ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ನಾವು ಹೋರಾಟ ಮಾಡಿದರೆ ಸಭೆ ಮಾಡಿ ಏನೇನೋ ಭರವಸೆ ಕೊಡುತ್ತಾರೆ ವಿನಃ ಒಂದು ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಈ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.
ಜ. ೨೪ರ ಮಂಗಳವಾರ ಬೆಳಗ್ಗೆ ೮ ಗಂಟೆಗೆ ಮಲೆಮಹದೇಶ್ವರ ಬೆಟ್ಟದ ದೇವಸ್ಥಾನದ ಮುಂಭಾಗದಿಂದ ಹೊರಡಲಿರುವ ನಾಲ್ಕು ದಿನಗಳ ಈ ಪಾದಯಾತ್ರೆಗೆ ಸಾಲೂರು ಬೃಹನ್ಮಠದ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು, ರೈತ ಸಂಘದ ಪ್ರಮುಖರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ, ಸಹಜ ಕೃಷಿ ವಿಜ್ಞಾನಿ ಡಾ. ಮಂಜುನಾಥ ಎಚ್., ಇನ್ನಿತರ ರೈತ ಮುಖಂಡರು ಚಾಲನೆ ನೀಡಲಿದ್ದಾರೆ ಎಂದರು.ಜ. ೨೬ರಂದು ಬೆಳಗ್ಗೆ ೮ ಗಂಟೆಗೆ ಚಾಮರಾಜನಗರದ ನಡೆಯುವ ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾಹೋರಣ ಸ್ಥಳಕ್ಕೆ ಬಂದು ಸೇರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ನಮ್ಮ ಮನವಿಯನ್ನು ಸಲ್ಲಿಸಲಾಗುವುದು ಎಂದರು
ಪತ್ರಿಕಾಗೋಷ್ಠಿಯಲ್ಲಿ ಬೆಳ್ಳಶೆಟ್ಟಿ, ಚಂಗಡಿ ಕರಿಯಪ್ಪ, ನಟರಾಜು, ಮಣಿಕಂಠ, ಅಂಬಳೆ ಶಿವಕುಮಾರ್ ಇದ್ದರು.
ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಸಮಸ್ಯೆ ಬಗೆಹರಿದಿಲ್ಲ, ಮೂಲತಳಿಗಳನ್ನು ಉಳಿಸಿಕೊಂಡು ಬೆಳೆಯುತ್ತಾರೆ. ಆದರೆ, ಹೆಚ್ಚಿನ ಬೆಲೆ ನೀಡಿ ಖರೀದಿಸಲು ಮುಂದಾಗುತ್ತಿಲ್ಲ. ವನ್ಯಜೀವಿ ಸಂಘರ್ಷ ತಪ್ಪಿಲ್ಲ, ಹಂದಿ ದಾಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದಿಂದ ಬೆಳೆ ಹಾನಿಗೆ ಸರಿಯಾದ ರೀತಿ ಪರಿಹಾರ ಸಿಗುತ್ತಿಲ್ಲ. ಕಾರ್ಬನ್ ಕ್ರಿಡಿಟ್ ರೈತನಿಗೆ ಸಿಗಬೇಕು.
ಜಿಲ್ಲೆಯಲ್ಲಿ ನಡೆಯುವ ಕಪ್ಪು ಮತ್ತು ಬಿಳಿಕಲ್ಲು ದಂದೆ ಅಕ್ರಮವಾಗಿ ನಡೆಯುತ್ತಿದ್ದು, ಕೆಲವು ಗಣಿ ಉದ್ಯಮಿಗಳ ಅನುಕೂಲಕ್ಕಾಗಿ ಗೋಮಾಳಗಳನ್ನು ಸರ್ಕಾರ ನೀಡಿದೆ. ಮಿತಿ ಮೀರಿ ಕಲ್ಲು ಸಾಗಾಣೆ ಮಾಡುತ್ತಿರುವುದರಿಂ ರಸ್ತೆಗಳೆಲ್ಲಾ ಹಾಳಾಗುತ್ತಿವೆ ಇದರ ಕ್ರಮಕೈಗೊಳ್ಳಬೇಕು,
ಚಂಗಡಿ ಗ್ರಾಮ ಸ್ಥಳಾಂತರ ಮಾಡಲು ಅನುದಾನ ಬಿಡುಗಡೆಯಾಗಿಲ್ಲ, ಮಳೆಯಾಶ್ರಿತ ಕೃಷಿ ಪ್ರದೇಶಕ್ಕೆ ವಿಶೇಷ ಮಹತ್ವವನ್ನು ಕೊಟ್ಟು ಘೋಷಿತ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಕೊಟ್ಟು ಫಸಲು ಸಂಗ್ರಹಣೆ ಮಾಡುವ ಕೆಲಸದ ನಿರ್ವಹಣೆ ಮಾಡಬೇಕು. ಬರದಿಂದ ಬಾಧಿತರಾಗಿರುವ ರೈತರಿಗೆ ತುರ್ತಾಗಿ ಎಕರೆಗೆ ೨೫೦೦೦ ರು. ಅನುದಾನ ಬಿಡುಗಡೆ ಗೊಳಿಸಬೇಕು ಎಂದು ಆಗ್ರಹಿಸಿದರು,