ಲೋಕಾ ಚುನಾವಣೆ ಬಳಿಕ ಭಾರೀ ಬದಲಾವಣೆ: ಟೆಂಗಿನಕಾಯಿ

KannadaprabhaNewsNetwork |  
Published : Feb 04, 2024, 01:31 AM IST
ಟೆಂಗಿನಕಾಯಿ | Kannada Prabha

ಸಾರಾಂಶ

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು

ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ರಾಜಕಾರಣದಲ್ಲಿ ಪರಿಣಾಮಕಾರಿ ಬದಲಾವಣೆ ಆಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಈ ಮೂಲಕ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನಗೊಳ್ಳುತ್ತದೆ ಎಂದು ಸೂಚ್ಯವಾಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯವಾಗುತ್ತಿಲ್ಲ. ಬದಲಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರಾಟೆಯಲ್ಲಿ ಶಾಸಕರಿಗೆ ಬಿಡಿಗಾಸು ಅನುದಾನ ನೀಡದೇ ಅನ್ಯಾಯ ಎಸೆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಪಶ್ಚಾತ್ತಾಪವಾಗಿದ್ದು, ಅವರ ಆಪ್ತರ ಮೂಲಕ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳುತ್ತವೆ ಎಂದು ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರಿಗೆ ಕಳೆದ 8 ತಿಂಗಳಿಂದ ನಯಾ ಪೈಸೆ ಅನುದಾನ ಬಂದಿಲ್ಲ. ಹೀಗಾಗಿ, ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳು ಆರ್ಥಿಕ ದಿವಾಳಿ ತೆಗೆಯುವ ಯೋಜನೆಗಳು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸ ಆಗುತ್ತಿದ್ದವು ಎಂದು ಇದೀಗ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದರು‌.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಬಿಜೆಪಿ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ. ಬಿಜೆಪಿ ಪಾಳೆಯದಲ್ಲಿ ಕೆಲ ಊಹಾಪೋಹ ಹರಿಬಿಡಲಾಗಿದೆ. ಶೆಟ್ಟರ ಆಗಮನದಿಂದ ಪಕ್ಷಕ್ಕೆ ಬಲ ಬಂದಿದೆ. ಸಣ್ಣ ಪುಟ್ಟ ಸಮಸ್ಯೆ, ಬಿರುಕು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲಾಗುವುದು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವತ್ತ ಪಕ್ಷ ಸಂಘಟಿಸಲಾಗುವುದು ಎಂದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಧಾರವಾಡ ಸಂಸದರಾಗಿ ಕಳೆದ ನಾಲ್ಕು ಅವಧಿಯಿಂದ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ನಿಸ್ಸಂದೇಹವಾಗಿ ಈ ಬಾರಿಯೂ ಅವರೇ ಧಾರವಾಡ ಲೋಕಸಭೆಗೆ ಬಿಜೆಪಿ ಅಭ್ಯರ್ಥಿ ಎಂದರು.

ಒಳಜಗಳ, ಭ್ರಷ್ಟಾಚಾರದ ಗಮನ ಬೇರೆಡೆ ಸೆಳೆಯಲು ಆರೋಪ: ಜೋಶಿಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಒಳಜಗಳ ಹೆಚ್ಚಾಗಿದೆ. ಅದರ ಗಮನ ಬೇರೆಡೆ ಸೆಳೆಯಲು ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಗೂಬೆ ಕೂಡಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮಾಧ್ಯಮಗಳೊಂದಿಗೆ ಮಾತನಾಡಿ, ಇವರಿಗೆ ಸರ್ಕಾರ ನಡೆಸಲು ಬರುತ್ತಿಲ್ಲ. ಕೇಂದ್ರದಿಂದ ಅತಿ ಹೆಚ್ಚು ಅನುದಾನ ಕೊಟ್ಟರೂ ಕಾಂಗ್ರೆಸ್ ಯಾಕೆ ಧರಣಿ ಮಾಡುತ್ತಿದೆ? ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕರೇ ಆರೋಪ ಮಾಡಿದ್ದಾರೆ. 2004ರಿಂದ ಯುಪಿಎ ಸರ್ಕಾರದ ಗ್ರ್ಯಾಂಟ್ 60 ಸಾವಿರ ಕೋಟಿ. ಮೋದಿ ನೇತೃತ್ವದ ಸರ್ಕಾರ 10 ವರ್ಷದಲ್ಲಿ ₹2.36 ಲಕ್ಷ ಕೋಟಿ ಅನುದಾನ ನೀಡಿದೆ. ಡಿ.ಕೆ. ಶಿವಕುಮಾರ್ ಕೇಂದ್ರದಿಂದ ಅನುದಾನ ಬಂದಿಲ್ಲ ಎನ್ನುವುದರಲ್ಲಿ ಅರ್ಥವಿಲ್ಲ. ನಮ್ಮ ಅನುದಾನದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದರು.ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನಡುವೆ ಪ್ರತಿಷ್ಠೆಗಾಗಿ ಪೈಪೋಟಿ ನಡೆದಿದೆ. ಹೀಗಾಗಿ, ಆ ಪ್ರತಿಷ್ಠೆಗಾಗಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಇಲ್ಲ ಸಲ್ಲದ ಗೂಬೆ ಕೂಡಿಸುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ