ಫೆಬ್ರವರಿ ಮೊದಲನೇ ವಾರದಲ್ಲಿ ಬೃಹತ್ ಉದ್ಯೋಗ ಮೇಳ: ಡಿಸಿ ಡಾ. ಕೆ. ವಿದ್ಯಾಕುಮಾರಿ

KannadaprabhaNewsNetwork |  
Published : Jan 02, 2025, 12:31 AM IST
1ಮೇಳ | Kannada Prabha

ಸಾರಾಂಶ

ಬೃಹತ್‌ ಕೌಶಲ್ಯ ರೋಜ್‌ಗಾರ್‌ ಉದ್ಯೋಗ ಮೇಳವು ಫೆಬ್ರವರಿಯಲ್ಲಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ಉಡುಪಿ ನಗರದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100 ಕ್ಕೂ ಹೆಚ್ಚು ಉದ್ಯೋಗದಾತರುಗಳು ಭಾಗವಹಿಸಲಿದ್ದು, 3500 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆಯಲಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ, ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ -ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಾಧ್ಯಮಗಳು ಹೆಚ್ಚಿನ ಪ್ರಚಾರ ಪಡಿಸಿ, ಹೆಚ್ಚು ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಊಟೋಪಚಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ನೋಂದಣಿಗೆ ವೆಬ್‌ಸೈಟ್ ಅನ್ನು ಶೀಘ್ರದಲ್ಲಿ ರಚಿಸಿ, ನೋಂದಣಿಗೆ ಅನುವು ಮಾಡಿಕೊಡಬೇಕು ಎಂದರು.

ಕೌಶಲ್ಯ ರೋಜಗಾರ್ ಮೇಳವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಮೇಳವು ಶಿಸ್ತು ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳುವುದರ ಜೊತೆಗೆ ಹೆಚ್ಚು ಜನರಿಗೆ ಉದ್ಯೋಗ ದೊರೆಯುವಂತಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌