ಇಂದಿನಿಂದ ಸಾಮೂಹಿಕ ಲಸಿಕಾ ಅಭಿಯಾನ

KannadaprabhaNewsNetwork |  
Published : Nov 03, 2025, 02:15 AM IST
್ಿ್ಿ್ಿ | Kannada Prabha

ಸಾರಾಂಶ

ನ. 3 ರಿಂದ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನ. 3 ರಿಂದ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಅಭಿಯಾನದಲ್ಲಿ ಪ್ರತಿಯೊಂದು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಬೇಕು. ಲಸಿಕಾ ಕರ್ತವ್ಯದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರದೇ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಸೂಚನೆ ನೀಡಿದರು.ಕಾಲುಬಾಯಿ ಜ್ವರದಂತಹ ಸಾಂಕ್ರಾಮಿಕ ರೋಗದಿಂದ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು. ಅಭಿಯಾನ ಪ್ರಗತಿ ಕುರಿತು ಎಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂಬ ವಿವರವನ್ನು ಅಧಿಕಾರಿಗಳು ಪ್ರತಿದಿನ ಸಲ್ಲಿಸಬೇಕು ಎಂದು ಸೂಚಿಸಿದರು.ಸ್ಥಳೀಯ ಗ್ರಾಮ ಪಂಚಾಯಿತಿಗಳು ಈ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಹಾಲಿನ ಡೈರಿ ಮತ್ತು ಪಶುಪಾಲನಾ ಕೇಂದ್ರಗಳ ಮುಂದೆ ಅಭಿಯಾನದ ಪೋಸ್ಟರ್‌ಗಳನ್ನು ಅಳವಡಿಸಿ ಪಶುಪಾಲಕರಿಗೆ ಮಾಹಿತಿ ನೀಡುವಂತೆ ಸೂಚಿಸಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಶಿವಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿದ್ದು, ಪಶುಪಾಲನಾ ಇಲಾಖೆಯ 554 ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧಿಕಾರಿಗಳು ಹಾಗೂ ವಿವಿಧ ತಾಲೂಕು ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ