ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ಆದರಿಂದ ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಬೇಕು
ಕನನಡಪ್ರಭ ವಾರ್ತೆ ಬಂಗಾರಪೇಟೆ
ಗಡಿ ಭಾಗದ ಶಾಲೆಯಲ್ಲಿ ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ಬೂದಿಕೋಟೆಯ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ತಾಲೂಕಿನ ಬೂದಿಕೋಟೆಯ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ಬೂದಿಕೋಟೆ ಹೋಬಳಿಯ ಗಡಿಭಾಗದಲ್ಲಿ ಯಾವುದೇ ಖಾಸಗಿ ಶಾಲೆ ಇರಲಿಲ್ಲ. ಸಂಸ್ಥಾಪಕರಾದ ನಾರಾಯಣಶೆಟ್ಟಿ ರವರು ಈ ಭಾಗದಲ್ಲಿ ಖಾಸಗಿ ಶಾಲೆಯನ್ನು ತೆರೆದು ಅನೇಕ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿ ಉತ್ತಮ ಭವಿಷ್ಯವನ್ನು ರೂಪಿಸಿದ್ದಾರೆ ಎಂದು ಹೇಳಿದರು.
ಪುಸ್ತಕದ ಹುಳುವಾಗದಿರಿ
ರಾಮಕೃಷ್ಣ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ನರೇಶ್ ಮಾತನಾಡಿ ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಪ್ರಯೋಜನ ವಿಲ್ಲ .ಜ್ಞಾನಕ್ಕೂ ವಿಸ್ತರಿಸಿದಾಗ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರುತ್ತದೆ.
ಕ್ರಿಯಾತ್ಮಕ ಮನೋಭಾವ ಬೆಳೆಸಿ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ಆದರಿಂದ ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಮಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಕಲೈವಾಣಿ,ಕೀರ್ತಿ ಪ್ರಾಂಶುಪಾಲರದ ರಾಜ್ ಕುಮಾರ್, ಮುಖಂಡರಾದ ಚಂದ್ರಶೇಖರ್, ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಮೊದಲಾದವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.