ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಡೆ: ಧಾರ್ಮಿಕ ಸಭೆ ರದ್ದು

KannadaprabhaNewsNetwork |  
Published : Mar 18, 2024, 01:49 AM IST
ಕೊರಗಜ್ಜನ ಕ್ಷೇತ್ರಕ್ಕೆ ಪಾದಯಾತ್ರೆ ನಡೆಯಿತು. | Kannada Prabha

ಸಾರಾಂಶ

‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಹೆಸರಿನಲ್ಲಿ 4ನೇ ವರ್ಷದ ಬೃಹತ್ ಪಾದಯಾತ್ರೆ ನಡೆದಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಧಾರ್ಮಿಕ ಸಭೆಯನ್ನು ರದ್ದುಗೊಳಿಸಲಾಗಿತ್ತು.

ಉಳ್ಳಾಲ: ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಕುತ್ತಾರು ದೆಕ್ಕಾಡಿನ ಕೊರಗಜ್ಜನ ಆದಿ ಸ್ಥಳಕ್ಕೆ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಹೆಸರಿನಲ್ಲಿ 4ನೇ ವರ್ಷದ ಬೃಹತ್ ಪಾದಯಾತ್ರೆ ನಡೆದಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಧಾರ್ಮಿಕ ಸಭೆಯನ್ನು ರದ್ದುಗೊಳಿಸಲಾಗಿತ್ತು.ಕೇಂದ್ರ ಚುನಾವಣಾ ಆಯೋಗವು ಶನಿವಾರ ಲೋಕಸಭೆ ಚುನಾವಣಾ ದಿನಾಂಕ ಪ್ರಕಟಿಸಿದ್ದು ಜಿಲ್ಲೆಯೆಲ್ಲೆಡೆ ನೀತಿ ಸಂಹಿತೆ ಜಾರಿಯಾದ ಕಾರಣ ಕೊರಗಜ್ಜನ ಆದಿ ಕ್ಷೇತ್ರದ ಬಳಿ ಹಮ್ಮಿಕೊಂಡಿದ್ದ ಧಾರ್ಮಿಕ ಸಮಾರೋಪ ಸಭೆಯನ್ನು ರದ್ದುಗೊಳಿಸಲಾಯಿತು. ಧಾರ್ಮಿಕ ಸಭೆಯಲ್ಲಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಲಿದ್ದರು.ಕದ್ರಿಯಿಂದ ಕೊರಗಜ್ಜನ ಆದಿಕ್ಷೇತ್ರಕ್ಕೆ ಬಂದ ಅತಿಥಿಗಳು, ವಿಶ್ವ ಹಿಂದೂ ಪರಿಷತ್ ಮುಖಂಡರು ಕೊರಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಕಾಂತ್ ಶೆಟ್ಟಿ, ಜಿಲ್ಲೆಯ ವಿವಿಧೆಡೆಯಲ್ಲಿ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದಾಗ ಹಿಂದೂ ಸಮಾಜವು ಒಗ್ಗಟ್ಟಾಗಿ ಅಜ್ಜನ ಆದಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿ ಸಾಥ್ವಿಕ ಹೋರಾಟ ನಡೆಸಿತ್ತು. ಬಳಿಕ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದವರ ಬಂಧನವೂ ಆಗಿ ಪಾದಾಯಾತ್ರೆ ಯಶಸ್ವಿಗೊಂಡ ಫಲವಾಗಿ ಈಗಲೂ ಪ್ರತಿ ವರ್ಷ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಳ್ಯಗುತ್ತು, ಮಾಜಿ ಶಾಸಕ ಜಯರಾಮ ಶೆಟ್ಟಿ, ವಿ.ಹಿಂ.ಪ ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪ್ರಾಂತ ಸಹಸೇವಕ್ ಪ್ರಮುಖ್ ಗೋಪಾಲ ಕುತ್ತಾರು, ಜಿಲ್ಲಾ ಸೇವಾ ಪ್ರಮುಖ್ ಪ್ರವೀಣ್ ಕುತ್ತಾರು, ಕಾರ್ಯಕ್ರಮದ ಸಂಚಾಲಕ ಜಗದೀಶ ಶೇಣವ, ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ಪಂಜಂದಾಯ, ಬಂಟ, ವೈದ್ಯನಾಥ ಕೊರಗಜ್ಜ ಆದಿ ಸ್ಥಳದ ಟ್ರಸ್ಟ್ ಅಧ್ಯಕ್ಷ ಜಯರಾಮ ಭಂಡಾರಿ ಮಾಗಣತ್ತಡಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ಮಾಗಣತ್ತಡಿ, ಟ್ರಸ್ಟಿಗಳಾದ ವಿದ್ಯಾ ಚರಣ್ ಭಂಡಾರಿ, ಪ್ರಮುಖರಾದ ಕುತ್ತಾರ ಗುತ್ತು ರತ್ನಾಕರ ಕಾವ, ಬೊಲ್ಯಗುತ್ತು ವಿನೋದ್ ಶೆಟ್ಟಿ, ದೈವದ ಮೂಲ್ಯಣ್ಣ ಬಾಲಕೃಷ್ಣ ಕಂಪ, ದೈವ ಪಾತ್ರಿ ಮಾಯಿಲ ಮೊದಲಾದವರು ಇದ್ದರು.ಫೋಟೋ

ಲಗತ್ತಿಸಲಾಗಿದೆ

17ವಿಎಚ್‌ಪಿ

ಕೊರಗಜ್ಜನ ಕ್ಷೇತ್ರಕ್ಕೆ ಪಾದಯಾತ್ರೆ ನಡೆಯಿತು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ