ಮತಾಂತರ - ಗೋಹತ್ಯೆ ನಿಷೇಧ ರದ್ದುಗೊಳಿಸಿದರೆ ಜನಾಂದೋಲನ: ವಿಹಿಂಪ

KannadaprabhaNewsNetwork |  
Published : Nov 17, 2026, 02:30 AM IST
ವಿಶ್ವ ಹಿಂದೂ ಪರಿಷತ್ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಪ್ರತಿಬಂಧಕ ಕಾನೂನು ವಾಪಸು ಪಡೆಯುವ ನಿರ್ಧಾರ ಕೈಗೊಂಡಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮತ್ತು ಜನಾಂದೋಲನ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ವಿಶ್ವ ಹಿಂದು ಪರಿಷತ್-ಭಜರಂಗದಳವು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಉಡುಪಿ : ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಪ್ರತಿಬಂಧಕ ಕಾನೂನು ವಾಪಸು ಪಡೆಯುವ ನಿರ್ಧಾರ ಕೈಗೊಂಡಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮತ್ತು ಜನಾಂದೋಲನ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ವಿಶ್ವ ಹಿಂದು ಪರಿಷತ್-ಭಜರಂಗದಳವು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಹಿಂಪ ಜಿಲ್ಲಾ ಕಾರ್ಯಾಧ್ಯಕ್ಷ ಸುನೀಲ್ ಕೆ.ಆರ್., ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಹಿಂಪಡೆಯುವುದಾಗಿ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಇದನ್ನು ವಿಹಿಂಪ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರವು ಯಾವುದೋ ಸಂಘಟನೆಗಳ ಒತ್ತಡಕ್ಕೆ ಮಣಿದು ಸಮಾಜದ ಸಾಮರಸ್ಯ ಕದಡುವ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯು ರೈತರ ಹಿತಾಸಕ್ತಿ ಹಾಗೂ ಪಶುಸಂಪತ್ತಿನ ರಕ್ಷಣೆಗೆ ಅತ್ಯಗತ್ಯವಾಗಿದೆ. ಈ ಕಾಯ್ದೆಯನ್ನು ಹಿಂಪಡೆಯುವುದು ಅಥವಾ ದುರ್ಬಲಗೊಳಿಸುವುದು ರಾಜ್ಯದಲ್ಲಿ ಅನಗತ್ಯ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂದವರು ಎಚ್ಚರಿಕೆ ನೀಡಿದರು.ಅಲ್ಲದೇ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು ಕೇವಲ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 60 ದಿನಗಳ ಸೇನಾ ತರಬೇತಿಗೆ ಟೆಂಡರ್ ಕರೆದಿದ್ದು, ಸಂವಿಧಾನ ವಿಧಿ 14 (ಸಮಾನತೆಯ ಹಕ್ಕು) ಹಾಗೂ ವಿಧಿ 15(1) (ಧರ್ಮದ ಆಧಾರದಲ್ಲಿ ತಾರತಮ್ಮ ನಿಷೇಧ)ರ ಉಲ್ಲಂಘನೆಯಾಗಿದೆ. ಸೇನೆಯ ಮೇಲ್ವಿಚಾರಣೆ ಇಲ್ಲದೆ, ಖಾಸಗಿ ಸಂಸ್ಥೆಗಳ ಮೂಲಕ ತರಬೇತಿ ನೀಡುವುದು ರಾಷ್ಟ್ರೀಯ ಭದ್ರತೆಗೆ ಗಂಭೀರ ಅಪಾಯ ತಂದೊಡ್ಡಬಹುದು ಎಂದವರು ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಯೋಜಕ ಚೇತನ್ ಪೇರಲ್ಕೆ, ಸಹಕಾರ್ಯದರ್ಶಿ ವಿಖ್ಯಾತ್ ಭಟ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮ ಉಳಿದರೆ ಸಮಾಜದ ಉಳಿವು
ಅವ್ಯವಸ್ಥೆ ಕಂಡು ಗ್ರಂಥಪಾಲಕನಿಗೆ ತರಾಟೆ