ಎಸ್‌ಐಆರ್‌ ವೋಟ್‌ ಚೋರಿ ವಿರುದ್ಧ ಬೃಹತ್‌ ಪ್ರತಿಭಟನೆ

KannadaprabhaNewsNetwork |  
Published : Oct 10, 2026, 01:30 AM IST
09ಕೆಪಿಆರ್‌ಸಿಆರ್‌ 02:  | Kannada Prabha

ಸಾರಾಂಶ

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಮುಖಾಂತರ ವೋಟ್‌ ಚೋರಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಐಎನ್‌ಡಿಐಎ ಮೈತ್ರಿ ಕೂಟದ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಮುಖಾಂತರ ವೋಟ್‌ ಚೋರಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಐಎನ್‌ಡಿಐಎ ಮೈತ್ರಿ ಕೂಟದ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಸ್ಥಳೀಯ ನೇತಾಜಿನಗರ ವೃತ್ತದಲ್ಲಿ ಸೇರಿದ ಹೋರಾಟಗಾರರು ಬಂಗಾರ ಬಜಾರ್‌, ತೀನ್ ಖಂದೀಲ್‌, ಸೂಪರ್‌ ಮಾರ್ಕೇಟ್‌, ತಹಸೀಲ್ದಾರ್‌ ಕಚೇರಿ, ಕೇಂದ್ರ ಬಸ್‌ ನಿಲ್ದಾಣದ ಮುಖಾಂತರ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದವರೆಗೂ ಪ್ರತಿಭಟನಾ ರ್ಯಾಲಿಯನ್ನು ನಡೆಸಿದರು. ಮೆರವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಇಸಿ ಜ್ಞಾನೇಶ್‌ ಕುಮಾರ ಅವರ ಕೈಗೊಂಬೆ ಆಡುತ್ತಿದ್ದಾರೆ ಎಂದು ಅಣಕುಯಾತ್ರೆಯನ್ನು ನಡೆಸಿದರು. ನಂತರ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮುಖಂಡರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರಿಗೆ ಇರುವ ಮತದಾನ ಹಕ್ಕು ಕಸಿಯುವ ಹುನ್ನಾರ ಆಯೋಗ ನಡೆಸಿರುವುದು ಬಯಲಾಗಿದೆ. ಮುಖ್ಯ ಆಯುಕ್ತ ಜ್ಞಾನೇಶಕುಮಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸದೇ ಕೇಂದ್ರ ಸರ್ಕಾರಕ್ಕೆ ಪೂರಕವಾಗಿ ಕೆಲಸ ಮಾಡಿ ಲಕ್ಷಾಂತರ ಜನರ ಮತದಾನ ಹಕ್ಕು ಕಸಿಯುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ಮತಕಳ್ಳತನದ ಮೂಲಕ ಅಧಿಕಾರ ಹಿಡಿಯುವ ಷಡ್ಯಂತ್ರ ನಡೆಸುತ್ತಿದೆ. ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಇವರು ಸ್ವಾಯತ್ತತೆ ಸಂಸ್ಥೆಯ ಘನತೆಯನ್ನು ಹಾಳು ಮಾಡಿದ್ದಾರೆ. ಎಸ್‌ಐಆರ್ ಮೂಲಕ ಅರ್ಹ ಮತದಾರ ರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಬಿಜೆಪಿ ತಂತ್ರಕ್ಕೆ ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೂಡಲೇ ವಜಾಗೊಳಿಸಬೇಕೆಂದರು. ಅವೈಜ್ಞಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದ ಎಸ್‌ಐಆರ್ ರದ್ದುಗೊಳಿಸಿ ಮತದಾರರ ಹಕ್ಕು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಎ.ವಸಂತಕುಮಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಶಾಂತಪ್ಪ,ಮುಖಂಡರಾದ ಮಹ್ಮದ ಶಾಲಂ, ಶ್ರೀದೇವಿ ನಾಯಕ, ಬಷೀರುದ್ದೀನ್, ಜಯಣ್ಣ, ಡಾ.ರಜಾಕ್‌ ಉಸ್ತಾದ್, ಎನ್.ಶ್ರೀನಿವಾಸರೆಡ್ಡಿ, ಎಚ್.ಪದ್ಮಾ, ಮಾರೆಪ್ಪ ಹರವಿ, ಖಾಜಾ ಅಸ್ಲಾಂ, ಸೇರಿ ವಿವಿಧ ಬ್ಲಾಕ್‌ ಸಮಿತಿಗಳ ಪ್ರಮುಖರು, ಕಾರ್ಯಕರ್ತರು, ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಸೇರಿ ಅನೇಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರು ದಿನ ಅದ್ಧೂರಿ ಚಾಮರಾಜನಗರ ದಸರಾ
ರಕ್ತ ಹೀನತೆ ಮುಕ್ತ ತಾಲೂಕಾಗಿಸಲು ಕೈಜೋಡಿಸಿ