ಪರಂಗೆ ಸಿಎಂ ಸ್ಥಾನ ನೀಡಲು ಆಗ್ರಹಿಸಿ ಬೃಹತ್‌ ಪ್ರತಿಭಟನೆ

KannadaprabhaNewsNetwork |  
Published : Dec 10, 2025, 12:30 AM IST
ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನಾ ರ್‍ಯಾಲಿ | Kannada Prabha

ಸಾರಾಂಶ

ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್‍ಯಾಲಿ ಪಟ್ಟಣದಲ್ಲಿ ನಡೆಸಿದರು

ಕನ್ನಡಪ್ರಭ ವಾರ್ತೆ ಕೊರಟಗೆರೆ

ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್‍ಯಾಲಿ ಪಟ್ಟಣದಲ್ಲಿ ನಡೆಸಿದರು. ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್‌ಸ್ಟಾಂಡ್ ವೃತ್ತದವರೆಗೆ ಘೊಷನೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. ಯುವಕರು ಬೈಕ್ ರ್‍ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರರವರೇ ಅಗಬೇಕು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆದ್ಯತೆ ಡಾ.ಜಿ.ಪರಮೇಶ್ವರ್‌ರವರಿಗೆ ನೀಡಬೇಕೆಂದು ಘೋಷಣೆ ಕೊಗಿದರು. ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ. ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ ನಾಯಕ ಎಂಬುವ ಕಾರಣಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೊರಗಿಡಲಾಗಿದೆ. ಇದು ಸಂವಿಧಾನಕ್ಕೆ ಮಾಡಿರುವ ಮೋಸವಾಗಿದ್ದು ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಮಠಾಧೀಶರುಗಳು ಆಗ್ರಹಿಸಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೂ ದಲಿತರು ಮುಖ್ಯಮಂತ್ರಿಯಾಗಿಲ್ಲ ಡಾ.ಜಿ.ಪರಮೇಶ್ವರ ರವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದಾರೆ. ಅವರ ಸೇವಾ ಮನೋಭಾವ, ಸಜ್ಜನಿಕೆ, ಉತ್ತಮ ರಾಜಕಾರಣಿ ಎನ್ನುವ ಅಭಿಪ್ರಾಯದೊಂದಿಗೆ ದೆಹಲಿಯ ವರಿಷ್ಠರು ಅವರನ್ನು ದಲಿತ ಮುಖ್ಯಮಂತ್ರಿ ಎನ್ನುವ ನ್ಯಾಯದೊಂದಿಗೆ ಇವರನ್ನು ಪರಿಗಣಿಸಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಅಠವಿ ಮಠದ ಶಿವಲಿಂಗಮಹಾಸ್ವಾಮೀಜಿ, ಆದಿಜಾಂಬವ ಮಠದ ಷಡಕ್ಷರಿ ಮಹಾಮುನಿಸ್ವಾಮೀಜಿ, ಬಸವಮಹಾಲಿಂಗಸ್ವಾಮೀಜಿ, ನವಗ್ರಹ ಲಕ್ಷ್ಮೀಶ್ವರಿ ಮಠದ ನಾಗೇಂದ್ರಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮಂಜುಳಾ, ಕವಿತಾ, ವೆಂಕಟೇಶ್, ಕೆಪಿಸಿಸಿ ಸದಸ್ಯರುಗಳಾದ ಪ್ರಸನ್ನಕುಮಾರ್, ಎ.ಡಿ.ಬಲರಾಮಯ್ಯ, ರಜಾಕ್‌ಸಾಬ್ ಮಹಾಲಿಂಗಪ್ಪ, ಬೂಚನಹಳ್ಳಿ ಬಿ.ಎಸ್.ದಿನೇಶ್, ಓಬಳರಾಜು, ಕೆ.ವಿ.ಮಂಜುನಾಥ್, ಗಣೇಶ್, ಕೆಂಪಣ್ಣ, ವಿನಯ್‌ಕುಮಾರ್, ಗೊಂದಿಹಳ್ಳಿ ರಂಗರಾಜು, ಭೈರೇಶ್, ಕಾರ್ ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ