ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ವಿಠ್ಠಲ ಸಮುದಾಯ ಭವನದಲ್ಲಿ (ಗುರುಶ್ರೀ ಚಿತ್ರಮಂದಿರ ಪಕ್ಕ) ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಸುಭಾಷ್ ಚಂದ್ರಬೋಸ್ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯ 127 ಹಳ್ಳಿಗಳ ಯುವಜನರು ರಕ್ತದಾನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಟ್ರಸ್ಟ್‌ನಿಂದ ಈಗಾಗಲೇ 14 ಜಿಲ್ಲೆಗಳಲ್ಲಿ ಹಾಗೂ ಅಂಡಮಾನ್‌ನಲ್ಲಿ ರಕ್ತದಾನ ಶಿಬಿರ ನಡೆಸಿದ್ದು, ಇದು 317ನೇ ಶಿಬಿರವಾಗಿದೆ. ಈ ಬಾರಿ ಸುಮಾರು 1500 ರಿಂದ 2000 ಮಂದಿ ರಕ್ತದಾನ ಮಾಡಬಹುದು ಎಂಬ ನಿರೀಕ್ಷೆ ಇದೆ. ಕನಿಷ್ಠ 1500 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದ್ದೇವೆ ಎಂದರು.ಜೀವಧಾರೆ ಟ್ರಸ್ಟ್ ಇದುವರೆಗೆ ನಡೆದ ಶಿಬಿರಗಳಲ್ಲಿ ಸಂಗ್ರಹವಾದ ರಕ್ತವನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಿದ್ದೇವೆ. ಈ ಬಾರಿ ಬೆಂಗಳೂರಿ ಸೈನಿಕ ಆಸ್ಪತ್ರೆಯಾಗಿರುವ ಬೆಂಗಳೂರಿನ ಕಮಾಂಡ್ ಹಾಸ್ಪಿಟಲ್ ಏರ್‌ಪೋರ್ಸ್‌ಗೆ ನೀಡಲಾಗುತ್ತಿದೆ. ದೇಶ ಕಾಯುವ ಸೈನಿಕರಿಗಾಗಿ ಈ ರಕ್ತವನ್ನು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಬೃಹತ್ ರಕ್ತದಾನದ ಅಂಗವಾಗಿ ಶನಿವಾರ ನಗರದ ವಿವಿಧ ರಸ್ತೆಗಳಲ್ಲಿ ಬೈಕ್ ರ್‍ಯಾಲಿ ನಡೆಸುವ ಮೂಲಕ ಯುವ ಸಮುದಾಯ, ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಸುಧೀರ್ ಪಾರ್ಕ್ ಸ್ವರ್ಣಸಂದ್ರದಿಂದ ಪ್ರಾರಂಭವಾಗುವ ಬೈಕ್ ರ್‍ಯಾಲಿ ಗುತ್ತಲು ರಸ್ತೆ, ಫ್ಯಾಕ್ಟರಿ ಸರ್ಕಲ್ ಹತ್ತಿರ ಚೀರನಹಳ್ಳಿ ರಸ್ತೆಯ ಉದಯಗಿರಿಯ ಒಳ ರಸ್ತೆ, ಲೇಬರ್ ಕಾಲೋನಿ ಮುಖ್ಯರಸ್ತೆಯಲ್ಲಿ ಸಾಗಿ ಚೆನ್ನಯ್ಯ ಪಾರ್ಕ್ ವರೆಗೆ ಬರಲಿದೆ ಎಂದರು.
ನಿವೃತ್ತ ಯೋಧ ಉದಯಕುಮಾರ್ ಮಾತನಾಡಿ, ಶಿಬಿರದಲ್ಲಿ ಸಂಗ್ರಹವಾಗುವ ರಕ್ತವನ್ನು ಸೈನಿಕರ ಆರೋಗ್ಯ ದೃಷ್ಟಿಯಿಂದ ಸೈನಿಕ ಆಸ್ಪತ್ರೆಗೆ ನೀಡಲಾಗುತ್ತಿದೆ. ಈಗಾಗಲೇ ಆಸ್ಪತ್ರೆ ಮುಖ್ಯಸ್ಥರನ್ನು ಸಂಪರ್ಕಿಸಿದ್ದೇವೆ. ಸಾಮಾನ್ಯವಾಗಿ ಸೈನಿಕರಿಗೆ ರಕ್ತ ಬೇಕಿದ್ದರೆ ಸಾಮಾಜಿಕ ಜಾಲತಾಣ ಅಥವಾ ಅವರ ಬಳಿ ಇರುವ ದೂರವಾಣಿಗಳನ್ನು ಸಂಪರ್ಕಿಸಿ ರಕ್ತ ತರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಶಿಬಿರದಲ್ಲಿ ಸಂಗ್ರಹ ಮಾಡುವತ್ತ ಗಮನ ಹರಿಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಿವೃತ್ತ ಯೋಧ ರವಿ, ಜೀವಧಾರೆ ಟ್ರಸ್ಟ್‌ನ ಮಹದೇವು, ಯೋಗಣ್ಣ, ಕುಮಾರ್, ಸುನಿಲ್, ಹನುಮಂತು ಇದ್ದರು.