ಸೆ.6ಕ್ಕೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ: ರೆಡ್ಡಿಹಳ್ಳಿ ವೀರಣ್ಣ

KannadaprabhaNewsNetwork | Published : Aug 25, 2024 1:58 AM

ಸಾರಾಂಶ

ಚಳ್ಳಕೆರೆ ನಗರದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ಬಣ) ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಮಾರಕವಾಗುವಂತಹ ಕಾನೂನು ಜಾರಿಗೆ ತಂದು ರೈತರನ್ನು ಬೀದಿಪಾಲು ಮಾಡುತ್ತಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆರೋಪಿಸಿದ್ದಾರೆ.

ನಗರದ ಪ್ರವಾಸಿಮಂದಿರದಲ್ಲಿ ರೈತ ಸಂಘ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಅವಶ್ಯವಿರುವ ಹಣ ಬಿಡುಗಡೆ, ಸ್ವಾಮಿನಾಥನ್ ವರದಿಯಂತೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ ಜೋಡಣೆ ವಿರುದ್ಧ ಸೆ.೬ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿ, ಅಂದು ಬೆಳಗ್ಗೆ ೧೦.೩೦ಕ್ಕೆ ಬಳ್ಳಾರಿ ರಸ್ತೆಯ ಚಳ್ಳಕೆರೆಯಮ್ಮ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಹೊರಟು, ನೆಹರೂ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಬೆಸ್ಕಾಂ ಕಚೇರಿಗೆ ತೆರಳಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಕೈಬಿಡುವಂತೆ ಒತ್ತಾಯ ಪಡಿಸಲಾಗುವುದು. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಅವಶ್ಯವಿರುವ ಹಣ ಬಿಡುಗಡೆ ಮಾಡುವಂತೆ ತಹಸೀಲ್ದಾರ್, ಜಿಲ್ಲಾಧಿಕಾರಿ ಮೂಲಕ ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ರವಾನಿಸಲಾಗುವುದು. ಸ್ವಾಮಿನಾಥನ್ ವರದಿ ಜಾರಿ ಕುರಿತಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಗುವುದು ಎಂದರು.

ತಾಲೂಕು ಅಧ್ಯಕ್ಷ ಶ್ರೀಕಂಠಮೂರ್ತಿ ಮಾತನಾಡಿ, ರೈತರ ಹಲವಾರು ಬೇಡಿಕೆ ಈಡೇರಿಸಲು ಸಂಘಟನಾತ್ಮಕ ಹೋರಾಟ ನಡೆಸುವ ಅನಿರ್ವಾಯತೆ ಉಂಟಾಗಿದೆ. ಈ ಹಿನ್ನೆಲೆ ಸೆ.೬ರಂದು ಪ್ರತಿಭಟನೆ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ತಾಲೂಕಿನ ಪ್ರತಿ ಗ್ರಾಮದಿಂದಲೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ರೈತ ಮುಖಂಡರಾದ ಹಿರೇಹಳ್ಳಿ ರ‍್ರಿಸ್ವಾಮಿ, ಎಂ.ಎನ್.ಚನ್ನಕೇಶವಮೂರ್ತಿ, ಐ.ತಿಪ್ಪಾರೆಡ್ಡಿ, ಆರ್.ಬಸವರಾಜು, ಎ.ಅಜ್ಜಣ್ಣ, ತಿಪ್ಪೇಸ್ವಾಮಿ, ಗೌಡ್ರಚಿಕ್ಕಣ್ಣ, ಈರಣ್ಣ, ಸಣ್ಣಪ್ಪ, ಮಂಜಣ್ಣ, ಚಂದ್ರಣ್ಣ ಮುಂತಾದವರು ಉಪಸ್ಥಿತರಿದ್ದರು.

Share this article