ಕನ್ನಡಪ್ರಭ ವಾರ್ತೆ ಮದ್ದೂರು
ಸಾರ್ವತ್ರಿಕ ಮುಷ್ಕರಕ್ಕೆ ಬಂದ್‌ನಿಂದ ವಿನಾಯ್ತಿ ನೀಡಲಾಗಿದ್ದು, ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿ, ಬೆಳಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದ ಆವರಣದಿಂದ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೋಮನಹಳ್ಳಿ ಹಾಗೂ ಗೆಜ್ಜಲಗೆರೆಕೈಗಾರಿಕಾ ಪ್ರದೇಶದ ಕಾರ್ಮಿಕರು, ದಲಿತ, ರೈತ ಸಂಘಟನೆಗಳು, ಕೃಷಿ ಕೂಲಿಕಾರರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ಜನ ವಿರೋಧಿ ಮಸೂದೆಗಳಾದ ನಾಲ್ಕು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ರದ್ದುಗೊಳಿಸಬೇಕು, ವಿಬಿಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಿ ನರೇಗಾ ಯೋಜನೆ ಪುನರ್ ಸ್ಥಾಪಿಸಬೇಕು. ಭೂಸ್ವಾಧೀನ ಕಾಯ್ದೆ, ಎಪಿಎಂಸಿ ಜಾನುವಾರು ಸಂರಕ್ಷಣಾ ಕಾಯ್ದೆ, ಬೀಜ ಮಸೂದೆ, ವಿಮಾ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಮೆರವಣಿಗೆ ನಂತರ ಕಾರ್ಮಿಕ ಮುಖಂಡರು ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ರೈತ ಸಂಘದ ಅರುಣ್ ಕುಮಾರ್, ವಿಶ್ವನಾಥ, ಅಂಗನವಾಡಿ ನೌಕರರ ಸಂಘದ ಜಯಶೀಲ, ಸೋಮನಹಳ್ಳಿ ಪವರ್ ಸೆಲ್ ಕಾರ್ಖಾನೆಯ ನಾಗಮಣಿ, ಬೀದಿಬದಿ ವ್ಯಾಪಾರಿಗಳ ಸಂಘದ ಮಕ್ಮಲ್ ಪಾಶ ಇದ್ದರು.