ಕನ್ನಡಪ್ರಭ ವಾರ್ತೆ ಬೆಂಗಳೂರು
ತೆಲಂಗಾಣ ಮಾದರಿಯಂತೆ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆ ಬೆಳೆ ಹಾನಿಗೆ ₹25 ಸಾವಿರ ಪರಿಹಾರ ನೀಡಬೇಕು. ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಜಾರಿಗೊಳಿಸಬೇಕು. ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸಲು ವೈಜ್ಞಾನಿಕ ಮಾನದಂಡ ಬಳಸಬೇಕು. ಕಬ್ಬಿನ ಎಥನಾಲ್ ಉತ್ಪಾದನಾ ಲಾಭದ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು ಎಂದು ರೈತರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ರೈತರ ಆತ್ಮಹತ್ಯೆ ಹೆಚ್ಚಾಗುತ್ತಿವೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿವೆ. ಆದ್ದರಿಂದ ಕಳೆದ ಹತ್ತು ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ, ವೆಚ್ಚದ ಬಗ್ಗೆ ಈ ಎರಡೂ ಸರ್ಕಾರಗಳು ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.ಪ್ರತಿಭಟನೆ ವಾಪಾಸ್