ಸಾಮೂಹಿಕ ಸತ್ಯನಾರಾಯಣ ಪೂಜೆ ಸಂಪನ್ನ

KannadaprabhaNewsNetwork |  
Published : Feb 19, 2026, 03:00 AM IST
1: ಕೊಡಗರಹಳ್ಳಿ ಶ್ರೀ ಬೈತೂರಪ್ಪ ಪೊವ್ಚದಿ, ಬಸವೇಶ್ವರ ದೇವಾಲಯ.2: ಶಿವರಾತ್ರಿ ಪ್ರಯುಕ್ತ ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ  ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರು  ನೇರೆದಿರುವುದು. | Kannada Prabha

ಸಾರಾಂಶ

ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆದು ನಂತರ ನೆರದಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಸತ್ಯನಾರಾಯಣ ಪೂಜೆ ಜೆನಡೆಸಿದರು. ಅವರಿಗೆ ಸಹಾಯಕರಾಗಿ ಪ್ರಕಾಶ್ ಕುದ್ದಣ್ಣಯ್ಯ ಮತ್ತು ಪ್ರಜ್ವಲ್ ಕುದ್ದಣ್ಣಯ್ಯ ಸಹಕರಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಶಿವನ ನಾಮಸ್ಮರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು.ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆಯ ನಂತರ ನೆರೆದಿದ್ದ ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಯಿತು.ದೇವಾಲಯ ಸಮಿತಿ ಅಧ್ಯಕ್ಷ ಡಾ. ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಜಿ ಅಜಿತ್, ಹಾಗೂ ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಇತರರು ಹಾಜರಿದ್ದರು.ಸುಂಟಿಕೊಪ್ಪ, ಕೊಡಗರಹಳ್ಳಿ, ಪನ್ಯ, ಉಪ್ಪುತೋಡು, ಕಂಬಿಬಾಣೆ, ಕುಶಾಲನಗರದಿಂದ ಭಕ್ತರು ಆಗಮಿಸಿ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದರು.ಕೊಡಗರಹಳ್ಳಿ, ಶ್ರೀ ಬೈತೂರಪ್ಪ ಪೊವ್ಚದಿ, ಬಸವೇಶ್ವರ ದೇವಾಲಯದಲ್ಲಿ ಭಾನುವಾರ ಮಧ್ಯಾಹ್ನ ವಿಶೇಷ ಪೂಜೆ ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.ಸಂಜೆ ಬೈತೂರಪ್ಪ ಭಜನಾ ಮಂಡಳಿಯ ವತಿಯಿಂದ 3 ಗಂಟೆಗಳ ಕಾಲ ಭಕ್ತಿಗೀತೆ ಮತ್ತು ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿಯ ಮಹಾಪೂಜೆಯ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಬೆಳಗಿನ ಸಂಜೆಯ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಧಾನ ಅರ್ಚಕ ರಾಘವೇಂದ್ರಭಟ್ ಮತ್ತು ಸಹಾಯಕರಾಗಿ ನರಸಿಂಹಭಟ್ ನೆರವೇರಿಸಿದರು. ಸಂಜೆ 6.30 ರಿಂದ ಶ್ರೀಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಕಾಳರಾತ್ರಿ ಕಾಲ್ಪನಿಕ ನಾಟಕ ನಡೆಯಿತು ಶ್ರೀಬೈತೂರಪ್ಪ ಭಜನಾ ಮಂಡಳಿ ವತಿಯಿಂದ ರಾತ್ರಿ ಅನ್ನ ಸಂತರ್ಪಣೆಯು ನಡೆಯಿತು. ದೇವಾಲಯ ದೇವಾಲಯ ಸಮಿತಿ ಪ್ರಮುಖರು ಟ್ರಸ್ಟಿಗಳು ಬೈತೂರಪ್ಪ ಭಜನಾ ಮಂಡಳಿ ಯ ಪ್ರಮುಖರು ಸೇರಿದಂತೆ ನೂರಾರು ಮಂದಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ಮಧ್ಯಾಹ್ನ ವಿಶೇಷ ಪೂಜಾ ಕಾರ್ಯಗಳು ನಡೆದವು.

--------------------------------------------------------

1: ಕೊಡಗರಹಳ್ಳಿ ಶ್ರೀ ಬೈತೂರಪ್ಪ ಪೊವ್ಚದಿ, ಬಸವೇಶ್ವರ ದೇವಾಲಯ.2: ಶಿವರಾತ್ರಿ ಪ್ರಯುಕ್ತ ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರು ನೇರೆದಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊರಗರು ಮುಖ್ಯ ವಾಹಿನಿಗೆ ಬರಲು ಪೂರ್ಣ ಸಹಕಾರ: ಗಂಟಿಹೊಳೆ
ಧರ್ಮದ ಹಾದಿಯಲ್ಲಿ ಸಾಗಿದರೆ ಪುಣ್ಯದ ಫಲ