಿಂಗೇಗೌಡ ಮಾತನಾಡಿ, 14 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ 2 ಕಿ.ಮೀವರೆಗೆ, 18 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ 6 ಮತ್ತು 3 ಕಿ.ಮೀವರೆಗೆ, 30 ವರ್ಷದೊಳಗಿನ ಪುರುಷ, ಮಹಿಳೆಯರಿಗೆ 10 ಮತ್ತು 6 ಕಿ.ಮೀರವರೆಗೆ ಹಾಗೂ 30 ವರ್ಷ ಮೇಲ್ಪಟ್ಟ ಪುರುಷ, ಮಹಿಳೆಯರಿಗೆ 6 ಕಿ.ಮೀವರೆಗೆ ಮ್ಯಾರಥಾನ್ ಓಟ ಏರ್ಪಡಿಸಲಾಗಿದೆ. ಒಟ್ಟು 80 ಸಾವಿರವರೆಗೆ ನಗದು ಬಹುಮಾನ ನೀಡಲಾಗುವುದು ಎಂದರು.ಇದೇ ವೇಳೆ ಎಸ್‌ಎಸ್‌ಇಟಿ ಕ್ಯಾಂಪಸ್ ಆವರಣದಲ್ಲಿ ಬೆಳಗ್ಗೆ 8ಕ್ಕೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಬಿ.ಆರ್.ರಾಮಚಂದ್ರ ಹುಟ್ಟುಹಬ್ಬವನ್ನು ಜೆಡಿಎಸ್, ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು.
ಈ ವೇಳೆ ಮನ್ಮುಲ್ ನಿರ್ದೇಶಕ ರಘುನಂದನ್, ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್, ಮುಖಂಡರಾದ ಕಿರಣ್ ರಾಮೇಗೌಡ, ಬಿಡದಿ ಬಸವರಾಜು, ಹೇಮಂತ್, ರಾಮಲಿಂಗಯ್ಯ ಸೇರಿದಂತೆ ಹಲವರು ಇದ್ದರು.