ಆಗಸ್ಟ್ 26 ರಂದು ಸಾಮೂಹಿಕವಿವಾಹ ಮಹೋತ್ಸವ:ಶಾಸಕ

KannadaprabhaNewsNetwork |  
Published : May 20, 2026, 12:45 AM IST
18ಬಿಜಿಪಿ-1 | Kannada Prabha

ಸಾರಾಂಶ

ಕಳೆದ 25 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕಿನ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ವರ್ಷವೂ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ.

ಬಾಗೇಪಲ್ಲಿ: 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಆ.26 ರಂದು ಬಾಗೇಪಲ್ಲಿ ಪಟ್ಟಣಕ್ಕೆ ಸಮೀಪದ ಪುರಾಣ ಪ್ರಸಿದ್ಧ ಗಡಿದಂ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ಸನ್ನಿಧಿಯಲ್ಲಿ ನಡೆಯಲಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 25 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕಿನ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ವರ್ಷವೂ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ.

ಇಲ್ಲಿವರೆಗೆ ಸುಮಾರು 7 ಸಾವಿರಕ್ಕೂ ಹೆಚ್ಚಿನ ಜೋಡಿಗಳು ಸಾಮೂಹಿಕ ವಿವಾಹಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ಜೋಡಿಗೂ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಸೀಮೆ ಹಸುವೊಂದನ್ನು ಕೊಡುಗೆಯಾಗಿ ನೀಡಲಾಗುತ್ತಿದೆ. ಕಡುಬಡವರಿಗೆ ಅನುಕೂಲವಾಗುವ ಏಕೈಕ ಉದ್ದೇಶದಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಲಾಗುತ್ತಿರುವುದಾಗಿ ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಆ.26 ರ ಬುಧವಾರ ಗಡಿದಂ ಶ್ರೀ ವೆಂಕಟರಮಣಸ್ವಾಮಿ ಸನ್ನಿಧಿಯಲ್ಲಿ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಪಟ್ಟಣದ ಮುಖ್ಯರಸ್ತೆಯಲಿರುವ ತಮ್ಮ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗೆ ಸಲ್ಲಿಸುವಂತೆ ತಿಳಿಸಿದರಲ್ಲದೆ 21 ವರ್ಷ ಮೇಲ್ಪಟ್ಟ ಯುವಕ ಹಾಗೂ 18 ವರ್ಷ ಮೇಲ್ಪಟ್ಟ ಯುವತಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯಸ್ಸಿನ ದೃಢೀಕರಣದ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದ ಅವರು ಹೆಚ್ಚಿನ ಮಾಹಿತಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ತಮ್ಮ ಟ್ರಸ್ಟ್ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಿದರು.

18ಬಿಜಿಪಿ-1: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನ್ ಸಂಸ್ಥೆ ಸಹಯೋಗದಿಂದ ಶಿಶು ಮಂದಿರದಲ್ಲಿ 12 ಎಲೆಕ್ಟ್ರಿಕ್ ಆಟೋರಿಕ್ಷಾಗಳನ್ನು ಹಸ್ತಾಂತರ
ರಾಮಚರಿತ ಮಾನಸ ಸೇರಿ ಅಮೂಲ್ಯ ಕಾಣಿಕೆ ಪ್ರದರ್ಶನ