30ಕ್ಕೆ ರೈತ ಒಕ್ಕೂಟದಿಂದ ಹುತಾತ್ಮರ ದಿನಾಚರಣೆ

KannadaprabhaNewsNetwork |  
Published : Jan 22, 2025, 12:33 AM IST
20ಕೆಡಿವಿಜಿ61-ದಾವಣಗೆರೆಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಬಲ್ಲೂರು ರವಿಕುಮಾರ, ತೇಜಸ್ವಿ ವಿ.ಪಟೇಲ್, ಕೆ.ಜಿ.ಯಲ್ಲಪ್ಪ, ಪೂಜಾರ ಅಂಜಿನಪ್ಪ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.  | Kannada Prabha

ಸಾರಾಂಶ

ದಾವಣಗೆರೆಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಬಲ್ಲೂರು ರವಿಕುಮಾರ, ತೇಜಸ್ವಿ ವಿ.ಪಟೇಲ್, ಕೆ.ಜಿ.ಯಲ್ಲಪ್ಪ, ಪೂಜಾರ ಅಂಜಿನಪ್ಪ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಬಲ್ಲೂರು ರವಿಕುಮಾರ ಮಾಹಿತಿಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಕುವೆಂಪು ಕನ್ನಡ ಭವನದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ದೇಶಕ್ಕಾಗಿ ತ್ಯಾಗ, ಬಲಿದಾನಗೈದ ಹುತಾತ್ಮರ ನೆನಪಿನ ದಿನಾಚರಣೆ ಜ.30ಕ್ಕೆ ಹಮ್ಮಿ ಕೊಳ್ಳಲಾಗಿದೆ ಎಂದು ರೈತ ಮುಖಂಡ ಬಲ್ಲೂರು ರವಿಕುಮಾರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನವೇ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ, ಹುತಾತ್ಮ ಸೈನಿಕರು, ಹುತಾತ್ಮ ರೈತರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದರು.

ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರಸ್ವಾಮಿಗಳ ಸಾನಿಧ್ಯದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಂಪುರ ಬಸವರಾಜ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಬಿ.ಆರ್.ಪಾಟೀಲ, ಡಿಸಿ ಜಿ.ಎಂ.ಗಂಗಾಧರ ಸ್ವಾಮಿ, ಎಸ್‌ಪಿ ಉಮಾ ಪ್ರಶಾಂತ, ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ, ಮುಖ್ಯಮಂತ್ರಿ ಚಂದ್ರು, ಸುವರ್ಣ ನ್ಯೂಸ್‌ನ ಅಜಿತ್ ಹನುಮಕ್ಕನವರ್, ಮಾಜಿ ಸೈನಿಕರ ಸಂಘದ ಡಾ.ಎನ್.ಕೆ.ಶಿವಣ್ಣ, ಶಾಸಕ ಕೆ.ಎಸ್.ಬಸವಂತಪ್ಪ, ಕೆ.ಪಿ.ದರ್ಶನ್ ಪುಟ್ಟಣ್ಣಯ್ಯ ಇತರರು ಭಾಗವಹಿಸುವರು ಎಂದು ಹೇಳಿದರು.

ಕಬ್ಬು ಬೆಳೆಗಾರರ ಸಂಘದ ಮುಖಂಡ ತೇಜಸ್ವಿ ವಿ.ಪಟೇಲ್ ಮಾತನಾಡಿ, ಕೋಮು ಗಲಭೆಗಳಲ್ಲಿ ಯಾರಾದರೂ ಮೃತಪಟ್ಟರೆ, ಸಂತ್ರಸ್ಥರಾದರೆ ಅಂತಹವರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ನೀಡಲಾಗುತ್ತದೆ. ಆದರೆ, ರೈತ ಹುತಾತ್ಮರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಿಲ್ಲ. ಸರ್ಕಾರ ರೈತ ಹುತಾತ್ಮರಿಗೆ ಪರಿಹಾರ ನೀಡಲು ಸಮಿತಿ ರಚಿಸಿ, ಅತ್ಯಂತ ಕನಿಷ್ಟ ಮೊತ್ತದ ಪರಿಹಾರ ನೀಡುತ್ತಾರೆ. ಮೊದಲು ಇಂತಹ ತಾರತಮ್ಯ ನಿಲ್ಲಬೇಕು ಎಂದರು.

ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ, ರೈತ ಸಂಘದ ನಿಟುವಳ್ಳಿ ಅಂಜಿನಪ್ಪ ಪೂಜಾರ, ತಿರುಮಲೇಶ, ಸಿ.ಎನ್.ಚಂದ್ರಶೇಖರ, ಎಚ್.ವಿಜಯಕುಮಾರ, ಚಂದ್ರಶೇಖರ ಹೊಲಗೇರಿ, ಪ್ರಕಾಶ ನಲ್ಲೂರು, ಶಿವಯೋಗಯ್ಯ ಲೋಕನಗೌಡ್ರು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌