ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲಾ ಸಮುದಾಯಕ್ಕೆ ಶ್ರೀರಕ್ಷೆ

KannadaprabhaNewsNetwork |  
Published : Jan 15, 2024, 01:50 AM ISTUpdated : Jan 15, 2024, 05:37 PM IST
ಪೋಟೋ೧೩ಸಿಎಲ್‌ಕೆ೧ ಚಳ್ಳಕೆರೆ ನಗರದ  ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ನಾಯಕ ಸಮಾಜದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಶ್ರೀಪ್ರಸನ್ನಾನಂದಸ್ವಾಮೀಜಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು.    | Kannada Prabha

ಸಾರಾಂಶ

ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದ ನಾಯಕ ಸಮಾಜದ ಬಂಧುಗಳು ಹಾಗೂ ಮಹರ್ಷಿ ವಾಲ್ಮೀಕಿಯವರ ಅಭಿಮಾನಿಗಳ ಸಹಕಾರದಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆ ನಡೆಸುತ್ತಿದ್ದು ಫೆ.8, 9ರಂದು 2 ದಿನಗಳ ಕಾಲ ನಡೆಯುತ್ತದೆ.

ಚಳ್ಳಕೆರೆ: ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದ ನಾಯಕ ಸಮಾಜದ ಬಂಧುಗಳು ಹಾಗೂ ಮಹರ್ಷಿ ವಾಲ್ಮೀಕಿಯವರ ಅಭಿಮಾನಿಗಳ ಸಹಕಾರದಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆ ನಡೆಸುತ್ತಿದ್ದು ಫೆ.8, 9ರಂದು 2 ದಿನಗಳ ಕಾಲ ನಡೆಯುವ ಈ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.

ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ತಾಲೂಕು ನಾಯಕ ಸಮಾಜದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಇಂದು ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ ಹಲವಾರು ಸಮಸ್ಯೆಗಳ ನಡುವೆಯೂ ಸಹ ಸರ್ಕಾರಕ್ಕೆ ಎಲ್ಲಾ ರೀತಿಯ ಬೆಂಬಲ ನೀಡುತ್ತಾ ಬಂದಿದೆ. ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿರುವ ನಾಯಕ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿತ್ಯದ ಅವಶ್ಯಕತೆ ಇದೆ. 

ಆದರೆ, ನಾವು ಸರ್ಕಾರದಿಂದ ಏನನ್ನಾದರೂ ಪಡೆಯಬೇಕಾದರೆ ನಮ್ಮಲ್ಲಿ ಶಕ್ತಿ ಇದೆ ಎಂಬುವುದನ್ನು ತೋರಿಸಬೇಕು. ಸಂಘಟನೆ ಬಲಿಷ್ಠವಾಗಿ ಬೆಳೆದಾಗ ಮಾತ್ರ ನಮ್ಮ ಸಮುದಾಯಕ್ಕೆ ಶಕ್ತಿ ಬರಲಿದೆ. 

ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಜಾತ್ರೆಯನ್ನು ಯಶಸ್ವಿಗೊಳಿಸುವ ಸಂಪೂರ್ಣ ಜವಾಬ್ದಾರಿ ಎಲ್ಲರ ಮೇಲಿದೆ. ಸಮಾಜದ ಚುನಾಯಿತ ಎಲ್ಲಾ ಹಂತದ ಜನಪ್ರತಿನಿಧಿಗಳು ಜಾತ್ರೆ ಯಶಸ್ವಿಗೆ ಸಾಮೂಹಿಕ ಜವಾಬ್ದಾರಿಯನ್ನು ನಿರ್ವಹಿಸುವಂತೆ ವಿನಂತಿಸಿದರು.

ಇದೇ ಸಂದರ್ಭದಲ್ಲಿ ವಾಲ್ಮೀಕಿ ಜಾತ್ರೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ಸಮಿತಿ ರಚನೆ ಮಾಡಲಾಯಿತು. ವಾಲ್ಮೀಕಿ ಜಾತ್ರಾ ಮಹೋತ್ಸವದ ತಾಲೂಕು ಅಧ್ಯಕ್ಷರಾಗಿ ಡಾ.ಡಿ.ಎನ್.ಮಂಜುನಾಥ, ನಗರ ಘಟಕದ ಅಧ್ಯಕ್ಷರಾಗಿ ಪುರಸಭೆ ಮಾಜಿ ಸದಸ್ಯ ಎಂ.ಚೇತನ್‌ಕುಮಾರ್ (ಕುಮ್ಮಿ). 

ಕಸಬಾ ಹೋಬಳಿ ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ, ಪರಶುರಾಮಪುರ ಹೋಬಳಿ ಅಧ್ಯಕ್ಷರಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗಲೂರಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಯಶೋಧಮ್ಮ ಗುರುನಾಥ, ಕಾರ್ಯದರ್ಶಿ ಸೂರ್ಯಪ್ರಭಾ ವೀರಭದ್ರಸ್ವಾಮಿಯವರು ಜಾತ್ರೆಯ ಯಶಸ್ವಿಗೆ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಲಾಯಿತು.

ವಾಲ್ಮೀಕಿ ಕಲ್ಯಾಣ ಮಂಟಪ ಮತ್ತು ನಾಯಕ ಹಾಸ್ಟೆಲ್ ಕಮಿಟಿ ಅಧ್ಯಕ್ಷರಾದ ಮಲ್ಲಪ್ಪ ನಾಯಕ, ಕಾರ್ಯದರ್ಶಿ ದುಗ್ಗಾವರ ತಿಪ್ಫೇಸ್ವಾಮಿ, ಚನ್ನಂಗಿ ರಂಗಸ್ವಾಮಿ, ವಕೀಲ ಪ್ರಭಾಕರ ಮತ್ತು ಸಮಿತಿಯ ಪದಾಧಿಕಾರಿಗಳು ಒಂದು ಲಕ್ಷ ಮೌಲ್ಯದ ಚೆಕ್‌ನ್ನು ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.

ಸಭೆಯಲ್ಲಿ ಹಿರಿಯ ಮುಖಂಡ ಟಿ.ತಿಪ್ಪೇಸ್ವಾಮಿ, ಕೆ.ಸೂರನಾಯಕ, ಗೊಂಚಗಾರ ಬೋರಯ್ಯ, ಎಲ್‌ಐಸಿ ತಿಪ್ಪೇಸ್ವಾಮಿ, ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿ (ಪಿಟಿಎಸ್), ಸೌಭಾಗ್ಯಮ್ಮ, ಜ್ಯೋತಿ ಗುರು ಸ್ವಾಮಿ, ರೈತ ಸಂಘ ಮುಖಂಡ ಕೆ.ಪಿ.ಭೂತಯ್ಯ, ಸಿ.ಗುರುಸ್ವಾಮಿ.

ಟಿ.ಮಂಜುನಾಥ, ನಿವೃತ್ತ ಬ್ಯಾಂಕ್ ಅಧಿಕಾರಿ ಸೂರ ನಾಯಕ, ಕುಬೇರ ಗ್ಯಾಸ್ ತಿಪ್ಪೇರುದ್ರಪ್ಪ, ಎಂ.ಜೆ.ರಘುವೀರ ನಾಯಕ, ಸಿ.ನಾಗರಾಜು, ನಗರಸಭಾ ಸದಸ್ಯರಾದ ಸುಮಾ, ಸುಜಾತ, ಕವಿತಾ ಮುಂತಾದವರು ಭಾಗವಹಿಸಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌