ನಗರದಲ್ಲಿ ಸಾಮೂಹಿಕ ಸ್ವಚ್ಛತೆಫುಟ್ಪಾತ್‌ ಒತ್ತುವರಿ ತೆರವು

KannadaprabhaNewsNetwork |  
Published : Aug 17, 2025, 01:41 AM IST
BBMP 6 | Kannada Prabha

ಸಾರಾಂಶ

ಬಿಬಿಎಂಪಿಯ ಎಂಟು ವಲಯಗಳ ಪೈಕಿ ಶನಿವಾರ ಆರು ವಲಯದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಬಿಎಂಪಿಯ ಎಂಟು ವಲಯಗಳ ಪೈಕಿ ಶನಿವಾರ ಆರು ವಲಯದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ವಲಯವಾರು ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಪೂರ್ವ ವಲಯ, ಪಶ್ಚಿಮ, ದಕ್ಷಿಣ, ಯಲಹಂಕ, ಆರ್‌ಆರ್‌ ನಗರ ಹಾಗೂ ಬೊಮ್ಮನಹಳ್ಳಿ ವಲಯದಲ್ಲಿ ಆಯಾ ವಲಯ ಆಯುಕ್ತರ ನೇತೃತ್ವದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಹಾಗೂ ಸಿಬ್ಬಂದಿ ನಿಯೋಜಿಸಿಕೊಂಡು ಸ್ವಚ್ಛತಾ ಅಭಿಯಾನ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪೂರ್ವದಲ್ಲಿ ಹೊಸೂರು ಮುಖ್ಯ ರಸ್ತೆಯ ಆನೆಪಾಳ್ಯ ಜಂಕ್ಷನ್ ನಿಂದ ರೆಸಿಡೆನ್ಸಿ ರಸ್ತೆವರೆಗೆ 4.4 ಕಿ.ಮೀ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕಮ್ಮನಹಳ್ಳಿ ಮುಖ್ಯರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ, ಸುಬ್ಬಯ್ಯ ಪಾಳ್ಯ, ಪಶ್ಚಿಮ ವಲಯದಲ್ಲಿ ಜಗಜೀವನರಾಮ್ ನಗರ, ರಾಜಾಜಿನಗರ 2 ಹಾಗೂ 3ನೇ ಅಡ್ಡರಸ್ತೆ ಮತ್ತು ತಿಮ್ಮಯ್ಯ ರಸ್ತೆ, ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್, ನಂದಿನಿ ಲೇಔಟ್, ಮಲ್ಲೇಶ್ವರದ ವಿವಿಧ ರಸ್ತೆ.

ದಕ್ಷಿಣ ವಲಯದ ದೀಪಾಂಜಲಿ ನಗರ, ಮಡಿವಾಳ ಮಾರುಕಟ್ಟೆ ರಸ್ತೆ, ಕೆಂಪಾಂಬುದಿ ಕೆರೆ, ಜಯನಗರ 9ನೇ ಬ್ಲಾಕ್ ರಸ್ತೆ, ಯಲಹಂಕ ವಲಯದ ಥಣಿಸಂದ್ರ ಮುಖ್ಯರಸ್ತೆ, ರಮಣಶ್ರೀ ಕ್ಯಾಲಿಫೋರ್ನಿಯ ರೆಸಾರ್ಟ್ ನಿಂದ ಅಟ್ಟೂರು, ಅನಂತಪುರ ಮುಖ್ಯರಸ್ತೆ, ಜಕ್ಕೂರು ಲೇಔಟ್ ಪ್ರದೇಶ, ರಾಜರಾಜೇಶ್ವರಿನಗರ ವಲಯದ ಕೆಂಗೇರಿ ಬಸ್ ನಿಲ್ದಾಣ, ಮೈಸೂರು ರಸ್ತೆ, ಕೆಂಗೇರಿ ಕೆರೆ, ಬೊಮ್ಮನಹಳ್ಳಿ ವಲಯದ ಬೇಗೂರಿನ ಮೈಕೋ ಲೇಔಟ್ ಸೇರಿದಂತೆ ಮೊದಲಾದ ಕಡೆ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಂಡು ರಸ್ತೆ ಬದಿಯಿರುವ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

PREV

Recommended Stories

ಕರಾವಳಿ, ಮಲೆನಾಡದಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ