ಸಚಿವ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Sep 13, 2026, 01:15 AM IST
ತರೀಕೆರೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳೀ ರವರ ಮೇಲೆ ಇ.ಡಿ.ಧಾಳಿ ಖಂಡಿಸಿ ಬೃಹತ್ ಪ್ರತಿಭಟನೆ | Kannada Prabha

ಸಾರಾಂಶ

ತರೀಕೆರೆಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ನಡೆಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತರೀಕೆರೆ ಬ್ಲಾಕ್ ಕಾಂಗ್ರೆಸ್ ನಿಂದ ಶನಿವಾರ ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಇಡಿಯನ್ನು ದುರ್ಬಳಕೆ : ಶಾಸಕ ಜಿ.ಎಚ್.ಶ್ರೀನಿವಾಸ್

ಕನ್ನಡಪ್ರಭ ವಾರ್ತೆ ತರೀಕೆರೆ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ನಡೆಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತರೀಕೆರೆ ಬ್ಲಾಕ್ ಕಾಂಗ್ರೆಸ್ ನಿಂದ ಶನಿವಾರ ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಬಿಜೆಪಿಯವರೆಲ್ಲಾ ಪ್ರಾಮಾಣಿಕರೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಇಡಿ ದಾಲಿ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಮಾಧಾನವಾಗಿದ್ದರು. ಒತ್ತಡ ತೆಗೆದುಕೊಳ್ಳಲಿಲ್ಲ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೆಡೆಸುತ್ತಿದ್ದಾ. ದೊಡ್ಡ ಶಕ್ತಿಯಾದ ಸಿದ್ದರಾಮಯ್ಯ ಅವರನ್ನು ಅನುಸರಿಸುತ್ತಿದ್ದಾರೆ. ರಾಜ್ಯ ದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಂಡಿತ ಬರುತ್ತದೆ, ಇದು ಸಾಂಕೇತಿಕ ಪ್ರತಿಭಟನೆ, ಇಡಿ ವಿರುದ್ದ ಬೃಹತ್‌ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್ ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕಾಂಗ್ರೆಸ್ ನವರ ಮೇಲೆ ಮಾತ್ರ ಇಡಿ ದಾಳಿ ನಡೆಸುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಒಳ್ಳೆಯ ವ್ಯಕ್ತಿ. ಅವರು ಇಡಿ ದಾಳಿಯಿಂದ ವಿಚಲಿತರಾಗಿಲ್ಲ. ಬಿಜೆಪಿಯವರು ಹಿಂದುಳಿದವರು, ಅಲ್ಪಸಂಖ್ಯಾತರು ಬೆಳೆಯಲು ಬಿಡುತ್ತಿಲ್ಲ. ಬಿಜೆಪಿ ಈ ಹುಚ್ಚಾಟ ನಿಲ್ಲಿಸಬೇಕು ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಹಿಂದ ಮತ್ತು ಭಗವಾನ್ ಬುದ್ದ ಮತ್ತು ಬಸವಣ್ಣ ಅವರ ತತ್ವ ಪಾಲಿಸುವಂತಹ ಪ್ರಾಮಾಣಿಕ ವ್ಯಕ್ತಿ, ಸರಳತೆ ಸಾಹುಕಾರರು ಇವರ ವಿರುದ್ಧ ದಾಳಿ ನಡೆಸಿರುವುದು ಖಂಡನೀಯ ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ, ಪುರಸಭೆ ಅಧ್ಯಕ್ಷ ವಸಂತಕುಮಾರ್, ಜಿಪಂ ಮಾಜಿ ಅಧ್ಯಕ್ಷ ಎಚ್.ವಿಶ್ವನಾಥ್, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪರ್ವಿನ್ ತಾಜ್, ಮುಖಂಡರಾದ ಪರಶುರಾಮ್, ಟಿ.ಎನ್.ಜಗದೀಶ್, ಅಣ್ಣಯ್ಯ, ಮಹಮದ್ ಇರ್ಷಾದ್, ನಾಗರತ್ನ, ಭಾಗ್ಯಲಕ್ಷ್ಮಿ ಮತ್ತಿತರರು ಮಾತನಾಡಿದರು.12ಕೆಟಿಆರ್.ಕೆ.6ಃ

ಸಚಿವ ಸತೀಶ್ ಜಾರಕಿಹೊಳಿ ರವರ ಮೇಲಿನ ಇಡಿ ದಾಳಿ ಖಂಡಿಸಿ ತರೀಕೆರೆಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್, ಪುರಸಭೆ ಅಧ್ಯಕ್ಷ ವಸಂತಕುಮಾರ್, ಎಚ್.ಯು.ಫಾರೂಕ್, ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಕಪಳ್ಳಿ ತಾಂಡಾದಲ್ಲಿ ಶ್ರಾವಣ ಮಾಸದ ಪೂಜೆ
ಕೋಡಿಮಠದಲ್ಲಿ ಶ್ರಾವಣ ಮಾಸದ ವಿಶೇಷ ಕಾರ್ಯಕ್ರಮಗಳಿಗೆ ತೆರೆ