ಕನ್ನಡಪ್ರಭ ವಾರ್ತೆ, ಮಂಡ್ಯ
ಆಯುಧ ಪೂಜೆ ಮಂಗಳವಾರ (ಅ.೨೦) ಇರುವ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಅಂಗಡಿಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ವಾಹನಗಳನ್ನು ತೊಳೆದು ಪೂಜೆಗೆ ಸಿದ್ಧಗೊಳಿಸುವ ಕಾರ್ಯವನ್ನು ಜೊತೆಯಲ್ಲೇ ನಡೆಸುತ್ತಿದ್ದುದು ಕಂಡುಬಂದಿತು.
ಆಯುಧಪೂಜೆಗೆ ಅಗತ್ಯವಿರುವ ಸಾಮಾನುಗಳ ಖರೀದಿಗೆ ಗ್ರಾಮಾಂತರ ಪ್ರದೇಶಗಳಿಂದ ಜನರು ನಗರಕ್ಕೆ ಆಗಮಿಸಿದ್ದರು. ನಗರದ ವಿ.ವಿ.ರಸ್ತೆ, ನೂರಡಿ ರಸ್ತೆ, ಪೇಟೆಬೀದಿ, ಹೊಸಹಳ್ಳಿ ಸರ್ಕಲ್, ಮಹಾವೀರ ಸರ್ಕಲ್, ಎಸ್.ಡಿ. ಜಯರಾಂ ವೃತ್ತ, ಕಲಾಮಂದಿರ ರಸ್ತೆ, ಮಹಿಳಾ ಸರ್ಕಾರಿ ಕಾಲೇಜು ಮುಂಭಾಗ, ಸೇಂಟ್ ಥಾಮಸ್ ಚರ್ಚ್ ಮುಂಭಾಗ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಬೂದುಗುಂಬಳ, ಹೂವು, ಬಾಳೆಕಂದು, ಮಾವಿನ ಸೊಪ್ಪು, ನಿಂಬೆಹಣ್ಣುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರದಲ್ಲಿ ನಿರತರಾಗಿದ್ದರು.೫೦ ರಿಂದ ೧೨೦ ರು.ಗೆ ಮಾರಾಟ:
ಬಾಳೆ ಕಂದು ೨೦ ರಿಂದ ೩೦ ರು. ಬೆಲೆ ಇತ್ತು. ದೊಡ್ಡ ಗಾತ್ರದ ನಿಂಬೆ ಹಣ್ಣು ೧೦ ರು.ಗೆ ೧ ರಂತೆ ಮಾರಾಟವಾಗುತ್ತಿದ್ದರೆ, ಸಣ್ಣ ಗಾತ್ರದ ನಿಂಬೆಹಣ್ಣು ೨೦ ರು.ಗೆ ೩ರಂತೆ ಮಾರಾಟವಾಗುತ್ತಿತ್ತು.
ವಾಹನಗಳಿಗೆ ಹಾಕುವ ಹೂವಿನ ಹಾರಗಳ ಬೆಲೆ ದುಪ್ಪಟ್ಟು ಏರಿಕೆಯಾಗಿತ್ತು. ಸಾಮಾನ್ಯ ದಿನಗಳಲ್ಲಿ ೧೦೦ ರು. ಇದ್ದ ಹೂವಿನ ಹಾರಗಳು ಹಬ್ಬದ ಪ್ರಯುಕ್ತ ೧೦೦ ರಿಂದ ೨೦೦೦ ರು., ದೊಡ್ಡ ಗುಲಾಬಿ ಹೂವಿನ ಹಾರಗಳು ೮೦೦ ರು.ನಿಂದ ೧೦೦೦ ರು.ವರೆಗೆ ಮಾರಾಟವಾಗುತ್ತಿದ್ದವು. ಈ ಬಾರಿ ವಿಶೇಷ ಮಾದರಿಯ ಆಕರ್ಷಕ ಹೂವಿನ ಹಾರಗಳು ಮಾರುಕಟ್ಟೆಗೆ ಬಂದಿದ್ದವು. ಆಯುಧ ಪೂಜೆಗೆ ಅಂಗಡಿ, ವಾಹನಗಳಿಗೆಲ್ಲಾ ಹೂವು ಹಾಗೂ ನಿಂಬೆ ಹಣ್ಣಿಗೆ ಅವಶ್ಯಕತೆ ಇರುವುದರಿಂದ ಇವರೆಡಕ್ಕೂ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿತ್ತು. ಅದಕ್ಕೆ ತಕ್ಕಂತೆ ವ್ಯಾಪಾರಸ್ಥರೂ ಬೆಲೆಯಲ್ಲಿ ಹೆಚ್ಚಳ ಮಾಡಿ ಮಾರಾಟ ಮಾಡುತ್ತಿದ್ದು ಕಂಡುಬಂತು. ಜನತೆ ಒಂದಷ್ಟು ಚೌಕಾಶಿ ಮಾಡಿ ಸಾಮಗ್ರಿಗಳನ್ನು ಕೊಳ್ಳುವುದರಲ್ಲಿ ಮಗ್ನರಾಗಿದ್ದರು. ಹಣ್ಣುಗಳ ಬೆಲೆಯಲ್ಲಿ ಏರಿಕೆ:
ತರಕಾರಿ ಬೆಲೆ ಸಾಮಾನ್ಯ:
ಆಯುಧ ಪೂಜೆ ಹಬ್ಬದಲ್ಲಿ ಸಿಹಿ ತಿನಿಸುಗಳನ್ನು ಪೂಜೆಗೆ ಇಡುವುದರಿಂದ ಹಾಗೂ ಸಿಹಿ ತಿನಿಸುಗಳನ್ನು ವಿನಿಮಯ ಮಾಡಿಕೊಳ್ಳುವುದರಿಂದ ಅದಕ್ಕೂ ಹೆಚ್ಚಿನ ಬೇಡಿಕೆ ಕಂಡುಬಂದಿರುವುದರಿಂದ ಬೆಲೆಯಲ್ಲೂ ಹೆಚ್ಚಳವಾಗಿದೆ. ಪ್ರತಿ ಕೆಜಿ ಬೂಂದಿ-೩೦೦ ರು., ಮಿಲ್ಕ್ ಬರ್ಫಿ-೬೦೦ ರು., ಹಾರ್ಲಿಕ್ಸ್ ಬರ್ಫಿ-೭೮೦ ರು., ಲಾಡು-೩೮೦ ರು., ಮೈಸೂರು ಪಾಕ್-೭೨೦ ರು., ಜಹಂಗೀರ್-೩೬೦ ರು., ಸೋಂಪಾಪುಡಿ-೬೨೦ ರು., ಹಲ್ವಾ-೪೦೦ ರು. ಸೇರಿದಂತೆ ಅನೇಕ ಸಿಹಿ ಪದಾರ್ಥಗಳ ಬೆಲೆ ಕನಿಷ್ಠ ೩೦ ರು.ನಿಂದ ೫೦ ರು.ವರೆಗೆ ಹೆಚ್ಚಾಗಿತ್ತು. ಮತ್ತು ಪ್ರತಿ ಕೆಜಿ ಸ್ಪೆಷಲ್ ಖಾರ-೩೮೦ ರು., ಸಾಮಾನ್ಯ ಖಾರ-೩೦೦ ರು.ವರೆಗೆ ಮಾರಾಟವಾಗುತ್ತಿದ್ದವು.