ತಂತ್ರಜ್ಞಾನ ಬಳಕೆಯಿಂದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ: ವೀರೇಂದ್ರ ಕುಮಾರ್

KannadaprabhaNewsNetwork |  
Published : Nov 07, 2026, 02:45 AM IST
ಕಾರ್ಯಕ್ರಮ | Kannada Prabha

ಸಾರಾಂಶ

ಹಿಂದಿನ ಕಾಲದಲ್ಲಿ ರೈತರು ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಮಧ್ಯವರ್ತಿಗಳ ಮೇಲೆ ಅವಲಂಬಿತರಾಗಬೇಕಿತ್ತು. ಆದರೆ ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಮೂಲಕವೇ ವಿವಿಧ ಮಾರುಕಟ್ಟೆಗಳ ಬೆಲೆಗಳನ್ನು ತಿಳಿದುಕೊಂಡು, ಸೂಕ್ತ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ ಎಂದು ಕೃಷಿ ವಿಜ್ಞಾನ ಸಂಸ್ಥೆಯ ವಿಜ್ಞಾನಿ ವೀರೇಂದ್ರ ಕುಮಾರ್ ಹೇಳಿದರು.

ವಿರಾಜಪೇಟೆ: ಹಿಂದಿನ ಕಾಲದಲ್ಲಿ ರೈತರು ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಮಧ್ಯವರ್ತಿಗಳ ಮೇಲೆ ಅವಲಂಬಿತರಾಗಬೇಕಿತ್ತು. ಆದರೆ ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಮೂಲಕವೇ ವಿವಿಧ ಮಾರುಕಟ್ಟೆಗಳ ಬೆಲೆಗಳನ್ನು ತಿಳಿದುಕೊಂಡು, ಸೂಕ್ತ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ ಎಂದು ಕೃಷಿ ವಿಜ್ಞಾನ ಸಂಸ್ಥೆಯ ವಿಜ್ಞಾನಿ ವೀರೇಂದ್ರ ಕುಮಾರ್ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲೂಕು, ಗೋಣಿಕೊಪ್ಪ ವಲಯದ ವತಿಯಿಂದ ಕಳತ್ ಮಾಡು ಗ್ರಾಮದ ಡಾಲಿ ಅವರ ಕೃಷಿ ತಾಕುವಿನಲ್ಲಿ ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಫಿ ಮಾಹಿತಿ: ಕೊಡಗಿನಲ್ಲಿ ಬೆಳೆಯುವ ಕಾಫಿ ತಳಿಗಳಾದ ಅರೇಬಿಕಾ ಮತ್ತು ರೋಬಸ್ಟಾ ಕುರಿತು ಮಾಹಿತಿ ನೀಡಿದ ಅವರು, ಅರೇಬಿಕಾ ಕಾಫಿ ಉತ್ತಮ ಗುಣಮಟ್ಟ ಹಾಗೂ ರುಚಿಯನ್ನು ಹೊಂದಿದ್ದು, ಎತ್ತರದ ಪ್ರದೇಶಗಳಲ್ಲಿ ನೆರಳಿನ ವಾತಾವರಣದಲ್ಲಿ ಬೆಳೆಯಲು ಸೂಕ್ತವಾಗಿದೆ. ಆದರೆ ರೋಗಬಾಧೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ. ರೋಬಸ್ಟಾ ಕಾಫಿ ಗಿಡಗಳು ಗಟ್ಟಿಯಾಗಿದ್ದು, ಉತ್ತಮ ಇಳುವರಿ ನೀಡುತ್ತವೆ ಹಾಗೂ ಕಡಿಮೆ ಎತ್ತರದ ಪ್ರದೇಶಗಳಲ್ಲಿಯೂ ಬೆಳೆಯಬಹುದು. ಕೊಡಗು ಜಿಲ್ಲೆಯಲ್ಲಿ ರೋಬಸ್ಟಾ ಕಾಫಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ ಎಂದು ವಿವರಿಸಿದರು.

ಚಟ್ಟಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ರಮೇಶ್ ಬಾಬು ಅವರು ವಿವಿಧ ತಳಿಯ ಹಣ್ಣಿನ ಬೆಳೆಗಳು, ಅವುಗಳ ಕೃಷಿ ಪದ್ಧತಿ ಮತ್ತು ಮಾರುಕಟ್ಟೆ ಅವಕಾಶಗಳ ಕುರಿತು ಮಾಹಿತಿ ನೀಡಿದರು. ವಿಜ್ಞಾನಿ ಮಧು ಅವರು ಕೂಡ ಕೃಷಿಗೆ ಸಂಬಂಧಿಸಿದ ತಾಂತ್ರಿಕ ಮಾಹಿತಿಯನ್ನು ಹಂಚಿಕೊಂಡರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಾಗೂ ಮಾರುತಿ ಮಾತನಾಡಿ ಯೋಜನೆಯ ವತಿಯಿಂದ ರೈತರ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕೃಷಿ ಕಾರ್ಯಕ್ರಮಗಳು, ಅಧ್ಯಯನ ಪ್ರವಾಸಗಳು ಹಾಗೂ ಯಂತ್ರಶ್ರೀ ಯೋಜನೆಯ ಮೂಲಕ ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣಕ್ಕೆ ನೀಡಲಾಗುತ್ತಿರುವ ಪ್ರೋತ್ಸಾಹದ ಕುರಿತು ಮಾಹಿತಿ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಡಾಲಿ, ಮಾಜಿ ಸೈನಿಕರಾದ ಕಾಳಪ್ಪ, ಶೌರ್ಯ ತಂಡದ ಮಾಸ್ಟರ್ ತೀರ್ಥಕುಮಾರ್, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾಪ್ರತಿನಿಧಿಗಳಾದ ಜಯಪ್ರಕಾಶ್, ಪದ್ಮ, ವಿಎಲ್‌ಇ ಆಶಾ, ಗ್ರಾಮದ ರೈತರು ಹಾಗೂ ಸಂಘದ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ