ಧಾರವಾಡದಲ್ಲಿ ರೈತರಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ

KannadaprabhaNewsNetwork | Published : Nov 4, 2023 12:30 AM

ಸಾರಾಂಶ

ರೈತರಿಗೆ ನ್ಯಾಯಯುತ ಬರ ಪರಿಹಾರ ನೀಡಬೇಕು, ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಇನ್ನಿತರ ರೈತರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಧಾರವಾಡ ರೈತರಿಗೆ ನ್ಯಾಯಯುತ ಬರ ಪರಿಹಾರ ನೀಡಬೇಕು, ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಇನ್ನಿತರ ರೈತರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಕಡಪಾ ಮೈದಾನದಿಂದ ಆರಂಭಗೊಂಡ ಮೆರವಣಿಗೆ ಧಾರವಾಡ ವಿವೇಕಾನಂದ ವೃತ್ತ, ಜುಬಲಿ ವೃತ್ತ ಮೂಲಕ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಲುಪಿತು. ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸಬೇಕು. ಕೂಡಲೇ ಸರ್ಕಾರ ಬರಗಾಲ ಪರಿಹಾರ ಬಿಡುಗಡೆ ಮಾಡಬೇಕು. ಪ್ರತಿ ದಿನ ಒಂಭತ್ತು ಗಂಟೆಗಳ ಕಾಲ ರೈತರ ಪಂಪ್‌ ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಬೇಕು. ಇದರ ಜೊತೆಗೆ ರೈತರ ಬೆಳೆ ಸಾಲವನ್ನು ಸರ್ಕಾರ ಕೂಡಲೇ ಮನ್ನಾ ಮಾಡಬೇಕು ಎಂದು ರೈತರು ಒತ್ತಾಯಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗಂಗಾಧರ ಕಾಸರಗಟ್ಟ ಸೇರಿದಂತೆ ಸಂಘದ ಸದಸ್ಯರು ಇದ್ದರು.

Share this article