ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಪ್ರಯಾಣ

KannadaprabhaNewsNetwork |  
Published : Oct 28, 2026, 01:45 AM IST
27ಎಚ್ಎಸ್ಎನ್12 :  | Kannada Prabha

ಸಾರಾಂಶ

ರೈತರ ಬರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು, ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಅರ್ಹ ರೈತರಿಗೆ ಜಮೀನು ಮಂಜೂರು ಮಾಡುವುದು, ನಿವೇಶನ ರಹಿತ ಬಡ ರೈತರಿಗೆ ನಿವೇಶನ ಒದಗಿಸುವುದು ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಒತ್ತಾಯವಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಬರ ಪರಿಹಾರ ವಿತರಣೆ, ಬಗರ್‌ಹುಕುಂ ಸಾಗುವಳಿ ಜಮೀನುಗಳ ಮಂಜೂರಾತಿ, ಬಡ ರೈತರಿಗೆ ನಿವೇಶನ ಹಂಚಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅಕ್ಟೋಬರ್ ೨೮ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ವಿಧಾನಸೌಧ ಮುತ್ತಿಗೆ ಹಾಗೂ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹಾಸನ ಜಿಲ್ಲೆಯ ರೈತರು ಸಜ್ಜಾಗಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಜಿಲ್ಲೆಯ ರೈತರು ಒಂದು ದಿನ ಮುಂಚಿತವಾಗಿಯೇ ಹಾಸನ ನಗರದ ಕೇಂದ್ರ ಭಾಗದಲ್ಲಿರುವ ರೈಲು ನಿಲ್ದಾಣಕ್ಕೆ ಆಗಮಿಸಿ, ರೈಲು ಮಾರ್ಗದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ರೈತರ ಬರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು, ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಅರ್ಹ ರೈತರಿಗೆ ಜಮೀನು ಮಂಜೂರು ಮಾಡುವುದು, ನಿವೇಶನ ರಹಿತ ಬಡ ರೈತರಿಗೆ ನಿವೇಶನ ಒದಗಿಸುವುದು ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಒತ್ತಾಯವಾಗಿದೆ. ರೈತರ ಹಕ್ಕುಗಳು ಮತ್ತು ಬದುಕಿನ ಭದ್ರತೆಗಾಗಿ ಹೋರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ತೆರಳುತ್ತಿದ್ದು, ಹಾಸನ ಜಿಲ್ಲೆಯ ರೈತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಂದಾಗಿದ್ದಾರೆ. ರೈತರ ಬೇಡಿಕೆಗಳಿಗೆ ಸರ್ಕಾರ ಆದ್ಯತೆ ನೀಡಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪ್ರಯಾಣ ಬೆಳೆಸಿದರು.

ಇದೆ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು, ಪವಿತ್ರ, ಜಯರಾಂ, ಕಾಳಕ್ಕ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೋನ್‌ಇನ್‌ನಲ್ಲಿ ಕಸದ ಸಮ್ಯಸ್ಯೆಗಳದ್ದೇ ಸದ್ದು!
ಎಸ್‌ಐಆರ್‌ನಿಂದಾಗಿ ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರುಗಳು ಡಿಲೀಟ್ । ರಾಜಧಾನಿಯಲ್ಲಿ ಬರೀ 59 ಲಕ್ಷ ಮತದಾರರು