ಶಕ್ತಿ ಯೋಜನೆಯಿಂದಾಗಿ ಭಕ್ತರ ಸಂಖ್ಯೆ ಭಾರಿ ಏರಿಕೆ । ಇಷ್ಟಾರ್ಥ ಸಿದ್ಧಿಗಾಗಿ ಭಕ್ತರಿಂದ ಸೇವೆ
ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಭಕ್ತ ಸಾಗರವೇ ಹರಿದುಬಂದಿತ್ತು.
ಟಿಕೆಟ್‌ಗಳನ್ನು ಖರೀದಿಸಿದ್ದರೂ ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಲ್ಲುವಷ್ಟು ಜನಸ್ತೋಮ ಕಂಡುಬಂದಿತು. ಜೊತೆಗೆ, ಸೂಕ್ತ ಸಮಯಕ್ಕೆ ಗೇಟ್‌ಗಳನ್ನು ತೆರೆಯದ ಹಿನ್ನೆಲೆ ದೇವಸ್ಥಾನದ ಬಾಗಿಲು, ಗ್ರಿಲ್ಸ್, ಬ್ಯಾರಿಕೇಡ್‌ಗಳನ್ನು ಹತ್ತಿ ಭಕ್ತರು ದೇವಾಲಯ ಪ್ರವೇಶ ಮಾಡಿದರು.ಶಕ್ತಿ ಯೋಜನೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಭಕ್ತ ಸಂಖ್ಯೆ ಹೆಚ್ಚಿತ್ತು. ಜೊತೆಗೆ, ತಮಿಳುನಾಡಿನಿಂದಲೇ ಅಪಾರ ಪ್ರಮಾಣದ ಭಕ್ತರು ಆಗಮಿಸಿ ಕ್ಷೇತ್ರದ ದರ್ಶನ ಪಡೆದರು.ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಸೇವೆ ಮತ್ತು ಉತ್ಸವಗಳು ಸಾಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕವಾಗಿ ವಿಧಾನಗಳೊಂದಿಗೆ ಬೇಡಗಂಪಣ ಅರ್ಚಕರಿಂದ ನಡೆಯಿತು.ರುದ್ರಾಕ್ಷಿ ಮಂಟಪ ಉತ್ಸವ, ಹುಲಿ ವಾಹನ ಸೇರಿದಂತೆ ವಿವಿಧ ಉತ್ಸವದಲ್ಲಿ ಪಾಲ್ಗೊಂಡ ಭಕ್ತರು ಬಿಸಿಲು ಲೆಕ್ಕಿಸದೇ ಉರುಳು ಸೇವೆಯನ್ನೂ ಮಾಡಿದರು. ಪ್ರಾಧಿಕಾರವು ಕೂಡ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿತ್ತು.ಅಮವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತ ಸಮೂಹವು, ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಮಹದೇಶ್ವರನಲ್ಲಿ ಹರಕೆ ಹೊತ್ತು ಉರುಳು ಸೇವೆ, ಪಂಜಿನ ಸೇವೆ ಮತ್ತು ಧೂಪದ ಸೇವೆ ಮುಡಿಸೇವೆ ಸಲ್ಲಿಸಿ ಮಹದೇಶ್ವರನ ದರ್ಶನ ಪಡೆದರು.ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಗರ್ಭಗುಡಿ ಸೇರಿದಂತೆ ಪ್ರಾಕಾರಕ್ಕೆ ವಿವಿಧ ಬಗೆಯ ಹಣ್ಣು ತರಕಾರಿಗಳಿಂದ ಕಣ್ಮನ ಸೆಳೆಯುವಂತೆ ಅಲಂಕಾರ ಮಾಡಲಾಗಿತ್ತು.ಆಲಂಬಾಡಿ ಬಸವನಿಗೆ ಹಾಲು ಹಾಗೂ ಎಣ್ಣೆ ಅಭಿಷೇಕದೊಂದಿಗೆ ಜಮೀನುಗಳಲ್ಲಿ ಬೆಳೆಯುವ ದವಸ ಧಾನ್ಯಗಳನ್ನು ಅರ್ಪಿಸಿ ಸಹಸ್ರಾರು ಮಂದಿ ಭಕ್ತರು ಅಮಾವಾಸ್ಯೆ ಪೂಜೆ ಸಲ್ಲಿಸಿದರು.ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಿಶೇಷ ದಾಸೋಹ ವ್ಯವಸ್ಥೆ ಹಾಗೂ ನಿರಂತರ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಬಸ್ ನಿಲ್ದಾಣ, ಸಾಲೂರು ಮಠಕ್ಕೆ ತೆರಳುವ ರಸ್ತೆ ಹಾಗೂ ವಿವಿಧ ಆಯಕಟ್ಟಿನ ಸ್ಥಳಗಳು ಸೇರಿದಂತೆ ತಾಳುಬೆಟ್ಟ ಹಾಗೂ ವಿವಿಧ ಭಾಗಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಮೂಲಕ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು.ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಒಟ್ಟಿನಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಸಡಗರ ಮಾದಪ್ಪನ ಜಯಘೋಷ ಇಡೀ ಕ್ಷೇತ್ರದಲ್ಲಿ ಮಾರ್ದನಿಸಿತು.ಸಾಲೂರು ಮಠಕ್ಕೆ ಭೇಟಿ:
---
14ಸಿಎಚ್ಎನ್ 13 ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ವರ್ಷ ಮಾದಪ್ಪನ ಭಕ್ತಾದಿಗಳಿಂದ ಉರಳು ಸೇವೆ ನಡೆಯಿತು. .14ಸಿಎಚ್ಎನ್12 ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ವಿವಿಧ ಉತ್ಸವಗಳಲ್ಲಿ ಪಾಲ್ಗೊಂಡಿದ್ದ ಭಕ್ತ ಸಮೂಹ..