ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಪೊನ್ನಂಪೇಟೆಯಲ್ಲಿ ಕೊಡವ ಹಿತಾರಕ್ಷಣಾ ಬಳಗ ಕ್''''''''ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ‘ಕಕ್ಕಡ ಪದ್ ‘ನೆಟ್ಟ್’ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಸ್ಕೃತಿಯ ಬೇರಾಗಿರುವ ಬತ್ತದ ಕೃಷಿಯಲ್ಲಿ ನಿರಾಸಕ್ತಿ ತಾಳಿದ್ದು ಕೊಡಗಿನಲ್ಲಿ 30 ಸಾವಿರ ಹೆಕ್ಟರ್ ಪ್ರದೇಶದಲ್ಲಿದ್ದ ಕೃಷಿ, ಇದೀಗ 19 ಸಾವಿರ ಹೆಕ್ಟರ್ ಪ್ರದೇಶಕ್ಕೆ ಕುಸಿತವಾಗಿರುವ ವರದಿ ಅತ್ಯಂತ ಆತಂಕಕಾರಿ ಎಂದು ಹೇಳಿದರು.ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರು ಮಾತನಾಡಿ ಕಕ್ಕಡ 18 ಆಚರಣೆಯ ವಿಶೇಷತೆಯಲ್ಲಿ ತೀವ್ರ ಚಳಿ ಶೀತ ವಾತಾವರಣ ಹಾಗೂ ಕೃಷಿ ಚಟುವಟಿಕೆಯಲ್ಲಿ ನಿರತರಾದ ಸಂದರ್ಭ ಜನರ ಆರೋಗ್ಯ ರಕ್ಷಣೆಗೆ ಆಹಾರವನ್ನು ಪೂರ್ವಜರು ವೈಜ್ಞಾನಿಕವಾಗಿ ನಿರ್ಧರಿಸಿದ್ದಾರೆ. ಪ್ರಕೃತಿಯಿಂದ ನಾವು ಆಹಾರವನ್ನು ಪಡೆಯುತ್ತೇವೆ. ಅದರಿಂದ ಪ್ರಕೃತಿಯನ್ನು ರಕ್ಷಿಸಬೇಕು ಹಾಗೂ ಪೂಜೆ ಮಾಡಬೇಕು ಎಂದಿಗೂ ನಾಶ ಮಾಡ ಬಾರದು ಎಂದು ಕಿವಿ ಮಾತು ಹೇಳಿದರು.
ಹತ್ತನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ಲಯನ್ಸ್ ಶಾಲಾ ವಿದ್ಯಾರ್ಥಿ ಕಾಟಿಮಾಡ ಭಾಷಿತ ದೇವಯ್ಯ ಹಾಗೂ ಪೊನ್ನಂಪೇಟೆ ಸಿಐಟಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಚೆಪ್ಪುಡೀರ ಹರ್ಷಿಣಿ ಪ್ರದೀಪ್ ಅವರನ್ನು ಈ ಸಂದರ್ಭ ಸನ್ಮಾನಿಸಿ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು.
ಡಾ. ಮುಕ್ಕಾಟೀರ ಗ್ರೀಷ್ಮ ಬೋಜಮ್ಮ ಮಾತನಾಡಿ, ಸಮಾಜದಲ್ಲಿ ಎಲ್ಲಾ ವರ್ಗದ ಜನರಿದ್ದಾರೆ. ಇಂದಿಗೂ ಶೇ. 65 ರಷ್ಟು ಜನರು ಸರ್ಕಾರಿ ಆರೋಗ್ಯ ಸೇವೆಯನ್ನು ಅವಲಂಬಿಸಿದ್ದಾರೆ. ಕೊಡಗಿನ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಕೊಡಗಿನಲ್ಲಿ ಸರ್ಕಾರಿ ಸೇವೆ ಸಲ್ಲಿಸಲು ಅವಕಾಶಗಳಿವೆ. ನಮ್ಮ ಮಕ್ಕಳು ಸರ್ಕಾರಿ ಸೇವೆಗೆ ಸೇರಬೇಕು ಹಣ ಮಾಡುವುದು ಒಂದೇ ಗುರಿ ಆಗಬಾರದು ಎಂದು ಹೇಳಿದರು.
ಪಟ್ಟೋಲೆ ಪಳಮೆ ಕೃತಿಗೆ ನೂರು ವರ್ಷ: ನಡಿಡಿಕೇರಿಯಂಡ ಚಿಣ್ಣಪ್ಪ ಅವರು ಬರೆದಿರುವ ಕೊಡವರ ಭಗವದ್ಗೀತೆ ಎಂದೇ ಕರೆಯುವ ಪಟ್ಟೋಲೆ ಪಳಮೆ ಕೃತಿ ರಚನೆಯಾಗಿ ನೂರು ವರ್ಷ ಆದ ಸಂದರ್ಭ ಇಂದಿನ ವೇದಿಕೆಗೆ ‘ಕೃತಿಯ’ ಹೆಸರಿಡಲಾಗಿತ್ತು. ನಡಿಕೇರಿಯಂಡ ಚೆಣ್ಣಪ್ಪ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನವನ್ನು ಗಣ್ಯರು ಸಲ್ಲಿಸಿದರು.
ಹಿತರಕ್ಷಣ ಬಳಗದ ಅಧ್ಯಕ್ಷರಾಗಿದ್ದ ಕಾಯಪಂಡ ಸನ್ನಿ ಬೋಪಣ್ಣ ಅವರ ಅಕಾಲಿಕ ನಿಧನಕ್ಕೆ ಮೌನಚರಣೆ ಮಾಡಲಾಯಿತು.
ಮಂದತವ್ವ ತಂಡದಿಂದ ಗೆಜ್ಜೆತಂಡ್ ನೃತ್ಯ ಯಂಗ ಕಲಾರಂಗ ತಂಡದಿಂದ ಕೊಡವ ಕಿರು ನಾಟಕ ಹಾಡು ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.
ಪೊನ್ನಂಪೇಟೆಯಲ್ಲಿ ಕಕ್ಕಡ ಪದ್ ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ: ಕೊಡವ ಹಿತರಕ್ಷಣಾ ಬಳಗ ಕ್''''''''''''''''ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ಆಶ್ರಯದಲ್ಲಿ 13ನೇ ವರ್ಷದ ಕಕ್ಕಡ ಪದ್''''''''''''''''ನೆಟ್ಟ್ ಪಂಜಿನ ಮೆರವಣಿಗೆ ಕಾರ್ಯಕ್ರಮ ಪೊನ್ನಂಪೇಟೆಯಲ್ಲಿ ಶನಿವಾರ ಸಂಜೆ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಆರಂಭವಾದ ಮೆರವಣಿಗೆ ಮುಖ್ಯಬೀದಿಯಲ್ಲಿ ಸಾಗಿ ಬಸವೇಶ್ವರ ದೇವಸ್ಥಾನ ವೃತ್ತದಲ್ಲಿ ಸಾಗಿ ಬಸ್ ನಿಲ್ದಾಣದಲ್ಲಿ ಒಡ್ಡೋಲಗದೊಂದಿಗೆ ವಾಲಗತಾಟ್ ಗೆ ಹೆಜ್ಜೆ ಹಾಕಿದ ಮಹಿಳೆಯರು, ಮಕ್ಕಳು ಸೇರಿ ಸಾಮೂಹಿಕವಾಗಿ ಕುಣಿದು ಸಂಭ್ರಮಿಸಿದರು.