ಮಡಿವಾಳ ಸಮಾಜದಿಂದ ಸಾಮೂಹಿಕ ವಿವಾಹ

KannadaprabhaNewsNetwork |  
Published : Jan 05, 2025, 01:34 AM IST
ಸುದ್ದಿಗೋಷ್ಠಿಯ್ಲಿ ಮಾತನಾಡಿದ  ಮಡಿವಾಳ ಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ | Kannada Prabha

ಸಾರಾಂಶ

ಮಡಿವಾಳ ಮಾಚಿದೇವರ ಜಯಂತುತ್ಸವದ ಅಂಗವಾಗಿ ಮಡಿವಾಳ ಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಬರುವ ಏಪ್ರಿಲ್ 14ರಂದು ಬೆಂಗಳೂರಿನಲ್ಲಿ ಮಡಿವಾಳ ಸಮಾಜದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ, ತುಮಕೂರು

ಮಡಿವಾಳ ಮಾಚಿದೇವರ ಜಯಂತುತ್ಸವದ ಅಂಗವಾಗಿ ಮಡಿವಾಳ ಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಬರುವ ಏಪ್ರಿಲ್ 14ರಂದು ಬೆಂಗಳೂರಿನಲ್ಲಿ ಮಡಿವಾಳ ಸಮಾಜದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.

ನಗರದ ಮಡಿವಾಳ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಮಂಜುನಾಥ್, ಆರ್ಥಿಕವಾಗಿ ಹಿಂದುಳಿದಿರುವ ಮಡಿವಾಳ ಸಮಾಜದ ಬಡ ಕುಟುಂಬಗಳಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಸಾಮೂಹಿಕ ವಿವಾಹಕ್ಕಾಗಿ ವಧು, ವರರ ಹೆಸರು ನೋಂದಣಿ ಆರಂಭವಾಗಿದೆ ಎಂದು ಹೇಳಿದರು.ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ಜೋಡಿಗಳು ತಂದೆ, ತಾಯಿಯ ಅನುಮತಿ ಪಡೆದಿರಬೇಕು, ವಧುವಿಗೆ ಕನಿಷ್ಠ 18 ವರ್ಷ, ವರನಿಗೆ ಕನಿಷ್ಠ 21 ವರ್ಷ ಆಗಿರಬೇಕು ಎಂಬುದೂ ಸೇರಿದಂತೆ ವಿವಿಧ ಷರತ್ತುಗಳಿಗೆ ಬದ್ಧವಾಗಿರಬೇಕು. ಮಡಿವಾಳ ಸಮಾಜದ ಕುಟುಂಬಗಳ ಸಾಂಪ್ರದಾಯಕ ಶಾಸ್ತ್ರಗಳನ್ನು ವಿವಾಹದಲ್ಲಿ ಅನುಸರಿಸಲಾಗುವುದು. ವಿವಾಹಕ್ಕೆ ನೋಂದಣಿ ಮಾಡಿಸಿದ ವಧುವಿಗೆ ಚಿನ್ನದ ಮಾಂಗಲ್ಯ, ಕಾಲುಂಗುರು, ಕಾಲು ಚೈನು, ರೇಷ್ಮೆ ಸೀರೆ, ವರನಿಗೆ ಕೈಗಡಿಯಾರ, ಬಟ್ಟೆ ಉಚಿತವಾಗಿ ನೀಡಲಾಗುವುದು. ವಧು-ವರನ ಜೊತೆ ಬರುವ ಎಲ್ಲಾ ಬಂಧುಬಳಗದವರಿಗೂ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.ಏಪ್ರಿಲ್ 14 ರಂದು ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಆದಿಚುಂಚನಗಿರಿ ಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಡಿವಾಳ ಸಮಾಜದ ಮಠಾಧೀಶರಾದ ಮೂಡಬಿದರೆ ಮಠದ ಮುಕ್ತಾನಂದ ಸ್ವಾಮೀಜಿ, ಚಿತ್ರದುರ್ಗ ಮಠದ ಬಸವ ಮಾಚಿದೇವ ಸ್ವಾಮೀಜಿ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಹೇಳಿದರು.ಮಡಿವಾಳ ಸಂಘದ ರಾಜ್ಯ ಅಧ್ಯಕ್ಷ ನಂಜಪ್ಪ ಮಾತನಾಡಿ, ಈಗ ಮದುವೆಗಳು ದುಬಾರಿಯಾಗುತ್ತಿವೆ. ಮಡಿವಾಳ ಬಡ ಕುಟುಂಬಗಳು ತಮ್ಮ ಮಕ್ಕಳ ಮದುವೆ ಮಾಡಲು ಕಷ್ಟಸಾಧ್ಯವಿರುವ ಪರಿಸ್ಥಿತಿಯಲ್ಲಿ ಸಾಮೂಹಿಕ ವಿವಾಹ ಪ್ರೋತ್ಸಾಹಿಸಬೇಕು. ಎಷ್ಟೇ ಜೋಡಿಗಳು ಹೆಸರು ನೋಂದಾಯಿಸಿಕೊಂಡರೂ ಎಲ್ಲರಿಗೂ ಅವಕಾಶ ನೀಡಲಾಗುವುದು. ಆಯಾ ಜಿಲ್ಲಾ ಸಂಘಗಳಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.ಜಿಲ್ಲಾ ಸಂಘದ ಗೌರವಾಧ್ಯಕ್ಷ ಕೆಂಪನರಸಯ್ಯ, ಮುಖಂಡ ಶಾಂತಕುಮಾರ್, ಸೇರಿದಂತೆ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ