ಸಮಾಜದ ಪ್ರಗತಿಗೆ ಒಗ್ಗಟ್ಟಿನಿಂದ ಹೆಜ್ಜೆ ಹಾಕಿ: ಸಚಿವ ಈಶ್ವರ್ ಖಂಡ್ರೆ

KannadaprabhaNewsNetwork |  
Published : Nov 05, 2026, 01:45 AM IST
4ಕೆಎಂಎನ್ ಡಿ16,17 | Kannada Prabha

ಸಾರಾಂಶ

ಹಿರಿಯರ ಆಶಯದಂತೆ ನಾನು ಸಚಿವನಾಗಿದ್ದರೂ ಸಮಾಜದ ಉನ್ನತಿಗಾಗಿ ಅಧ್ಯಕ್ಷ ಸ್ಥಾನ ಒಪ್ಪಿಕೊಂಡು ರಾಜ್ಯಾದ್ಯಂತ ಸಂಚಾರ ಮಾಡಿ ಸಮುದಾಯದ ಸಂಘಟನೆಯಲ್ಲಿ ತೊಡಗಿದ್ದೇನೆ. ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಸಂಘಟಿತರಾಗಿ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಪಡೆಯಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವೀರಶೈವ ಲಿಂಗಾಯತರು ತಮ್ಮಲ್ಲಿನ ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಪ್ರಗತಿಗೆ ಒಗ್ಗಟ್ಟಿನಿಂದ ಹೆಜ್ಜೆ ಹಾಕಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ.ಖಂಡ್ರೆ ಕರೆ ನೀಡಿದರು.

ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ಆಯೋಜಿಸಿದ್ದ ಘಟಕದ ನೂತನ ಕಚೇರಿ ಉದ್ಘಾಟನೆ ಹಾಗೂ ಸಮಾಜದ ಜಾಗೃತಿ ಸಭೆಯಲ್ಲಿ ಮಾತನಾಡಿ, ವೀರಶೈವ ಲಿಂಗಾಯತ ಮಹಾಸಭಾವನ್ನು ನಮ್ಮ ತಂದೆ ಭೀಮಣ್ಣ ಖಂಡ್ರೆ ಸೇರಿದಂತೆ ಶಾಮನೂರು ಶಿವಶಂಕರಪ್ಪನವರು ಸಮರ್ಥವಾಗಿ ಮುನ್ನಡೆಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ ಎಂದರು.

ಹಿರಿಯರ ಆಶಯದಂತೆ ನಾನು ಸಚಿವನಾಗಿದ್ದರೂ ಸಮಾಜದ ಉನ್ನತಿಗಾಗಿ ಅಧ್ಯಕ್ಷ ಸ್ಥಾನ ಒಪ್ಪಿಕೊಂಡು ರಾಜ್ಯಾದ್ಯಂತ ಸಂಚಾರ ಮಾಡಿ ಸಮುದಾಯದ ಸಂಘಟನೆಯಲ್ಲಿ ತೊಡಗಿದ್ದೇನೆ. ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಸಂಘಟಿತರಾಗಿ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಪಡೆಯುವ ಜೊತೆಗೆ ಕಾಯಕಯೋಗಿ ಅಣ್ಣ ಬಸವಣ್ಣನವರ ಆಶಯದಂತೆ ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿ ಕೆಲಸ ಮಾಡಿ ನಿಮ್ಮ ಕುಟುಂಬವನ್ನು ಮುನ್ನಡೆಸುವ ಜೊತೆಗೆ ಸಮಾಜವನ್ನು ಕೂಡ ಅಭಿವೃದ್ಧಿ ಥದತ್ತ ಮುನ್ನಡೆಸಲು ಪಣತೊಡಬೇಕು ಎಂದರು.

ಸಮಾಜವನ್ನು ಸದೃಢವಾಗಿ ಕಟ್ಟುವ ದಿಕ್ಕಿನಲ್ಲಿ ಇಂತಹ ದಾನಿಗಳ ಸಹಕಾರವು ಅಗತ್ಯವಾಗಿದೆ. ಸುಮಾರು 40 ವರ್ಷಗಳಿಂದ ಹಲವು ವಿವಾದಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಈ ಜಾಗವು ಇಂದು ವಿವಾದಗಳಿಂದ ಮುಕ್ತವಾಗಿ ಸಮಾಜದ ಉನ್ನತಿಗಾಗಿ ನಿವೇಶನವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವುದು ಸಂತೋಷ ತಂದಿದೆ ಎಂದರು.

ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಬಸವ ಭವನದ ನಿರ್ಮಾಣಕ್ಕೆ ಮೂರು ಕೋಟಿ ರುಪಾಯಿ ಅನುದಾನ ನೀಡಿದ್ದರು. ಇದರ ಜೊತೆಗೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ರಾಜ್ಯ ಸರ್ಕಾರದಿಂದ ಅಗತ್ಯವಾಗಿ ಬೇಕಾದ ಹಣಕಾಸು ನೆರವು ಒದಗಿಸಿಕೊಡಲು ಬದ್ಧರಾಗಿರುವುದಾಗಿ ಹೇಳಿದರು.

ಪಟ್ಟಣದ ಹೃದಯ ಭಾಗದಲ್ಲಿನ ನಿವೇಶನ ವಿವಾದ ಬಗೆಹರಿಸಿಕೊಡುವ ದಿಕ್ಕಿನಲ್ಲಿ ಶಾಸಕ ಎಚ್.ಟಿ.ಮಂಜು ಹಾಗೂ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಸಮಾಜವನ್ನು ಸದೃಢವಾಗಿ ಗಟ್ಟಿಗೊಳಿಸುವ ದಿಕ್ಕಿನಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಶಾಸಕ ಎಚ್.ಟಿ.ಮಂಜು ಮಾತನಾಡಿ, ತಾಲೂಕಿಯ ಸೌಮ್ಯ ಸ್ವಭಾವದ ವೀರಶೈವ ಸಮುದಾಯದ ಬಗ್ಗೆ ನನಗೆ ಅಪಾರ ಗೌರವವಿದೆ. ಸಮುದಾಯದ ಸಂಘಟನೆ, ಒಗ್ಗಟ್ಟು ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹಾಸಭಾ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ನೂತನ ಕಚೇರಿ ಉದ್ಘಾಟನೆ ಸಮುದಾಯದ ಸಂಘಟನಾತ್ಮಕ ಚಟುವಟಿಕೆಗಳಿಗೆ ಮತ್ತಷ್ಟು ಶಕ್ತಿ ಬಂದಿದೆ. ಸಚಿವ ಈಶ್ವರ್ ಖಂಡ್ರೆ ಅವರಿಗೆ ತಾಲೂಕಿನ ಮೂಲ ಸೌಕರ್ಯಗಳ ಬಗ್ಗೆ ವಿವರಣೆ ನೀಡಿ ಇಲಾಖೆಗೆ ಸಂಬಂಧಿಸಿದಂತೆ ಅನುದಾನ ನೀಡುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು.

ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀಗಳಾದ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಬೇಬಿಬೆಟ್ಟದ ಶ್ರೀರೇವಣಸಿದ್ದೇಶ್ವರ ಮಠದ ಶಿವಬಸವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ, ಜಿಲ್ಲಾಧ್ಯಕ್ಷ ಆನಂದ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಕಾಂಗ್ರೆಸ್ ಮುಖಂಡ ಬಿ.ಎಲ್. ದೇವರಾಜು, ಮುಖ್ಯಮಂತ್ರಿಗಳ ಮಾಜಿ ವಿಶೇಷ ಅಧಿಕಾರಿ ಎಸ್.ಸಿ.ಅರವಿಂದ್, ಎಂ.ಡಿ.ಕೃಷ್ಣಮೂರ್ತಿ, ಮನ್ಮುಲ್ ನಿರ್ದೇಶಕ ಡಾಲು ರವಿ, ಎಂ.ಬಿ.ಹರೀಶ್, ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಕಚೇರಿ ಆಡಳಿತಾಧಿಕಾರಿ ತೋಂಟದಾರ್ಯ, ಘಟಕದ ಮಾಜಿ ಅಧ್ಯಕ್ಷ ವಡ್ಡರಹಳ್ಳಿ ಧನಂಜಯ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ವಿ.ಡಿ.ಹರೀಶ್ ಸೇರಿ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ