
ಕನ್ನಡಪ್ರಭ ವಾರ್ತೆ ತುಮಕೂರು
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ರಾಷ್ಟ್ರಪಿತ ಮಹಾತ್ಮಗಾಂಧಿ, ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್‌ಗಾಂಧಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರಾದ ಮುರುಳೀಧರ ಹಾಲಪ್ಪ, ಸರ್ವೋದಯ ದಿನದ ಹೆಸರಿನಲ್ಲಿ ಭಾರತೀಯರ ಹಕ್ಕು ಮತ್ತು ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸುವ ಕೆಲಸವನ್ನು ಇಡೀ ದೇಶದಾದ್ಯಂತ ಆಚರಿಸಲಾಗುತ್ತಿದೆ.ಕಾಂಗ್ರೆಸ್ ಪಕ್ಷ ಸಹ ದೇಶಕ್ಕಾಗಿ ಮಡಿದ ನಮ್ಮ ನಾಯಕರುಗಳನ್ನು ಸ್ಮರಿಸಲು ಹುತಾತ್ಮರ ದಿನವನ್ನು ಆಚರಿಸುತ್ತಿದೆ ಎಂದರು.ಮುಂಬರುವ ಮೇ. ಅಥವಾ ಜೂನ್ ತಿಂಗಳಲ್ಲಿ ಗ್ರೇಟರ್ ಬೆಂಗಳೂರಿನ ಐದು ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ. ತದನಂತರದಲ್ಲಿ ರಾಜ್ಯದ ಎಲ್ಲಾ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ.ಹಾಗಾಗಿ ಪಕ್ಷದ ಕಾರ್ಯಕರ್ತರು ಎಚ್ಚೆತ್ತುಕೊಂಡು, ಚುನಾವಣಾ ತಯಾರಿಯಲ್ಲಿ ಭಾಗಿಯಾಗುವಂತೆ ಕೋರಿದರು.
ಮುಖಂಡರಾದ ಕೆಂಚಮಾರಯ್ಯ ಮಾತನಾಡಿ,ಮಹಾತ್ಮಗಾಂಧಿ ಅವರು ಸಾವನ್ನಪ್ಪಿದ ದಿನವನ್ನು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ಅವರಿಗೆ ಕವಿ ರವೀಂದ್ರನಾಥ ಟ್ಯಾಗೋರ್ ನೀಡಿದ ಬಿರುದು ಮಹಾತ್ಮ ಕಾಂಗ್ರೆಸ್ ಪಕ್ಷ ಕರ್ನಾಟಕದ ಪ್ರತಿ ಗ್ರಾಪಂಗೂ ಗ್ರಾಮ ಸ್ವರಾಜ್ ಪರಿಕಲ್ಪನೆ ನೀಡಿದ ಮಹಾತ್ಮಗಾಂಧಿ ಹೆಸರನ್ನು ಇಡಲು ಮುಂದಾಗಿದೆ. ಗಾಂಧಿ ಹೆಸರು ಹೇಳುವ ನೈತಿಕತೆಯೂ ಬಿಜೆಪಿಗರಿಗೆ ಇಲ್ಲ ಎಂದರು.
ಹಿರಿಯರಾದ ಮಾಜಿ ಶಾಸಕ ಗಂಗಹನುಮಯ್ಯ,ನರಸೀಯಪ್ಪ,ಗ್ರಾಮಾಂತರದ ಪಂಚಾಕ್ಷರಯ್ಯ,ಪಿ.ಶಿವಾಜಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ರೇವಣ್ಣಸಿದ್ದಯ್ಯ, ಷಣ್ಮುಖಪ್ಪ ಸೇರಿದಂತೆ ಹಲವರು ಸರ್ವೋದಯ ದಿನ ಕುರಿತು ಮಾತನಾಡಿದರು.