ಕನ್ನಡಪ್ರಭ ವಾರ್ತೆ ಮುಧೋಳ
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಮಾತನಾಡಿ, ಕಳೆದ 2025-26ನೇ ಸಾಲಿನ ಕಬ್ಬಿನ ಬಾಕಿ ಹಣ ನೀಡುವಂತೆ ರೈತರು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಹಿಂದೆ ಎಸ್‌ಪಿ ಆಗಿದ್ದ ಅಮರನಾಥ ರೆಡ್ಡಿಯವರು ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಸಂಧಾನ ನಡೆಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ಈಗಿನ ಪೊಲೀಸ್ ವರಿಷ್ಠಾಧಿಕಾರಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕಾರಣ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ನಮ್ಮ ರೈತರು ಹೊರಗಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ರೈತರ ತಲೆಗೆ ಕಟ್ಟಲಾಗುತ್ತಿದೆ ಎಂದು ದೂರಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 81 ರೈತರ ಮೇಲೆ 307 ಸೇರಿದಂತೆ ವಿವಿಧ ಕಠಿಣ ಕಲಂಗಳನ್ನು ಹಾಕಿ ಜೈಲಿಗೆ ಅಟ್ಟಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ 17 ಜನರ ಮೇಲೆ ಕೇಸ್ ದಾಖಲಾಗಿದ್ದು, ಈಗ ಮತ್ತೆ 13 ಜನರನ್ನು ಬಂಧಿಸಲಾಗಿದೆ. ಕಳೆದ ವಾರ 64 ರೈತರ ಮೇಲೆ ಕೇಸ್ ಹಾಕಿದ್ದಾರೆ. ಹೀಗೆ ಒಟ್ಟು 81 ರೈತರನ್ನು ಗುರಿಯಾಗಿಸಿಕೊಂಡು ಸರ್ಕಾರ ದೌರ್ಜನ್ಯ ಎಸಗುತ್ತಿದೆ. ಆದರೆ ಮಹಾಲಿಂಗಪುರ ಮತ್ತು ಮುಧೋಳ ಠಾಣೆಗಳಲ್ಲಿ ರೈತರು ಕಾರ್ಖಾನೆ ಮಾಲೀಕರ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತ ಕಾರ್ಖಾನೆ ಮಾಲೀಕರೊಂದಿಗೆ ಶಾಮೀಲಾಗಿದೆ ಎಂದು ಆರೋಪಿಸಿದರು.ಮುಧೋಳ ತಾಲೂಕಿನ ರೈತರ ಹೋರಾಟವು ಸಂಪೂರ್ಣವಾಗಿ ಗಾಂಧಿವಾದಿ ಹಾಗೂ ಶಾಂತಿಯುತ ಮಾರ್ಗದಲ್ಲಿದೆ. ಇದು ಯಾವುದೇ ರಾಜಕೀಯ ಪಕ್ಷದ (ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್) ಪ್ರೇರಿತ ಹೋರಾಟವಲ್ಲ ಎಂದು ಕಿಡಿಕಾರಿದರು.
ರೈತ ಮುಖಂಡರಾದ ಬಸವಂತಪ್ಪ ಕಾಂಬಳೆ, ಸುಭಾಸ ಶಿರಬೂರ, ಈರಪ್ಪ ಹಂಚಿನಾಳ, ದುಂಡಪ್ಪ ಯರಗಟ್ಟಿ, ಹಣಮಂತ ನಬಾಬ, ಮಹೇಶ ಪಾಟೀಲ, ಸುರೇಶ ಚಿಂಚಲಿ, ಮುತ್ತಪ್ಪ ಕೋಮಾರ, ಹನಮಂತಗೌಡ ಪಾಟೀಲ, ತುಳಜಪ್ಪ ವಾಲಿಮರದ, ಪರಸು ಮುರನಾಳ, ಮಲ್ಲು ದೇಸಾಯಿ, ಮುತ್ತಪ್ಪ ಪಿಚೇಲಿ, ಸಿದ್ದು ನಾಗರಡ್ಡಿ, ರುದ್ರಪ್ಪ ಅಡವಿ, ಉದಯ ಬಡಕಲಿ, ನಿಂಗಪ್ಪ ಹೊಸಕೋಟೆ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.
ಕೋಟ್....
- ಬಸವಂತಪ್ಪ ಕಾಂಬಳೆ, ಜಿಲ್ಲಾಧ್ಯಕ್ಷರು, ರೈತ