ಎಸ್ಟಿ ಮೀಸಲಾತಿ ಹೆಚ್ಚಿಸದಿದ್ದರೆ ಜನಾಂದೋಲನ: ಶ್ರೀನಿವಾಸನಾಯಕ

KannadaprabhaNewsNetwork |  
Published : Oct 16, 2026, 01:45 AM IST
15ಸಿಎಚ್‌ಎನ್‌56ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಚಾಮರಾಜನಗರ ಜಿಲ್ಲಾ ನಾಯಕ ಜನಾಂಗದ ಹೋರಾಟ ಸಮಿತಿಯ ಮುಖಂಡ  ಪು. ಶ್ರೀನಿವಾಸನಾಯಕ ಅವರು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯಾದ್ಯಂತ ದೊಡ್ಡ ಜನಾಂದೋಲನ ರೂಪಿಸಬೇಕಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾ ನಾಯಕ ಜನಾಂಗದ ಹೋರಾಟ ಸಮಿತಿ ಮುಖಂಡ ಪು. ಶ್ರೀನಿವಾಸನಾಯಕ ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಜನಸಂಖ್ಯೆಗೆ ಅನುಗುಣ ಹೆಚ್ಚಳಕ್ಕೆ ಆಗ್ರಹ

-------------ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನ ರೂಪಿಸುವ ಎಚ್ಚರಿಕ

ರಾಜ್ಯ ಸರ್ಕಾರ ನೇಮಿಸಿದ ವಕೀಲರು ಸರಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದ್ದರೆ ತಡೆ ತೆರವಾಗುತ್ತಿತ್ತು

------------ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯಾದ್ಯಂತ ದೊಡ್ಡ ಜನಾಂದೋಲನ ರೂಪಿಸಬೇಕಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾ ನಾಯಕ ಜನಾಂಗದ ಹೋರಾಟ ಸಮಿತಿ ಮುಖಂಡ ಪು. ಶ್ರೀನಿವಾಸನಾಯಕ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮುದಾಯದ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು 257ಕ್ಕೂ ಹೆಚ್ಚು ದಿನಗಳ ಕಾಲ ಅಹೋರಾತ್ರಿ ಹೋರಾಟ ಮಾಡಿದ ಫಲವಾಗಿ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿತು. ಆದರೆ ವ್ಯಕ್ತಿಯೊಬ್ಬ ತಡೆಯಾಜ್ಞೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ 2022ರಲ್ಲಿ ಬೊಮ್ಮಾಯಿ ಅವರ ಸರ್ಕಾರ ಜಾರಿಗೆ ತಂದಿದ್ದ ಎಸ್‌ಸಿ ಮೀಸಲಾತಿಯನ್ನು ಶೇ. 15 ರಿಂದ 17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಹೆಚ್ಚಿಸುವ ನಿರ್ಧಾರವನ್ನು ರದ್ದುಗೊಳಿಸಿದೆ. ರಾಜ್ಯ ಸರ್ಕಾರ ನೇಮಿಸಿದ ವಕೀಲರು ಸರಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಜನಾಂಗಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಅಲ್ಲದೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸದಿರುವುದು ಅತ್ಯಂತ ಖಂಡನೀಯ. ಯಾವುದೇ ಸರ್ಕಾರಗಳು ನಮ್ಮ ಸಮುದಾಯಗಳ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದ ಅನೇಕ ರಾಜ್ಯಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಮೀಸಲಾತಿ ಜಾರಿ ಮಾಡಲಾಗಿದೆ. ಕೇಂದ್ರದಲ್ಲೂ ಶೇ.50 ಕ್ಕಿಂತ ಹೆಚ್ಚಿನ ಮೀಸಲಾತಿ ಇದೆ. ತಮಿಳುನಾಡಿನಲ್ಲಿ ಶೇ. 69ರಷ್ಟು. ಬಿಹಾರ ಶೇ.65 ರಷ್ಟು, ರಾಜಸ್ಥಾನ ಶೇ. 64 ರಷ್ಟು, ಆಂಧ್ರಪ್ರದೇಶ ಶೇ. 60 ರಷ್ಟು, ಸಿಕ್ಕಿಂ ನಲ್ಲಿ 60ರಿಂದ 79 ರಷ್ಟು ಹೀಗೆ ಇನ್ನೂ ಅನೇಕ ರಾಜ್ಯಗಳಲ್ಲಿ ಶೇ. 50ಕ್ಕಿಂತ ಹೆಚ್ಚು ಮೀಸಲಾತಿ ಜಾರಿಯಲ್ಲಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಶೇ.50 ಮೀಸಲಾತಿ ಏರಿಕೆಯಾಗದಂತೆ ಮಾಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಹೀಗಾಗಿ ರಾಜ್ಯದಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಸಮುದಾಯ ಸಮುದಾಯದ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಮಾಡಲಾಗುವುದು ಎಂದು ಎಚ್ಚರಿಸಿದರು.

ಚಾಮರಾಜನಗರ ಜಿಲ್ಲಾ ನಾಯಕ ಜನಾಂಗದ ಹೋರಾಟ ಸಮಿತಿ ಮುಖಂಡ ಎಂ.ರಾಮಚಂದ್ರ ಮಾತನಾಡಿ, ಎಲ್ಲ ಸರ್ಕಾರಗಳು, ಪಕ್ಷಗಳಿಗೆ ಎಸ್‌ಸಿ, ಎಸ್‌ಟಿ ಸಮುದಾಯಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬರಿ ಮತಬ್ಯಾಂಕ್ ಆಗಿ ಮಾಡಿಕೊಂಡಿವೆ. ಸಾಮಾಜಿಕ ನ್ಯಾಯ ಕೊಡುವ ಪರಿಕಲ್ಪನೆ ಯಾರಿಗೂ ಇಲ್ಲ. ನಮಗೆ ನ್ಯಾಯಾಲಯ, ನ್ಯಾಯಾಧೀಶರ ಬಗ್ಗೆ ಗೌರವ ಇದೆ. ಆದರೆ ಮೀಸಲಾತಿ ಹೆಚ್ಚಿಸುವ ನಿರ್ಧಾರವನ್ನು ನ್ಯಾಯಾಲಯ ರದ್ದುಪಡಿಸಿರುವುದು ಸಮುದಾಯಗಳಿಗೆ ಕೊಡಲಿ ಪೆಟ್ಟು ಬಿದ್ದಾಂತಾಗಿದೆ. ನ್ಯಾಯಾಲಯದ ತೀರ್ಪು ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿ ಕೇಂದ್ರ, ರಾಜ್ಯ ಸರ್ಕಾರ ನಮಗಾಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ನಾಯಕ ಸಮುದಾಯದ ಮುಖಂಡ ಮಲ್ಲೇಶ್ ನಾಯಕ, ಕಂಡಕ್ಟರ್ ಚಾ.ಸಿ.ಸೋಮನಾಯಕ, ಸುರೇಶ್‌ನಾಯಕ ಇದ್ದರು.----------------

15ಸಿಎಚ್‌ಎನ್‌56

ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಚಾಮರಾಜನಗರ ಜಿಲ್ಲಾ ನಾಯಕ ಜನಾಂಗದ ಹೋರಾಟ ಸಮಿತಿಯ ಮುಖಂಡ ಪು. ಶ್ರೀನಿವಾಸನಾಯಕ ಅವರು ಸುದ್ದಿಗೋಷ್ಠಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಆಪರೇಷನ್ ಸಿಎಂ ಮಾಡಿಸಿದ್ದಾರೆ ಎಂಬ ಎಚ್ಡಿಕೆ ಹೇಳಿಕೆಯಲ್ಲಿ ಆಧಾರವಿಲ್ಲ: ಕೆ.ಎಂ.ಉದಯ್
ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದ ದೊಡ್ಡಅರಸಿನಕೆರೆ ಗ್ರಾಮ: ಶಾಸಕ ಉದಯ್