ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಗದಗದಲ್ಲಿ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Aug 02, 2025, 12:00 AM IST
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಪರಿಶಿಷ್ಟ ಜಾತಿ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಗದಗ: ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಪರಿಶಿಷ್ಟ ಜಾತಿ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದರೂ ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿರುವುದಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.​ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.​ಪರಿಶಿಷ್ಟ ಜಾತಿಗಳ ಒಳಮೀಸಲಾತಿಯು ಕಳೆದ 35 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಸುಪ್ರೀಂ ಕೋರ್ಟ್ 1-08-2024ರಂದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ಆದೇಶಿಸಿದೆ. ಆದರೆ, ಕರ್ನಾಟಕ ಸರ್ಕಾರ ಈ ಆದೇಶವನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದೆ. ಈ ವಿಳಂಬದಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಮತ್ತು ಮಹಿಳೆಯರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.​ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ತಕ್ಷಣವೇ ಒಳಮೀಸಲಾತಿ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸಿದೆ. ಇದು ಮಾದಿಗ ಮತ್ತು ಇತರ 29 ಉಪಜಾತಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.​​ನಾಗಮೋಹನ್ ದಾಸ ಆಯೋಗಕ್ಕೆ ಸರ್ಕಾರ ಅಗತ್ಯ ಮಾಹಿತಿ ನೀಡುತ್ತಿಲ್ಲ. ಇನ್ನು ಆಗಸ್ಟ್ 11ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಅಧಿವೇಶನದಲ್ಲಿ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ, ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ಈ ಹೋರಾಟದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.​ಈ ವೇಳೆ ಉಡಚಪ್ಪ ಹಳ್ಳಿಕೇರಿ, ಜಗದೀಶ ಕಳಸಾಪುರ, ವಿ.ಜಿ.ಲಕ್ಷ್ಮಣ, ಬಸವರಾಜ ಮಕಳ್ಳಿ ಸೇರಿದಂತೆ ಮುಖಂಡರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...