)
ಕನ್ನಡಪ್ರಭ ವಾರ್ತೆ ಬೀದರ್
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಸಂವಿಧಾನವನ್ನು 1949ರ ನ. 26ರಂದು ಅಂಗೀಕರಿಸಲಾಯಿತು. ಸಂವಿಧಾನ ಅಂಗೀಕಾರಗೊಂಡು 77 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಂವಿಧಾನ ದಿನಾಚರಣೆಯನ್ನು ಬೃಹತ್ ಜನಾಂದೋಲನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
2008ರಿಂದ ಕರ್ನಾಟಕ ದಲಿತ ರಕ್ಷಣಾ ವೇದಿಕೆಯು ನಿರಂತರವಾಗಿ ಸಂವಿಧಾನ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಸುಮಾರು 5ರಿಂದ 10 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದರು.ಸಂವಿಧಾನ ರಕ್ಷಣೆ ಎಲ್ಲರ ಹೊಣೆ: ಸಂವಿಧಾನ ಸಂರಕ್ಷಣಾ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ಮಾತನಾಡಿ, ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿದೆ. ಡಾ. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ಯಾವುದೇ ಒಂದು ಜಾತಿ, ಧರ್ಮ ಅಥವಾ ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ಮೂಲಭೂತ ಹಕ್ಕುಗಳನ್ನು ಕಲ್ಪಿಸಿದೆ. ಇಂತಹ ಸಂವಿಧಾನದ ಆಶಯಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಪ್ರತಿಪಾದಿಸಿದರು.
ರಾಷ್ಟ್ರಮಟ್ಟದ ಗಣ್ಯರಿಗೆ ಆಹ್ವಾನ: ಸಮಾವೇಶದಲ್ಲಿ ಸಿಜಿಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ನೇಹಾ ಬೋರಾ, ನೇಹಾ ಸಿಂಗ್ ರಾಠೋಡ ಸೇರಿದಂತೆ ರಾಷ್ಟ್ರಮಟ್ಟದ ಹೋರಾಟಗಾರರು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಂದ ಕಾರ್ಯಕ್ರಮ ಉದ್ಘಾಟಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸೂರ್ಯವಂಶಿ ವೆಂಕಟೇಶ್, ಗೌರವಾಧ್ಯಕ್ಷ ದೇವೇಂದ್ರ ರಾಮಚಂದ್ರ ಸೂರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರನ್ನು ಆಹ್ವಾನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರದೀಪ ನಾಟೇಕರ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಮಾಜ ನಿರ್ಮಾಣವಾಗಬೇಕಿದೆ ಎಂದರು.